ಬುಲ್ ಬುಲ್ ಚಂಡಮಾರುತ: ಮಮತಾ ಬ್ಯಾನರ್ಜಿ ಜತೆ ಮೋದಿ ಮಾತುಕತೆ, ನೆರವಿನ ಭರವಸೆ ನೀಡಿದ ಪಿಎಂ

ಬುಲ್ ಬುಲ್ ಚಂಡಮಾರುತದಿಂದಾಗಿ ಭಾರೀ ಮಳೆ, ಭೂಕುಸಿತ ಉಂತಾಗಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ  ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಉಲ್ಬಣಿಸಿದ ಪರಿಸ್ಥಿತಿಯ ಬಗ್ಗೆ ಮಾತನಾನಾಡಿದ ಮೋದಿ ವಿಪತ್ತನ್ನು ಎದುರಿಸಲು ಎಲ್ಲಾ ಸಹಾಯ ಮಾಡುವುದಾಗಿ ಭರವಸೆ ನೀಡಿದ್ದಾರೆ.
ನರೇಂದ್ರ ಮೋದಿ
ನರೇಂದ್ರ ಮೋದಿ

ನವದೆಹಲಿ: ಬುಲ್ ಬುಲ್ ಚಂಡಮಾರುತದಿಂದಾಗಿ ಭಾರೀ ಮಳೆ, ಭೂಕುಸಿತ ಉಂತಾಗಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ  ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಉಲ್ಬಣಿಸಿದ ಪರಿಸ್ಥಿತಿಯ ಬಗ್ಗೆ ಮಾತನಾನಾಡಿದ ಮೋದಿ ವಿಪತ್ತನ್ನು ಎದುರಿಸಲು ಎಲ್ಲಾ ಸಹಾಯ ಮಾಡುವುದಾಗಿ ಭರವಸೆ ನೀಡಿದ್ದಾರೆ.

ಬುಲ್ ಬುಲ್ ಚಂಡಮಾರುತವು ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ಶನಿವಾರ ಭಾರೀ ಭೂಕುಸಿತಕ್ಕೆ ಕಾರಣವಾಗಿದೆ.

'ಪೂರ್ವ ಭಾರತದ ಕೆಲವು ಭಾಗಗಳಲ್ಲಿ ಚಂಡಮಾರುತದ ಪರಿಸ್ಥಿತಿ ಮತ್ತು ಭಾರಿ ಮಳೆಯ ಹಿನ್ನೆಲೆಯಲ್ಲಿ ಪರಿಸ್ಥಿತಿಯನ್ನು ಗಮನಿಸಲಾಗುತ್ತಿದೆ ' ಎಂದು ಪ್ರಧಾನಿ ಟ್ವಿಟರ್‌ನಲ್ಲಿ ಬರೆದಿದ್ದಾರೆ.

ಬುಲ್ ಬುಲ್ ಚಂಡಮಾರುತದಿಂದಾಗಿ ಉಂಟಾಗುವ ಪರಿಸ್ಥಿತಿ ಬಗ್ಗೆ ಬ್ಯಾನರ್ಜಿಯೊಂದಿಗೆ ಮಾತನಾಡಿದ್ದೇನೆ ಎಂದು ಮೋದಿ ಹೇಳಿದ್ದಾರೆ.'ಕೇಂದ್ರದಿಂದ ಸಾಧ್ಯವಿರುವ ಎಲ್ಲ ಸಹಾಯ ಮಾಡುವುದಾಗಿ ಭರವಸೆ ನೀಡಲಾಗಿದೆ.ಪ್ರವಾಹ, ಭೂಕುಸಿತದಂತಹಾ ಪರಿಸ್ಥಿತಿಯಲ್ಲಿ  ಎಲ್ಲರ ಸುರಕ್ಷತೆ ಮತ್ತು ಯೋಗಕ್ಷೇಮಕ್ಕಾಗಿ ನಾನು ಪ್ರಾರ್ಥಿಸುತ್ತೇನೆ 'ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com