ಸರ್ಕಾರ ರಚಿಸುವಂತೆ ದೇವೇಂದ್ರ ಫಡ್ನವಿಸ್ ಗೆ ಆಹ್ವಾನ ನೀಡಿದ ಮಹಾ ರಾಜ್ಯಪಾಲರು

ರಾಜ್ಯದಲ್ಲಿ ನೂತನ ಸರ್ಕಾರ ರಚಿಸುವಂತೆ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರು ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ದೇವೇಂದ್ರ ಫಡ್ನವಿಸ್ ಅವರು ಶನಿವಾರ ಆಹ್ವಾನ ನೀಡಿದ್ದಾರೆ.
ದೇವೇಂದ್ರ ಫಡ್ನವಿಸ್
ದೇವೇಂದ್ರ ಫಡ್ನವಿಸ್

ಮುಂಬೈ: ರಾಜ್ಯದಲ್ಲಿ ನೂತನ ಸರ್ಕಾರ ರಚಿಸುವಂತೆ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರು ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ದೇವೇಂದ್ರ ಫಡ್ನವಿಸ್ ಅವರು ಶನಿವಾರ ಆಹ್ವಾನ ನೀಡಿದ್ದಾರೆ.

ಏಕೈಕ ದೊಡ್ಡ ಪಕ್ಷ ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಅವರಿಗೆ ಸರ್ಕಾರ ರಚಿಸುವಂತೆ ಮಹಾರಾಷ್ಟ್ರ ರಾಜ್ಯಪಾಲರು ಆಹ್ವಾನ ನೀಡಿರುವುದಾಗಿ ರಾಜಭವನ ಪ್ರಕಟಣೆಯಲ್ಲಿ ತಿಳಿಸಿದೆ.

ಕಳೆದ ಅಕ್ಟೋಬರ್ 21ರಂದು ಮಹಾರಾಷ್ಟ್ರ ವಿಧಾನಸಭೆಗೆ ಚುನಾವಣೆ ನಡೆದಿತ್ತು. ಅಕ್ಟೋಬರ್ 24ರಂದು ಫಲಿತಾಂಶ ಪ್ರಕಟಗೊಂಡಿದ್ದು, 15 ದಿನ ಕಳೆದರೂ ಯಾವುದೇ ಪಕ್ಷ ನೂತನ ಸರ್ಕಾರ ರಚನೆಗೆ ಹಕ್ಕು ಮಂಡಿಸಲು ಮುಂದಾಗಲಿಲ್ಲ.

ಈ ಮಧ್ಯೆ ಹಾಲಿ ವಿಧಾನಸಭೆಯ ಅವಧಿ ಇಂದು ಅಂತ್ಯಗೊಂಡಿದ್ದು, ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ದೇವೇಂದ್ರ ಫಡ್ನವಿಸ್ ಅವರು ಸರ್ಕಾರ ರಚನೆಗೆ ಹಕ್ಕು ಮಂಡಿಸುವ ಬದಲು ನಿನ್ನೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈಗ ಸ್ವಸಾಮರ್ಥ್ಯದ ಮೇಲೆ ಸರ್ಕಾರ ರಚನೆ ಮಾಡುವಂತೆ ರಾಜ್ಯಪಾಲರು ಬಿಜೆಪಿ ಆಹ್ವಾನ ನೀಡಿದ್ದು, ಸರ್ಕಾರ ರಚನೆ ಬಳಿಕ ಬಹುಮತ ಸಾಬೀತು ಪಡಿಸಬೇಕಾಗುತ್ತದೆ.

ಬಿಜೆಪಿ ಮತ್ತು ಶಿವಸೇನೆ ಮೈತ್ರಿಯೂ ಸರ್ಕಾರ ರಚನೆಗೆ ಬೇಕಾಗಿರುವ ಬಹುಮತವನ್ನು ಪಡೆದಿದ್ದರೂ ಶಿವಸೇನೆ ಮುಖ್ಯಮಂತ್ರಿ ಸ್ಥಾನ ಹಂಚಿಕೆಯ ಬೇಡಿಕೆ ಇಟ್ಟಿದೆ. ಆದರೆ, ಸಿಎಂ ಸ್ಥಾನವನ್ನು ಸುತಾರಾಂ ಬಿಟ್ಟುಕೊಡುವುದಿಲ್ಲ ಎಂದು ಬಿಜೆಪಿ ಪಟ್ಟುಹಿಡಿದಿರುವುದರಿಂದ ಸರ್ಕಾರ ರಚನೆ ಬಿಕ್ಕಟ್ಟು ಮುಂದುವರೆದಿದೆ. ಇನ್ನು ಕಾಂಗ್ರೆಸ್-ಎನ್​ಸಿಪಿ ಮೈತ್ರಿ ಕೂಡ ಕಾದು ನೋಡುವ ತಂತ್ರಕ್ಕೆ ಮೊರೆಹೋಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com