'ಮಹಾ' ರಾಜಕೀಯದಲ್ಲಿ ರೋಚಕ ಟ್ವಿಸ್ಟ್  : ಕಾಂಗ್ರೆಸ್ ಜೊತೆಗೆ ಮಾತುಕತೆ- ಶರದ್ ಪವಾರ್ 

ಮಹಾರಾಷ್ಟ್ರ ರಾಜಕಾರಣ ಕ್ಷಣಕ್ಕೊಂದು ರೀತಿಯಲ್ಲಿ ತಿರುವು ಪಡೆದುಕೊಳ್ಳುತ್ತಿದ್ದು, ಭಾರೀ ಕುತೂಹಲ ಕೆರಳಿಸಿದೆ. ರಾಜ್ಯಪಾಲರು ಗಡುವು ಕೊಟ್ಟರೂ ಕಾಂಗ್ರೆಸ್ ಹಾಗೂ ಎನ್ ಪಿಸಿ ನಿರ್ಧಾರಕ್ಕೆ ಬಾರದ ಹಿನ್ನೆಲೆಯಲ್ಲಿ ಶಿವಸೇನೆಯೂ ಸರ್ಕಾರ ರಚಿಸುವಲ್ಲಿ ವಿಫಲವಾಗಿದೆ
ಶರದ್ ಪವಾರ್
ಶರದ್ ಪವಾರ್

ಮುಂಬೈ: ಮಹಾರಾಷ್ಟ್ರ ರಾಜಕಾರಣ ಕ್ಷಣಕ್ಕೊಂದು ರೀತಿಯಲ್ಲಿ ತಿರುವು ಪಡೆದುಕೊಳ್ಳುತ್ತಿದ್ದು, ಭಾರೀ ಕುತೂಹಲ ಕೆರಳಿಸಿದೆ. ರಾಜ್ಯಪಾಲರು ಗಡುವು ಕೊಟ್ಟರೂ ಕಾಂಗ್ರೆಸ್ ಹಾಗೂ ಎನ್ ಪಿಸಿ ನಿರ್ಧಾರಕ್ಕೆ ಬಾರದ ಹಿನ್ನೆಲೆಯಲ್ಲಿ ಶಿವಸೇನೆಯೂ ಸರ್ಕಾರ ರಚಿಸುವಲ್ಲಿ ವಿಫಲವಾಗಿದೆ. ಹೀಗಾಗಿ ಸರ್ಕಾರ ರಚನೆ ವಿಳಂಬ ಕುರಿತಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರೊಂದಿಗೆ ಮಾತುಕತೆ ನಡೆಸುವುದಾಗಿ ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಹೇಳಿದ್ದಾರೆ.

ಕಾಂಗ್ರೆಸ್ ಹಾಗೂ ಎನ್ ಸಿಪಿ ನಡುವೆ ಇಂದಿನ ಸಭೆ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಶರದ್ ಪವಾರ್,  ಸಭೆ ಬಗ್ಗೆ ನನ್ನಗೇನೂ ಗೊತ್ತಿಲ್ಲ ಎಂದಿದ್ದಾರೆ. ಕಾಂಗ್ರೆಸ್ ಕಾದು ನೋಡುವ ತಂತ್ರ ಅನುಸರಿಸುತ್ತಿದ್ದೆಯಾ? ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಆ ಪಕ್ಷದ ಮುಖಂಡರೊಂದಿಗೆ ಮಾತುಕತೆ ನಡೆಸುವುದಾಗಿ ತಿಳಿಸಿದರು. 

ಈ ಮಧ್ಯೆ ಎದೆನೋವಿನಿಂದ ಲೀಲಾವತಿ ಆಸ್ಪತ್ರೆಗೆ ದಾಖಲಾಗಿರುವ ಶಿವಸೇನಾ ಮುಖಂಡ ಸಂಜಯ್ ರಾವತ್ ಅವರನ್ನು ಶರದ್ ಪವಾರ್ ಭೇಟಿಯಾಗಲಿದ್ದಾರೆ. ಶಿವಸೇನಾ ಸರ್ಕಾರ ರಚಿಸಲು ಕಾಂಗ್ರೆಸ್ ಹಾಗೂ ಎನ್ ಸಿಪಿಯಿಂದ ಅಗತ್ಯ ಬೆಂಬಲ ಪತ್ರ ಸಲ್ಲಿಸುವಲ್ಲಿ ವಿಫಲವಾದ ಹಿನ್ನೆಲೆಯಲ್ಲಿ ಮೂರನೇ ಅತಿದೊಡ್ಡ ಪಕ್ಷವಾಗಿರುವ ಎನ್ ಸಿಪಿಯನ್ನು ಸರ್ಕಾರ ರಚನೆಗೆ ರಾಜ್ಯಪಾಲರು ಆಹ್ವಾನಿಸಿದ್ದರು. ಆದರೆ, ಮೈತ್ರಿ ಪಕ್ಷ ಕಾಂಗ್ರೆಸ್ ಜೊತೆಗೆ ಮಾತುಕತೆ ನಡೆಸದೆ ನಿರ್ಧಾರ ಕೈಗೊಳ್ಳುವುದಿಲ್ಲ ಎಂದು ಎನ್ ಸಿಪಿ ಸ್ಪಷ್ಟಪಡಿಸಿದೆ. 

ಮಹಾರಾಷ್ಟ್ರ ಬೆಳವಣಿಗೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಮಹಾರಾಷ್ಟ್ರ ಮುಖಂಡರು ಹಾಗೂ ಎನ್ ಸಿಪಿ ಜೊತೆಗೆ ಮಾತುಕತೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com