ಜಾರ್ಖಂಡ್ ವಿಧಾನಸಭೆ ಚುನಾವಣೆ: 50 ಕ್ಷೇತ್ರಗಳಲ್ಲಿ ಎಲ್ ಜೆಪಿ ಸ್ಪರ್ಧೆ

ನವೆಂಬರ್ 30ರಿಂದ ಡಿಸೆಂಬರ್ 20ರ ವರೆಗೆ ಐದು ಹಂತಗಳಲ್ಲಿ ನಡೆಯುವ ಜಾರ್ಖಂಡ್ ವಿಧಾನಸಭೆ ಚುನಾವಣೆಯಲ್ಲಿ ಲೋಕ ಜನಶಕ್ತಿ ಪಕ್ಷ(ಎಲ್ ಜೆಪಿ) 50 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ ಎಂದು ಎಲ್ ಜೆಪಿ ಅಧ್ಯಕ್ಷ ಚಿರಾಗ್ ಪಾಸ್ವಾನ್ ಅವರು ಮಂಗಳವಾರ ಘೋಷಿಸಿದ್ದಾರೆ.
ಚಿರಾಗ್ ಪಾಸ್ವಾನ್
ಚಿರಾಗ್ ಪಾಸ್ವಾನ್

ನವದೆಹಲಿ: ನವೆಂಬರ್ 30ರಿಂದ ಡಿಸೆಂಬರ್ 20ರ ವರೆಗೆ ಐದು ಹಂತಗಳಲ್ಲಿ ನಡೆಯುವ ಜಾರ್ಖಂಡ್ ವಿಧಾನಸಭೆ ಚುನಾವಣೆಯಲ್ಲಿ ಲೋಕ ಜನಶಕ್ತಿ ಪಕ್ಷ(ಎಲ್ ಜೆಪಿ) 50 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ ಎಂದು ಎಲ್ ಜೆಪಿ ಅಧ್ಯಕ್ಷ ಚಿರಾಗ್ ಪಾಸ್ವಾನ್ ಅವರು ಮಂಗಳವಾರ ಘೋಷಿಸಿದ್ದಾರೆ.

ಪಕ್ಷದ ರಾಜ್ಯ ಘಟಕ ಜಾರ್ಖಂಡ್ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ನಿರ್ಧಾರ ತೆಗೆದುಕೊಂಡಿದ್ದು, 50 ಕ್ಷೇತ್ರಗಳಲ್ಲಿ ಕಣಕ್ಕಿಳಿಯಲಿದೆ ಎಂದು ಪಾಸ್ವಾನ್ ಹೇಳಿದ್ದಾರೆ.

ಬಿಹಾರದಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಎಲ್ ಜೆಪಿ, ಜಾರ್ಖಂಡ್ ನಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದೆ. ಅಲ್ಲದೆ ಬಿಜೆಪಿಯ ದೊಡ್ಡಣ್ಣನ ನೀತಿಯನ್ನು ಸಹಿಸಲಾಗದು ಎಂದು  ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಪುತ್ರ ಚಿರಾಗ್ ಪಾಸ್ವಾನ್ ಹೇಳಿದ್ದಾರೆ.

ಬಿಜೆಪಿಯ ಮತ್ತೊಂದು ಮಿತ್ರ ಪಕ್ಷ ಜೆಡಿಯು ಸಹ ಜಾರ್ಖಂಡ್ ವಿಧಾನಸಭೆ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com