ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿ, 18 ದಿನಗಳ ರಾಜಕೀಯ ಬಿಕ್ಕಟ್ಟಿಗೆ ತೆರೆ
ಬಿಜೆಪಿಯೇತ್ತರ ಸರ್ಕಾರ ರಚನೆ ಮಾಡುವ ಹುಮ್ಮಸ್ಸಿನಲ್ಲಿದ್ದ ಶಿವಸೇನೆ ಮತ್ತು ಎನ್ಸಿಪಿ ಕನಸು ಭಗ್ನಗೊಂಡಿದ್ದು ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ರಾಮನಾಥ್ ಕೋವಿಂದ್ ಅವರು ಗ್ರೀನ್ ಸಿಗ್ನಲ್ ನೀಡಿದ್ದಾರೆ.
Published: 12th November 2019 05:57 PM | Last Updated: 12th November 2019 09:14 PM | A+A A-

ರಾಮನಾಥ್ ಕೋವಿಂದ್
ನವದೆಹಲಿ: ಬಿಜೆಪಿಯೇತ್ತರ ಸರ್ಕಾರ ರಚನೆ ಮಾಡುವ ಹುಮ್ಮಸ್ಸಿನಲ್ಲಿದ್ದ ಶಿವಸೇನೆ ಮತ್ತು ಎನ್ಸಿಪಿ ಕನಸು ಭಗ್ನಗೊಂಡಿದ್ದು ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ರಾಮನಾಥ್ ಕೋವಿಂದ್ ಅವರು ಗ್ರೀನ್ ಸಿಗ್ನಲ್ ನೀಡಿದ್ದಾರೆ.
ಸರ್ಕಾರ ರಚಿಸುವಲ್ಲಿ ಬಿಜೆಪಿ, ಶಿವಸೇನಾ ವಿಫಲವಾದ ಬೆನ್ನಲ್ಲೇ, ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಹೇರುವಂತೆ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ತುರ್ತು ಸಚಿವ ಸಂಪುಟ ಸಭೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರು ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸುವಂತೆ ರಾಷ್ಟ್ರಪತಿ ರಾಮನಾಥ್ ಕೊವಿಂದ್ ಅವರಿಗೆ ಶಿಫಾರಸು ಮಾಡಿದ್ದರು.
ಇದೀಗ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಶಿಫಾರಸಿಗೆ ಅಂಕಿತ ಹಾಕಿದ್ದು ಈ ಮೂಲಕ ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೆ ಬಂದಿದೆ.