ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿ ಬೆನ್ನಲ್ಲೇ ಉದ್ಧವ್ ಠಾಕ್ರೆ ಹೇಳಿದ್ದಿಷ್ಟು... 

ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿಗಳ ಆಡಳಿತ ಜಾರಿಗೆ ಬರುತ್ತಿದ್ದಂತೆಯೇ ಶಿವಸೇನೆಯ ಮುಖ್ಯಸ್ಥ ಉದ್ಧವ್ ಠಾಕ್ರೆ ವರಸೆ ಬದಲಿಸಿದಂತೆ ಕಾಣುತ್ತಿದ್ದು, ನಾವು ಬಿಜೆಪಿ ಜತೆಗಿನ ಮೈತ್ರಿಯನ್ನು ಕಡಿದುಕೊಂಡಿಲ್ಲ ಎಂದು ಹೇಳಿದ್ದಾರೆ. 
ರಾಷ್ಟ್ರಪತಿ ಆಡಳಿತ ಜಾರಿಯಾದ ಬೆನ್ನಲ್ಲೇ, ನಾವು ಬಿಜೆಪಿ ಜೊತೆ ಮೈತ್ರಿ ಕಡಿದುಕೊಂಡಿಲ್ಲ ಎಂದ ಉದ್ಧವ್ ಠಾಕ್ರೆ!
ರಾಷ್ಟ್ರಪತಿ ಆಡಳಿತ ಜಾರಿಯಾದ ಬೆನ್ನಲ್ಲೇ, ನಾವು ಬಿಜೆಪಿ ಜೊತೆ ಮೈತ್ರಿ ಕಡಿದುಕೊಂಡಿಲ್ಲ ಎಂದ ಉದ್ಧವ್ ಠಾಕ್ರೆ!

ಮುಂಬೈ: ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿಗಳ ಆಡಳಿತ ಜಾರಿಗೆ ಬರುತ್ತಿದ್ದಂತೆಯೇ ಶಿವಸೇನೆಯ ಮುಖ್ಯಸ್ಥ ಉದ್ಧವ್ ಠಾಕ್ರೆ ವರಸೆ ಬದಲಿಸಿದಂತೆ ಕಾಣುತ್ತಿದ್ದು, ನಾವು ಬಿಜೆಪಿ ಜತೆಗಿನ ಮೈತ್ರಿಯನ್ನು ಕಡಿದುಕೊಂಡಿಲ್ಲ ಎಂದು ಹೇಳಿದ್ದಾರೆ. 

ನ.12 ರಂದು ಮುಂಬೈ ನಲ್ಲಿ ಶಿವಸೇನೆ ಶಾಸಕರೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ಉದ್ಧವ್ ಠಾಕ್ರೆ,  ನಾವು ಬಿಜೆಪಿ ಜೊತೆಗಿನ ಮೈತ್ರಿಯನ್ನು ಕಡಿದುಕೊಂಡಿಲ್ಲ. 30 ವರ್ಷಕ್ಕೂ ಹೆಚ್ಚು ಸಮಯ ಬಿಜೆಪಿ ಜೊತೆಗಿದ್ದೆವು. ಈಗ ಎನ್ ಸಿಪಿ, ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಅನಿವಾರ್ಯತೆ ಎದುರಾಗಿದೆ. ಆದ್ದರಿಂದ ಮಾತುಕತೆ ಮುಂದುವರೆಸಲಿದ್ದೇವೆ ಎಂದು ಹೇಳಿದ್ದಾರೆ. 

ಎನ್ ಸಿಪಿ-ಕಾಂಗ್ರೆಸ್ ಜೊತೆಗಿನ ಮಾತುಕತೆಯನ್ನು ಬಿಜೆಪಿ ಪ್ರಶ್ನಿಸುತ್ತಿದೆ. ಜಮ್ಮು-ಕಾಶ್ಮೀರದಲ್ಲಿ ಪಿಡಿಪಿ ಜೊತೆ ಬಿಜೆಪಿ ಹೇಗೆ ಮೈತ್ರಿ ಮಾಡಿಕೊಂಡಿತು? ಎಂದೂ ಉದ್ಧವ್ ಠಾಕ್ರೆ ಪ್ರಶ್ನಿಸಿದ್ದಾರೆ. ಎನ್ ಸಿಪಿ-ಕಾಂಗ್ರೆಸ್ ಜೊತೆಗೆ ಸಾಮಾನ್ಯ ಕನಿಷ್ಠ ಕಾರ್ಯಕ್ರಮದ ಬಗ್ಗೆ ಶಿವಸೇನೆಗೂ ಸ್ಪಷ್ಟತೆ ಬೇಕಾಗಿದೆ ಎಂದು ಉದ್ಧವ್ ಠಾಕ್ರೆ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com