ಅಯೋಧ್ಯೆ ತೀರ್ಪು ಹಿನ್ನೆಲೆ ಶಾಂತಿ, ಸಾಮರಸ್ಯ ಕಾಪಾಡಲು ಪ್ರಧಾನಿ ಮೋದಿ ಮನವಿ

ಅಯೋಧ್ಯೆ ಭೂ ವಿವಾದಕ್ಕೆ ಸಂಬಂಧಿಸಿದ ಸುಪ್ರೀಂಕೋರ್ಟ್‌ನಲ್ಲಿ ನಾಳೆ ತೀರ್ಪ ಪ್ರಕಟಗೊಳ್ಳುವ ಹಿನ್ನೆಲೆಯಲ್ಲಿ ದೇಶವಾಸಿಗಳು ಶಾಂತಿ ಕಾಪಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ.

Published: 09th November 2019 01:16 AM  |   Last Updated: 09th November 2019 01:16 AM   |  A+A-


Narendra Modi

ನರೇಂದ್ರ ಮೋದಿ

Posted By : Vishwanath S
Source : UNI

ನವದೆಹಲಿ: ಅಯೋಧ್ಯೆ ಭೂ ವಿವಾದಕ್ಕೆ ಸಂಬಂಧಿಸಿದ ಸುಪ್ರೀಂಕೋರ್ಟ್‌ನಲ್ಲಿ ನಾಳೆ ತೀರ್ಪ ಪ್ರಕಟಗೊಳ್ಳುವ ಹಿನ್ನೆಲೆಯಲ್ಲಿ ದೇಶವಾಸಿಗಳು ಶಾಂತಿ ಕಾಪಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ.

ಅಯೋಧ್ಯೆಯ ಕುರಿತು ಸುಪ್ರೀಂ ಕೋರ್ಟ್‌ನಿಂದ ಯಾವುದೇ ತೀರ್ಪು ಬರಲಿ, ಅದು ಯಾರಿಗೂ ಗೆಲುವು ಅಥವಾ ಸೋಲು ಆಗುವುದಿಲ್ಲ. ಈ ನಿರ್ಧಾರವು ಭಾರತದ ಶಾಂತಿ, ಐಕ್ಯತೆ ಮತ್ತು ಸದ್ಭಾವನೆಯ ಶ್ರೇಷ್ಠ ಸಂಪ್ರದಾಯವನ್ನು ಮತ್ತಷ್ಟು ಬಲಪಡಿಸಬೇಕು ಎಂಬುದು ನಮ್ಮೆಲ್ಲರ ಆದ್ಯತೆಯಾಗಿರಬೇಕು ಎಂಬುದು ದೇಶವಾಸಿಗಳಿಗೆ ನನ್ನ ಮನವಿ ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.  

ದೇಶದ ನ್ಯಾಯಾಂಗದ ಗೌರವವನ್ನು ಉಳಿಸಿಕೊಂಡು, ಸಾಮಾಜಿಕ ಸಂಘಟನೆಗಳು, ಸಾಮಾಜಿಕ-ಸಾಂಸ್ಕೃತಿಕ ಸಂಸ್ಥೆಗಳು, ಈ ಹಿಂದೆ ಸಾಮರಸ್ಯ ಮತ್ತು ಸಕಾರಾತ್ಮಕ ವಾತಾವರಣವನ್ನು ಸೃಷ್ಟಿಸಲು ಪ್ರಯತ್ನಿಸಿದ ಎಲ್ಲ ಪಕ್ಷಗಳು ಸ್ವಾಗತಾರ್ಹ. ನ್ಯಾಯಾಲಯದ ತೀರ್ಪಿನ ನಂತರವೂ ನಾವೆಲ್ಲರೂ ಒಟ್ಟಾಗಿ ಸಾಮರಸ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಪ್ರಧಾನಿ ತಿಳಿಸಿದ್ದಾರೆ.

Stay up to date on all the latest ರಾಷ್ಟ್ರೀಯ news with The Kannadaprabha App. Download now
Poll
school

ಶಾಲೆಗಳನ್ನು ತೆರೆಯಲು ಸರ್ಕಾರ ಅನುಮತಿಸಿದರೆ ನಿಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ನೀವು ಸಿದ್ಧರಿದ್ದೀರಾ?


Result
ಹೌದು
ಇಲ್ಲ
ಇನ್ನೂ ನಿರ್ಧರಿಸಿಲ್ಲ
facebook twitter whatsapp