ಸುಪ್ರೀಂ ತೀರ್ಪನ್ನು ಗೌರವಿಸುತ್ತೇವೆ:ಆದರೆ, ತೃಪ್ತಿ ಇಲ್ಲ-ಸುನ್ನಿ ವಕ್ಫ್ ಬೋರ್ಡ್ ಪರ ವಕೀಲ  

 ಅಯೋಧ್ಯೆ ಭೂ ವಿವಾದದ ಬಗ್ಗೆ ಸುಪ್ರೀಂಕೋರ್ಟಿನ ಸಾಂವಿಧಾನಿಕ ಪೀಠ ನೀಡಿರುವ ತೀರ್ಪನ್ನು ಗೌರವಿಸುತ್ತೇವೆ. ಆದರೆ, ತೃಪ್ತಿ ಇಲ್ಲ ಎಂದು  ಸುನ್ನಿ ವಕ್ಫ್ ಬೋರ್ಡ್ ಪರ ವಕೀಲ ಜಾಫರ್ ಯಾಬ್ ಜಿಲಾನಿ ಹೇಳಿದ್ದಾರೆ. 
ಜಿಲಾನಿ
ಜಿಲಾನಿ

ನವದೆಹಲಿ:  ಅಯೋಧ್ಯೆ ಭೂ ವಿವಾದದ ಬಗ್ಗೆ ಸುಪ್ರೀಂಕೋರ್ಟಿನ ಸಾಂವಿಧಾನಿಕ ಪೀಠ ನೀಡಿರುವ ತೀರ್ಪನ್ನು ಗೌರವಿಸುತ್ತೇವೆ. ಆದರೆ, ತೃಪ್ತಿ ಇಲ್ಲ ಎಂದು  ಸುನ್ನಿ ವಕ್ಫ್ ಬೋರ್ಡ್ ಪರ ವಕೀಲ ಜಾಫರ್ ಯಾಬ್ ಜಿಲಾನಿ ಹೇಳಿದ್ದಾರೆ. 

ತೀರ್ಪು ಹೊರಬಂದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ಮಸೀದಿ ನಿರ್ಮಾಣಕ್ಕೆ ಪ್ರತ್ಯೇಕ ಜಾಗ ನೀಡಿಕೆ ಸರಿಯಲ್ಲ. ತೀರ್ಪಿನ ಕೆಲ ಸಂಗತಿಗಳನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ತೀರ್ಪನ್ನು ಪರಿಶೀಲಿಸಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ ಎಂದು ತಿಳಿಸಿದರು. 

ನಮ್ಮ ಜಾಗವನ್ನು ಬೇರೆಯವರಿಗೆ ನೀಡಲಾಗಿದೆ. ತೀರ್ಪು ಮರು ಪರಿಶೀಲನೆ ಕೋರಿ ಮನವಿ ಸಲಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com