ಅಯೋಧ್ಯೆಯ ತೀರ್ಪು ನೀಡಿದ ನ್ಯಾಯಾಧೀಶರ ಭದ್ರತೆ ಹೆಚ್ಚಳ

ಅತಿ ಮಹತ್ವದ ಸೂಕ್ಷ್ಮ ವಿಚಾರವಾದ ಅಯೋಧ್ಯೆಯ ತೀರ್ಪು ನೀಡಿದ ಐವರು ನ್ಯಾಯಾಧೀಶರ ಭದ್ರತೆ ಹೆಚ್ಚಿಸಲಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಅತಿ ಮಹತ್ವದ ಸೂಕ್ಷ್ಮ ವಿಚಾರವಾದ ಅಯೋಧ್ಯೆಯ ತೀರ್ಪು ನೀಡಿದ ಐವರು ನ್ಯಾಯಾಧೀಶರ ಭದ್ರತೆ ಹೆಚ್ಚಿಸಲಾಗಿದೆ.

ನ್ಯಾಯಾಧೀಶರ ಭದ್ರತೆಗೆ ಹೆಚ್ಚುವರಿ ಸಿಬ್ಬಂದಿ ನಿಯೋಜಿಸಲಾಗಿದೆ. ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗಾಯ್, ಮುಂದಿನ ಮುಖ್ಯ ನ್ಯಾಯಮೂರ್ತಿ ಶರದ್ ಅರವಿಂದ್ ಬಾಬ್ಡೆ, ನ್ಯಾಯಮೂರ್ತಿಗಳಾದ ಧನಂಜಯ್ ವೈ ಚಂದ್ರಚೂಡ, ಅಶೋಕ್ ಭೂಷಣ್ ಮತ್ತು ಎಸ್. ಅಬ್ದುಲ್ ನಜೀರ್ ಅವರುಗಳಿಗೆ ಶನಿವಾರದಿಂದಲೇ ಹೆಚ್ಚಿನ ಭದ್ರತೆ ನೀಡಲಾಗಿದೆ.

ಈ ಕುರಿತು ಮಾತನಾಡಿರುವ ಸುಪ್ರೀಂ ಕೋರ್ಟ್ ನ ಹಿರಿಯ ವಕೀಲರೊಬ್ಬರು, ಅಯೋಧ್ಯೆ ಪ್ರಕರಣದ ತೀರ್ಪು ನೀಡಿರುವ ಪಂಚ ಸದಸ್ಯ ಪೀಠದ ಐದೂ ನ್ಯಾಯಾಧೀಶರ ಭದ್ರತೆಯನ್ನು ಹೆಚ್ಟಳ ಮಾಡಲಾಗಿದೆ. ಈ ವರೆಗೂ ನ್ಯಾಯಾಧೀಶರಿಗೆ ಯಾವುದೇ ರೀತಿಯ ಬೆದರಿಕೆ ಬಂದಿಲ್ಲ. ಆದರೂ ಮುಂಜಾಗ್ರತಾ ಕ್ರಮವಾಗಿ ಭದ್ರತೆ ಹೆಚ್ಚಳ ಮಾಡಲಾಗಿದೆ. ನ್ಯಾಯಾಧೀಶರ ಭದ್ರತಾ ತಂಡಕ್ಕೆ ಹೆಚ್ಚುವರಿ ಭದ್ರತಾ ಸಿಬ್ಬಂದಿಗಳು ಮತ್ತು ಸೈನಿಕರು ಸೇರ್ಪಡೆಯಾಗಲಿದ್ದಾರೆ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com