ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಗೊಂದಲದ ಬಗ್ಗೆ ಮೌನ ಮುರಿದ ಗೃಹ ಸಚಿವ ಅಮಿತ್ ಶಾ, ಹೇಳಿದ್ದಿಷ್ಟೇ...

ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತ ಹೇರಿರುವುದು ಹಾಗೂ ಸರ್ಕಾರ ರಚನೆ ಗೊಂದಲದ ಬಗ್ಗೆ ಗೃಹ ಸಚಿವ ಅಮಿತ್ ಶಾ ಮೌನ ಮುರಿದಿದ್ದಾರೆ. 

Published: 13th November 2019 09:28 PM  |   Last Updated: 14th November 2019 02:57 AM   |  A+A-


Maharashtra impasse: Sena didn't object when PM Modi said Fadnavis will be CM, says Amit Shah

ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತ, ಸರ್ಕಾರ ರಚನೆ ಗೊಂದಲದ ಬಗ್ಗೆ ಮೌನ ಮುರಿದ ಅಮಿತ್ ಶಾ, ಹೇಳಿದ್ದಿಷ್ಟೇ...

Posted By : srinivasrao
Source : Online Desk

ನವದೆಹಲಿ: ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತ ಹೇರಿರುವುದು ಹಾಗೂ ಸರ್ಕಾರ ರಚನೆ ಗೊಂದಲದ ಬಗ್ಗೆ ಗೃಹ ಸಚಿವ ಅಮಿತ್ ಶಾ ಮೌನ ಮುರಿದಿದ್ದಾರೆ. 

ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿರುವ ಅಮಿತ್ ಶಾ, ರಾಜ್ಯಪಾಲರು ಸರ್ಕಾರ ರಚನೆಗೆ ಎಲ್ಲರಿಗೂ ಸಾಕಷ್ಟು ಸಮಯ ನೀಡಿದ್ದರು. ಈಗಲೂ ಯಾರ ಬಳಿ ಸರ್ಕಾರ ರಚನೆಗೆ ಅಗತ್ಯವಿರುವ ಶಾಸಕರ ಬೆಂಬಲ ಇದೆಯೋ ಅವರು ರಾಜ್ಯಪಾಲರನ್ನು ಭೇಟಿ ಮಾಡಿ ಹಕ್ಕು ಮಂಡಿಸಬಹುದು ಎಂದು ಅಮಿತ್ ಶಾ ಹೇಳಿದ್ದಾರೆ. 

ಮಹಾರಾಷ್ಟ್ರದ ಚುನಾವಣೆ ಹಿನ್ನೆಲೆ ನಡೆದ ಸಾರ್ವಜನಿಕ ಸಮಾವೇಶಗಳಲ್ಲಿ ಮಾನತಾಡಿದ್ದ ಪ್ರಧಾನಿ ನರೇಂದ್ರ ಮೋದಿ ಆದಿಯಾಗಿ ಬಿಜೆಪಿ ನಾಯಕರು, ಮೈತ್ರಿ ಸರ್ಕಾರ ಮತ್ತೆ ಅಸ್ತಿತ್ವಕ್ಕೆ ಬಂದರೆ ದೇವೇಂದ್ರ ಫಡ್ನವೀಸ್ ಅವರೇ ಮುಖ್ಯಮಂತ್ರಿಯಾಗುತ್ತಾರೆಂದು ಹೇಳಿದ್ದರು. ಈ ವಿಷಯವನ್ನು ಶಿವಸೇನೆಗೆ ಸ್ಪಷ್ಟವಾಗಿ ತಿಳಿಸಲಾಗಿತ್ತು. ಆಗ ಯಾರೊಬ್ಬರೂ ವಿರೋಧ ವ್ಯಕ್ತಪಡಿಸಿರಲಿಲ್ಲ. ಶಿವಸೇನೆ ಈಗ ಹೊಸ ಹೊಸ ಬೇಡಿಕೆಗಳನ್ನು ಮುಂದಿಟ್ಟಿದೆ. ಅದು ನಮಗೆ ಒಪ್ಪಲು ಸಾಧ್ಯವಿಲ್ಲ ಎಂದು ಅಮಿತ್ ಶಾ ಹೇಳಿದ್ದಾರೆ. 

ಬೇರೆ ಯಾವುದೇ ರಾಜ್ಯಗಳಲ್ಲಿ ಸರ್ಕಾರ ರಚನೆಗೆ ನೀಡಿದ್ದ ಅವಧಿಗಿಂತಲೂ ಮಹಾರಾಷ್ಟ್ರದಲ್ಲಿ ರಾಜ್ಯಪಾಲರು ಕಾಲಾವಕಾಶ ನೀಡಿದ್ದಾರೆ. ಈ ಹಿಂದಿನ ವಿಧಾನಸಭೆ ಅವಧಿ ಮುಕ್ತಾಯಗೊಂಡ ನಂತರವಷ್ಟೇ ರಾಜ್ಯಪಾಲರು ಡೆಡ್ ಲೈನ್ ನೀಡಿದ್ದರು. ಇದಕ್ಕೂ ಮುನ್ನ, ಸರ್ಕಾರ ರಚನೆಗೆ 18 ದಿನಗಳ ಸುಧೀರ್ಘ ಅವಧಿ ಇತ್ತು ಆದರೆ ಶಿವಸೇನೆಯಾಗಲೀ, ಕಾಂಗ್ರೆಸ್-ಎನ್ ಸಿಪಿಯಾಗಲೀ ಹಕ್ಕು ಮಂಡನೆ ಮಾಡಿಲ್ಲ. ಈಗಲೂ ಯಾರಿಗೆ ಬಹುಮತವಿದೆಯೋ ಅವರು ರಾಜ್ಯಪಾಲರನ್ನು ಭೇಟಿ ಮಾಡಿ ಹಕ್ಕು ಮಂಡಿಸಬಹುದು ಎಂದು ಹೇಳಿದ್ದಾರೆ.


Stay up to date on all the latest ರಾಷ್ಟ್ರೀಯ news
Poll
Yediyurappa

ಕರ್ನಾಟಕ ಸಿಎಂ ಆಗಿ ಬಿ.ಎಸ್. ಯಡಿಯೂರಪ್ಪ ನಿರ್ಗಮನವು ರಾಜ್ಯದಲ್ಲಿ ಬಿಜೆಪಿಯ ಚುನಾವಣಾ ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆಯೇ?


Result
ಹೌದು
ಇಲ್ಲ
flipboard facebook twitter whatsapp