'ಮಹಾ' ಬಿಕ್ಕಟ್ಟು: ವಿರೋಧ ಪಕ್ಷದಲ್ಲಿ ಕೂರುವುದೇ ನಮ್ಮ ತೀರ್ಮಾನ: ಮಲ್ಲಿಕಾರ್ಜುನ ಖರ್ಗೆ

ಮಹಾರಾಷ್ಟ್ರದಲ್ಲಿನ ಸರ್ಕಾರ ರಚನೆ ಬಿಕ್ಕಟ್ಟು ತಾರಕಕ್ಕೇರಿರುವಂತೆಯೇ ತಾವು ವಿಪಕ್ಷ ಸ್ಥಾನದಲ್ಲಿ ಕೂರುವುದಾಗಿ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಮುಂಬೈ: ಮಹಾರಾಷ್ಟ್ರದಲ್ಲಿನ ಸರ್ಕಾರ ರಚನೆ ಬಿಕ್ಕಟ್ಟು ತಾರಕಕ್ಕೇರಿರುವಂತೆಯೇ ತಾವು ವಿಪಕ್ಷ ಸ್ಥಾನದಲ್ಲಿ ಕೂರುವುದಾಗಿ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಕುರಿತು ಮಾತನಾಡಿರುವ ಕಾಂಗ್ರೆಸ್‌ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಹೈಕಮಾಂಡ್‌ ತೀರ್ಮಾನದಂತೆ ನಡೆದುಕೊಳ್ಳಲಿದ್ದೇವೆ. ಇಂದು ಬೆಳಗ್ಗೆ 10 ಗಂಟೆಗೆ ಕಾಂಗ್ರೆಸ್‌ ಸಭೆ ನಡೆಯಲಿದೆ. ಈ ಸಭೆಯಲ್ಲಿ ನಮ್ಮ ಮುಂದಿನ ನಡೆಯ ಬಗ್ಗೆ ಚರ್ಚಿಸಲಾಗುವುದು ಹಾಗೂ ಹೈಕಮಾಂಡ್‌ ನೀಡುವ ಸೂಚನೆಗಳನ್ನು ಪಾಲಿಸಲಾಗುವುದು ಎಂದು ಹೇಳಿದ್ದಾರೆ.

ಜನರು ನೀಡಿದ ತೀರ್ಪಿನಂತೆ ಹಾಗೂ ನಮ್ಮ ಹೈಕಮಾಂಡ್‌ ನಿರ್ಧಾರದಂತೆ ವಿರೋಧ ಪಕ್ಷದ ಸ್ಥಾನದಲ್ಲಿ ಕೂರುವುದೇ ನಮ್ಮ ಸದ್ಯದ ತೀರ್ಮಾನವಾಗಿದೆ. ಮುಂದಿನ ತೀರ್ಮಾನ ಪಕ್ಷದ ಹೈಕಮಾಂಡ್ ಗೆ ಬಿಟ್ಟದ್ದು ಎಂದು ಹೇಳಿದ್ದಾರೆ.

ಬಿಜೆಪಿ ಸರ್ಕಾರ ರಚನೆ ಮಾಡುವುದಿಲ್ಲ ಎಂದು ಹೇಳಿರುವ ಬೆನ್ನಲ್ಲೇ ಮಹಾರಾಷ್ಟ್ರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದಿರಿವೆ. ಶಿವಸೇನಾವು ಎನ್‌ಸಿಪಿ ಮತ್ತು ಕಾಂಗ್ರೆಸ್‌ ಬೆಂಬಲದೊಂದಿಗೆ ಸರ್ಕಾರ ರಚನೆ ಮಾಡಲಿದೆ ಎಂಬ ಮಾತುಗಳು ಕೇಳಿಬಂದಿವೆ. ಈಗಾಗಲೇ ರಾಜ್ಯಪಾಲರು ಸರ್ಕಾರ ರಚನೆಗೆ ಶಿವಸೇನಾ ಪಕ್ಷಕ್ಕೆ ಆಹ್ವಾನ ನೀಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com