ಪಶ್ಚಿಮ ಬಂಗಾಳದಲ್ಲಿ ಬುಲ್ ಬುಲ್ ಚಂಡಮಾರುತದ ಭೀತಿ: ಸುರಕ್ಷಿತ ಪ್ರದೇಶಕ್ಕೆ ಸಾವಿರಾರು ಜನರ ಸ್ಥಳಾಂತರ

ಪಶ್ಚಿಮ ಬಂಗಾಳದಲ್ಲಿ ಬುಲ್ ಬುಲ್ ಚಂಡಮಾರುತ ಭೀತಿ ಎದುರಾಗಿದ್ದು, ಚಂಡಮಾರುತ ಪರಿಣಾಮ ಇಬ್ಬರು ಸಾವನ್ನಪ್ಪಿ, ಹಲವಡೆಗೆ ಭೂಕುಸಿತ ಉಂಟಾಗಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬುಲ್ ಬುಲ್ ಚಂಡಮಾರುತ ಭೀತಿ ಎದುರಾಗಿದ್ದು, ಚಂಡಮಾರುತ ಪರಿಣಾಮ ಇಬ್ಬರು ಸಾವನ್ನಪ್ಪಿ, ಹಲವಡೆಗೆ ಭೂಕುಸಿತ ಉಂಟಾಗಿದೆ. 

ಬುಲ್ ಬುಲ್ ಚಂಡಮಾರುತದ ಪರಿಣಾಮ ಕೋಲ್ಕತಾದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಇಬ್ಬರು ಮೃತಪಟ್ಟಿದ್ದಾರೆಂದು ವರದಿಗಳು ತಿಳಿಸಿವೆ. 

ಕೋಲ್ಕತಾ ಕ್ರಿಕೆಟ್ ಮತ್ತು ಫುಟ್ ಬಾಲ್ ಕ್ಲಬ್ ವೊಂದರಲ್ಲಿ ಕೆಲಸ ಮಾಡುತ್ತಿದ್ದವರ ಮೇಲೆ ಮರ ಬಿದ್ದು, ಇಬ್ಬರು ವ್ಯಕ್ತಿಗಳು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. 

ಬಂಗಾಳಕೊಲ್ಲಿಯ ವಾಯುಭಾರ ಕುಸಿತದಿಂದಾಗಿ ಬುಲ್ ಬುಲ್ ಚಂಡಮಾರುತ ತೀವ್ರವಾಗಿದ್ದು, ಗಂಟೆಗೆ 110ರಿಂದ 120 ಕಿಮೀ ವೇಗದಲ್ಲಿ ಚಂಡಮಾರುತ ಬೀಸುತ್ತಿದೆ. ಭಾರೀ ಪ್ರಮಾಣದ ಮಳೆಯಿಂದಾಗಿ ಪಶ್ಚಿಮ ಬಂಗಾಳದ ಜಗತ್ ಸಿಂಗ್ ಪುರ, ಕೇಂದ್ರಪಾರ, ಭದ್ರಕ್ ಮತ್ತು ಬಲಸೋರ್ ಜಿಲ್ಲೆಗಳಲ್ಲಿ ಸಾರ್ವಜನಿಕ ಆಸ್ತಿ ಮತ್ತು ಬೆಳೆಗಳಿಗೆ ಹಾನಿಯುಂಟಾಗಿದೆ.

ಮತ್ತಷ್ಟು ಮಳೆಯಾಗುವ ಸಾಧ್ಯತೆಗಳಿದ್ದು, ಪ್ರವಾಹ ಎದುರಾಗುವ ಸಂಭವವಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಈ ಹಿನ್ನಲೆಯಲ್ಲಿ ಒಡಿಸ್ಸಾ ಮತ್ತು ಪಶ್ಚಿಮ ಬಂಗಾಳ ಸರ್ಕಾರಗಳು ಮುನ್ನೆಚ್ಚರಿಕಾ ಕ್ರಮವಾಗಿ ಹೈಅಲರ್ಟ್ ಘೋಷಣೆ ಮಾಡಿವೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದ್ದು, ಸಾವಿರಾರು ಜನರನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ. 

13 ಕರಾವಳಿ ಜಿಲ್ಲೆಗಳ ಸರ್ಕಾರಿ ಅಧಿಕಾರಿಗಳ ರಜೆಯನ್ನೂ ಈಗಾಗಸೇ ಸರ್ಕಾರ ರದ್ದುಗೊಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಪಶ್ಚಿಮ ಬಂಗಾಳದಲ್ಲಿ ಚಂಡಮಾರುತ ಎದುರಾಗಿರುವ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರೊಂದಿಗೆ ಮಾತುಕತೆ ನಡೆಸಿದ್ದು, ಪರಿಸ್ಥಿತಿಯನ್ನು ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. 

ಈ ಕುರಿತಂತೆ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿರುವ ಪ್ರಧಾನಿ ಮೋದಿಯವರು, ಭಾರೀ ಮಳೆ, ಚಂಡಮಾರುತ ಹಿನ್ನಲೆಯಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿಗಳೊಂದಿಗೆ ಮಾತುಕೆತ ನಡೆಸಿದ್ದೇನೆ. ಕೇಂದ್ರದಿಂದ ಅಗತ್ಯ ಪರಿಹಾರಗಳನ್ನು ನೀಡಲಾಗುತ್ತದೆ. ಪ್ರತೀಯೊಬ್ಬರ ಸುರಕ್ಷತೆಗೆ ಪ್ರಾರ್ಥಿಸುತ್ತೇನೆಂದು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com