ಮಹಾ ಬೆಳವಣಿಗೆ: ಶಿವಸೇನೆ ಬೇಡಿಕೆಯನ್ನು ತಿರಸ್ಕರಿಸಿದ ರಾಜ್ಯಪಾಲರು! 

ಸರ್ಕಾರ ರಚನೆ ಸಂಬಂಧ ಶಿವಸೇನೆ ರಾಜ್ಯಪಾಲರನ್ನು ಭೇಟಿ ಮಾಡಿದ್ದು, ಶಿವಸೇನೆ ಮುಂದಿಟ್ಟ ಬೇಡಿಕೆಯನ್ನು ರಾಜ್ಯಪಾಲರು ತಿರಸ್ಕರಿಸಿದ್ದಾರೆ. 

Published: 11th November 2019 08:07 PM  |   Last Updated: 11th November 2019 08:07 PM   |  A+A-


Maharashtra Governor rejects Shiv Sena's demand for more time

ಮಹಾ ಬೆಳವಣಿಗೆ: ಶಿವಸೇನೆ ಬೇಡಿಕೆಯನ್ನು ತಿರಸ್ಕರಿಸಿದ ರಾಜ್ಯಪಾಲರು!

Posted By : Srinivas Rao BV
Source : Online Desk

ಮುಂಬೈ: ಸರ್ಕಾರ ರಚನೆ ಸಂಬಂಧ ಶಿವಸೇನೆ ರಾಜ್ಯಪಾಲರನ್ನು ಭೇಟಿ ಮಾಡಿದ್ದು, ಶಿವಸೇನೆ ಮುಂದಿಟ್ಟ ಬೇಡಿಕೆಯನ್ನು ರಾಜ್ಯಪಾಲರು ತಿರಸ್ಕರಿಸಿದ್ದಾರೆ. 

ನ.11 ರಂದು ರಾಜ್ಯಪಾಲರ ಭೇಟಿ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ಶಿವಸೇನೆ ಶಾಸಕ ಆದಿತ್ಯ ಠಾಕ್ರೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. 

ಸರ್ಕಾರ ರಚಿಸಲು ಆಹ್ವಾನ ನೀಡಿದ್ದ ರಾಜ್ಯಪಾಲರ ಬಳಿ ನಾವು ಸರ್ಕಾರ ರಚನೆಗೆ ಸಂಬಂಧಿಸಿದಂತೆ 2 ದಿನ ಕಾಲಾವಕಾಶ ಕೋರಿದ್ದೆವು, ಆದರೆ ಹೆಚ್ಚಿನ ಕಾಲಾವಕಾಶ ನೀಡಲು ರಾಜ್ಯಪಾಲರು ನಿರಾಕರಿಸಿದ್ದಾರೆ. ಸ್ಥಿರ ಸರ್ಕಾರ ರಚಿಸಲು ಬಯಸುತ್ತೇವೆ. ಹೆಚ್ಚಿನ ಸಮಯ ನೀಡಲು ರಾಜ್ಯಪಾಲರಿಗೆ ಮನವಿ ಮಾಡುತ್ತೇವೆ ಎಂದು ಹೇಳಿದ್ದಾರೆ. 

Stay up to date on all the latest ರಾಷ್ಟ್ರೀಯ news with The Kannadaprabha App. Download now
facebook twitter whatsapp