ನ.18 ರಿಂದ ಚಳಿಗಾಲದ ಅಧಿವೇಶನ: ಸುಗಮ ಕಲಾಪಕ್ಕೆ ಸ್ಪೀಕರ್ ಓಂ ಬಿರ್ಲಾ ಮನವಿ 

ನವೆಂಬರ್ 18 ರಿಂದ ಆರಂಭವಾಗಲಿರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಸದನ ಸುಗಮವಾಗಿ ನಡೆಯಲು ಎಲ್ಲ ರಾಜಕೀಯ ಪಕ್ಷಗಳು ಸಹಕರಿಸುವಂತೆ ಸ್ಪೀಕರ್ ಓಂ ಬಿರ್ಲಾ ಮನವಿ ಮಾಡಿದ್ದಾರೆ.

Published: 16th November 2019 09:44 PM  |   Last Updated: 16th November 2019 09:44 PM   |  A+A-


All_Party_Meeting1

ಸರ್ವ ಪಕ್ಷ ಸಭೆ

Posted By : Nagaraja AB
Source : UNI

ನವದೆಹಲಿ: ನವೆಂಬರ್ 18 ರಿಂದ ಆರಂಭವಾಗಲಿರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಸದನ ಸುಗಮವಾಗಿ ನಡೆಯಲು ಎಲ್ಲ ರಾಜಕೀಯ ಪಕ್ಷಗಳು ಸಹಕರಿಸುವಂತೆ ಸ್ಪೀಕರ್ ಓಂ ಬಿರ್ಲಾ ಮನವಿ ಮಾಡಿದ್ದಾರೆ.

ಸರ್ವಪಕ್ಷ ಸಭೆಯಲ್ಲಿ ಮಾತನಾಡಿದ ಸ್ಪೀಕರ್ ರಾಜಕೀಯ ಸಲಹೆಗಾರರಿಗೆ ಮೊದಲು ವ್ಯವಹಾರ ಸಲಹಾ ಸಮಿತಿಯಲ್ಲಿ ಚರ್ಚಿಸಲು ಸಲಹೆ ನೀಡಿದರು. ಈ ಬಾರಿ ಗರಿಷ್ಠ ಸಂಖ್ಯೆಯ ಸಮಸ್ಯೆಗಳನ್ನು ಚರ್ಚೆಗೆ ತೆಗೆದುಕೊಳ್ಳಲು ಪ್ರಯತ್ನಿಸಲಾಗುವುದು ಎಂದು ಹೇಳಿದರು.

ನವೆಂಬರ್ 18ರಿಂದ ಡಿಸೆಂಬರ್ 13ರವರೆಗೂ ಕಲಾಪ ನಡೆಯಲಿದ್ದು, ಕಾಂಗ್ರೆಸ್ ಪಕ್ಷದ  ಅಧಿರ್ ರಂಜನ್, ಡಿಎಂಕೆಯ ಟಿಆರ್ ಬಾಲು, ಟಿಎಂಸಿಯ ಸುದೀಪ್ ಬಂಡೋಪಾಧ್ಯಾಯ, ಬಿಎಸ್ಪಿಯ ಡ್ಯಾನಿಷ್ ಆಲಿ, ಎಲ್ ಜೆಪಿಯ ಚಿರಾಗ್ ಪಾಸ್ವನ್, ಶಿವಸೇನಾ ಮುಖಂಡ ವಿನಾಯಕ್ ರಾವತ್ , ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಮತ್ತಿತರರು ಸರ್ವ ಪಕ್ಷ ಸಭೆಯಲ್ಲಿ ಪಾಲ್ಗೊಂಡಿದ್ದರು.

ಚಳಿಗಾಲದ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿನ ಬಿಜೆಪಿ ಸರ್ಕಾರದ ಅನೇಕ ಕಾಯ್ದೆಗಳು ಅನುಮೋದನೆಯಾಗುವ ಸಾಧ್ಯತೆ ಇದೆ.ಆರ್ಥಿಕ ಪ್ರಗತಿ ಕುಸಿತ, ಉದ್ಯೋಗ ಕೊರತೆ ಮತ್ತಿತರ ಸಮಸ್ಯೆಗಳನ್ನು ಎತ್ತುವ ಮೂಲಕ ಪ್ರತಿಪಕ್ಷಗಳು ಸರ್ಕಾರ ವಿರುದ್ಧ ಮುಗಿಬೀಳುವ ಸಾಧ್ಯತೆ ಇದೆ. 

ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ನೇತೃತ್ವದಲ್ಲಿ ಸಹ ನಾಳೆ ಸರ್ವ ಪಕ್ಷ ಸಭೆ ನಡೆಯಲಿದೆ. 

Stay up to date on all the latest ರಾಷ್ಟ್ರೀಯ news with The Kannadaprabha App. Download now
Poll
Priyanka gandhi

ಪ್ರಿಯಾಂಕಾ ಗಾಂಧಿಯನ್ನು ಉತ್ತರ ಪ್ರದೇಶದಲ್ಲಿ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಕಾಂಗ್ರೆಸ್ ಘೋಷಿಸಬೇಕೇ?


Result
ಹೌದು
ಬೇಡ
ಗೊತ್ತಿಲ್ಲ
facebook twitter whatsapp