ರಫೇಲ್ ತೀರ್ಪು ಹಿನ್ನೆಲೆ: ಕಾಂಗ್ರೆಸ್ ದೇಶದ ಕ್ಷಮೆಯಾಚಿಸಬೇಕು- ಬಿಜೆಪಿ

ರಫೇಲ್ ಕುರಿತ ಸರ್ಕಾರದ ನಿಲುವನ್ನು ಸುಪ್ರೀಂ ಕೋರ್ಟ್  ಸಮರ್ಥಿಸಿದ್ದು, ಕಾಂಗ್ರೆಸ್ ಮತ್ತು ಅದರ ನಾಯಕ ರಾಹುಲ್ ಗಾಂಧಿ ಅವರು ರಾಷ್ಟ್ರ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಕ್ಷಮೆಯಾಚಿಸಬೇಕು ಎಂದು ಬಿಜೆಪಿ  ಒತ್ತಾಯಿಸಿದೆ.
ರವಿಶಂಕರ್ ಪ್ರಸಾದ್, ರಾಹುಲ್ ಗಾಂಧಿ
ರವಿಶಂಕರ್ ಪ್ರಸಾದ್, ರಾಹುಲ್ ಗಾಂಧಿ

ನವದೆಹಲಿ: ರಫೇಲ್ ಕುರಿತ ಸರ್ಕಾರದ ನಿಲುವನ್ನು ಸುಪ್ರೀಂ ಕೋರ್ಟ್  ಸಮರ್ಥಿಸಿದ್ದು, ಕಾಂಗ್ರೆಸ್ ಮತ್ತು ಅದರ ನಾಯಕ ರಾಹುಲ್ ಗಾಂಧಿ ಅವರು ರಾಷ್ಟ್ರ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಕ್ಷಮೆಯಾಚಿಸಬೇಕು ಎಂದು ಬಿಜೆಪಿ  ಒತ್ತಾಯಿಸಿದೆ.

ಸುಪ್ರೀಂಕೋರ್ಟ್ ತೀರ್ಪಿನ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್,ಎಲ್ಲಾ ಮೂರು ನ್ಯಾಯಾಲಯಗಳಲ್ಲಿ ಸೋತ ರಾಹುಲ್ ಗಾಂಧಿ ದೇಶದ ಕ್ಷಮೆಯಾಚಿಸಬೇಕಾಗಿದೆ ಎಂದು  ಆಗ್ರಹಿಸಿದರು. 

ಮೊದಲನೇಯದಾಗಿ  ರಫೇಲ್ ವಿಚಾರಣೆಯ ಮೇಲ್ಮನವಿಯಲ್ಲಿ, ಎರಡನೇಯದ್ದು, ಲೋಕಸಭಾ ಚುನಾವಣೆಯ ಸಮಯದಲ್ಲಿ ಸಾರ್ವಜನಿಕ ವೇದಿಕೆಯಲ್ಲಿ ಮತ್ತು ಮೂರನೇಯದ್ದು  ಇಂದು ಮೇಲ್ಮನವಿ ವಿಚಾರಣೆಯ ಸಂದರ್ಭದಲ್ಲಿ ನೀವು ಮತ್ತೆ ಸೋತಿದ್ದೀರಿ 
ವರ್ಷಗಳ ಕಾಲ ಕಾಂಗ್ರೆಸ್ ತನ್ನ ಬೇಡಿಕೆಯನ್ನು ಕಡೆಗಣಿಸಿದ್ದರಿಂದ ಗಾಂಧಿ, ಐಎಎಫ್‌ ಜೊತೆ ಕ್ಷಮೆಯಾಚಿಸಬೇಕು ಎಂದು ರವಿಶಂಕರ್ ಪ್ರಸಾದ್  ಒತ್ತಾಯಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com