ಜೆಎನ್ ಯುವಿನಲ್ಲಿ ಶೈಕ್ಷಣಿಕ ತುರ್ತುಪರಿಸ್ಥಿತಿ: ವಿದ್ಯಾರ್ಥಿಗಳ ಆರೋಪ 

ಜವಾಹರ್ ಲಾಲ್ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಸಂಘಟನೆ ಪ್ರತಿಭಟನೆಗೆ ಇಳಿದಿದ್ದು, ವಿಶ್ವವಿದ್ಯಾನಿಲಯದಲ್ಲಿ ಶೈಕ್ಷಣಿಕ ತುರ್ತುಪರಿಸ್ಥಿತಿಯನ್ನು ಎದುರಿಸುತ್ತಿರುವುದಾಗಿ ಆರೋಪಿಸಿದ್ದಾರೆ.
 

Published: 12th November 2019 01:25 AM  |   Last Updated: 12th November 2019 01:25 AM   |  A+A-


JNU students say 'academic emergency' at varsity

ಜೆಎನ್ ಯುವಿನಲ್ಲಿ ಶೈಕ್ಷಣಿಕ ತುರ್ತುಪರಿಸ್ಥಿತಿ: ವಿದ್ಯಾರ್ಥಿಗಳ ಆರೋಪ

Posted By : Srinivas Rao BV
Source : PTI

ಜವಾಹರ್ ಲಾಲ್ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಸಂಘಟನೆ ಪ್ರತಿಭಟನೆಗೆ ಇಳಿದಿದ್ದು, ವಿಶ್ವವಿದ್ಯಾನಿಲಯದಲ್ಲಿ ಶೈಕ್ಷಣಿಕ ತುರ್ತುಪರಿಸ್ಥಿತಿಯನ್ನು ಎದುರಿಸುತ್ತಿರುವುದಾಗಿ ಆರೋಪಿಸಿದ್ದಾರೆ.
 
ವಿಶ್ವವಿದ್ಯಾನಿಲಯದ ಉಪಕುಲಪತಿ ಎಂ.ಜಗದೀಶ್ ಕುಮಾರ್ ಅವರು ಪ್ರಜಾಪ್ರಭುತ್ವ ರೀತಿಯಲ್ಲಿ, ಅಥವಾ ಸಮಂಜಸವಾದ ರೀತಿಯಲ್ಲಿ ತಮ್ಮ ಕಾರ್ಯವನ್ನು ನಿರ್ವಹಿಸುತ್ತಿಲ್ಲವಾದ್ದರಿಂದ ಅವರನ್ನು ಕೂಡಲೇ ವಜಾಗೊಳಿಸಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ. 

ಶುಲ್ಕ ಹೆಚ್ಚಳ ಹಾಗೂ ಹೊಸ ಹಾಸ್ಟೆಲ್ ನಿಯಮಾವಳಿ ಪ್ರಸ್ತಾವವನ್ನು ವಿರೋಧಿಸಿ ಅಲ್ಲಿನ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದು, ತಮ್ಮ ಬೇಡಿಕೆ ಈಡೇರಿಕೆಗೆ ಪಟ್ಟು ಹಿಡಿದಿದ್ದಾರೆ. 

ಶುಲ್ಕದಲ್ಲಿ ಹಿಂದಿನದ್ದಕ್ಕಿಂತ ಶೇ. 999ರಷ್ಟು ಹೆಚ್ಚಳವಾಗಿದೆ. ಜೆಎನ್​ಯುನಲ್ಲಿರುವ ಶೇ. 40ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ಬಡತನ ರೇಖೆಗಿಂತ ಕೆಳಗಿರುವ ಕುಟುಂಬದಿಂದ ಬಂದವರಾಗಿದ್ದಾರೆ, ಆದ್ದರಿಂದ ಶುಲ್ಕ ಹೆಚ್ಚಳವನ್ನು ಕೈಬಿಡಬೇಕೆಂಬುದು ವಿದ್ಯಾರ್ಥಿಗಳ ಆಗ್ರಹವಾಗಿದೆ.  ಇನ್ನು ಹಾಸ್ಟೆಲ್ ನಿಯಮಾವಳಿಗಳಲ್ಲಿ ನಿಷೇಧಾಜ್ಞೆ, ಸಮಯ ಮತ್ತು ವಸ್ತ್ರ ಸಂಹಿತೆ ಇತ್ಯಾದಿ ಹೊಸ ಅಂಶಗಳನ್ನು ಸೇರಿಸಲಾಗಿದೆ. ಈ ಬಗ್ಗೆ ಕುಲಪತಿಗಳೊಂದಿಗೆ ಮಾತನಾಡಬೇಕೆಂದರೆ ಅವರು ನಮ್ಮನ್ನು ಭೇಟಿಯಾಗುತ್ತಿಲ್ಲ ಎಂದು ವಿದ್ಯಾರ್ಥಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Stay up to date on all the latest ರಾಷ್ಟ್ರೀಯ news with The Kannadaprabha App. Download now
Poll
Priyanka gandhi

ಪ್ರಿಯಾಂಕಾ ಗಾಂಧಿಯನ್ನು ಉತ್ತರ ಪ್ರದೇಶದಲ್ಲಿ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಕಾಂಗ್ರೆಸ್ ಘೋಷಿಸಬೇಕೇ?


Result
ಹೌದು
ಬೇಡ
ಗೊತ್ತಿಲ್ಲ
facebook twitter whatsapp