ಅಯೋಧ್ಯೆ ತೀರ್ಪಿಗಾಗಿ 27 ವರ್ಷ ಉಪವಾಸ ಮಾಡಿದ ಆಧುನಿಕ ಶಬರಿ

ಅಯೋಧ್ಯೆ ರಾಮಭೂಮಿ ವಿವಾದ ಬಗಹರಿಯಲೆಂದು ಮಧ್ಯಪ್ರದೇಶದ ಮಹಿಳೆಯೊಬ್ಬರು ಬರೋಬ್ಬರೀ 27 ವರ್ಷ ಉಪವಾಸ ಮಾಡಿದ್ದಾರೆ.

Published: 12th November 2019 01:10 PM  |   Last Updated: 12th November 2019 01:10 PM   |  A+A-


Urmila Chaturvedi

87 ವರ್ಷದ ಊರ್ಮಿಳಾ ಚತುರ್ವೇದಿ

Posted By : Shilpa D
Source : PTI

ಮಧ್ಯಪ್ರದೇಶ: ಅಯೋಧ್ಯೆ ರಾಮಭೂಮಿ ವಿವಾದ ಬಗಹರಿಯಲೆಂದು ಮಧ್ಯಪ್ರದೇಶದ ಮಹಿಳೆಯೊಬ್ಬರು ಬರೋಬ್ಬರೀ 27 ವರ್ಷ ಉಪವಾಸ ಮಾಡಿದ್ದಾರೆ.

ಮಧ್ಯಪ್ರದೇಶದ ಜಬಲ್‍ಪುರದ ಊರ್ಮಿಳಾ ಚರ್ತುವೇದಿ(81) ರಾಮ ಜನ್ಮಭೂಮಿ ವಿವಾದ ಬಗೆಹರಿಯಲೆಂದು ಉಪವಾಸ ಮಾಡಿದ್ದಾರೆ. ಊರ್ಮಿಳಾ ಅವರು ಸಂಸ್ಕೃತ ಭಾಷಾ ಶಿಕ್ಷಕಿಯಾಗಿದ್ದು, ಅಯೋಧ್ಯೆ ಜಮೀನು ವಿವಾದ ಪರಿಹಾರಕ್ಕಾಗಿ 1992ರಿಂದ ಅನ್ನ ಆಹಾರ ತ್ಯಜಿಸಿ ಉಪವಾಸ ಮಾಡಿಕೊಂಡು ಬಂದಿದ್ದಾರೆ.

ಜಮೀನು ವಿವಾದ ಇತ್ಯರ್ಥವಾಗುವ ತನಕ ಅಂದರೆ 27 ವರ್ಷ ಕಾಲ ಬರೀ ಹಣ್ಣು ಮತ್ತು ಹಾಲು ಕುಡಿದು ಊರ್ಮಿಳಾ ಬದುಕಿದ್ದಾರೆ. ಶಬರಿ ರಾಮನಿಗಾಗಿ ಕಾದಂತೆ ಶಿಕ್ಷಕಿ ಅಯೋಧ್ಯೆ ತೀರ್ಪಿಗಾಗಿ ಕಾದು ಭಕ್ತಿ ಮೆರೆದಿದ್ದಾರೆ. ಇದನ್ನೂ 

ಶನಿವಾರ ಸುಪ್ರೀಂ ಕೋರ್ಟಿನ ಸಂವಿಧಾನ ಪೀಠ ಅಯೋಧ್ಯೆ ತೀರ್ಪು ಹೊರಡಿಸಿರುವುದನ್ನು ಕೇಳಿ ಅಮ್ಮ ಖುಷಿಪಟ್ಟಿದ್ದಾರೆ. 27 ವರ್ಷದಿಂದ ಊಟ ಬಿಟ್ಟಿದ್ದ ಅವರು ಈಗ ಊಟ ಮಾಡಲು ತೀರ್ಮಾನಿಸಿದ್ದಾರೆ ಎಂದು ಹೇಳಿದರು. 

ಅಮ್ಮ ಶ್ರೀರಾಮನ ದೊಡ್ಡ ಭಕ್ತೆ, ಅಯೋಧ್ಯೆ ಜಮೀನು ವಿವಾದ ಪರಿಹಾರಕ್ಕಾಗಿ ಎರಡು ದಶಕಗಳಿಂದ ಅವರು ಕಾಯುತ್ತಿದ್ದರು. ಖಾಸಗಿ ವಿದ್ಯಾಸಂಸ್ಥೆಯೊಂದರಲ್ಲಿ ಸಂಸ್ಕೃತ ಭಾಷಾ ಶಿಕ್ಷಕಿಯಾಗಿ ಅಮ್ಮ ಕರ್ತವ್ಯ ನಿರ್ವಹಿಸುತ್ತಿದ್ದಾರೆ. 1992ರ ಡಿಸೆಂಬರ್ 6ರಂದು ಬಾಬರಿ ಮಸೀದಿ ಧ್ವಂಸಗೊಂಡು ದೇಶದಾದ್ಯಂತ ಹಿಂಸಾಚಾರ ನಡೆದಾಗ ಅವರು ಬಹಳ ಖಿನ್ನತೆಗೊಳಗಾಗಿದ್ದರು. ತಮ್ಮ 54ನೇ ವಯಸ್ಸಿನಲ್ಲಿ ಅವರು ಉಪವಾಸ ಮಾಡಲು ಆರಂಭಿಸಿದರು. ಅನ್ನ ಸೇವಿಸುವುದನ್ನು ಬಿಟ್ಟು ಕೇವಲ ಹಣ್ಣು ಮತ್ತು ಹಾಲನ್ನು ಮಾತ್ರ ಸೇವನೆ ಮಾಡಿಕೊಂಡು ಬಂದಿದ್ದಾರೆ. 

Stay up to date on all the latest ರಾಷ್ಟ್ರೀಯ news with The Kannadaprabha App. Download now
Poll
Priyanka gandhi

ಪ್ರಿಯಾಂಕಾ ಗಾಂಧಿಯನ್ನು ಉತ್ತರ ಪ್ರದೇಶದಲ್ಲಿ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಕಾಂಗ್ರೆಸ್ ಘೋಷಿಸಬೇಕೇ?


Result
ಹೌದು
ಬೇಡ
ಗೊತ್ತಿಲ್ಲ
facebook twitter whatsapp