ನಾಳೆಯಿಂದ ಸಂಸತ್ತಿನ ಚಳಿಗಾಲ ಅಧಿವೇಶನ: ದೆಹಲಿಯಲ್ಲಿ ನಡೆದ ಸರ್ವಪಕ್ಷ ಸಭೆ 

ಸಂಸತ್ತಿನ ಚಳಿಗಾಲ ಅಧಿವೇಶನಕ್ಕೆ ಮುನ್ನ ಭಾನುವಾರ ಸರ್ವಪಕ್ಷ ಸಭೆ ನಡೆಯಿತು. ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹಾಗೂ ಹಲವು ಪ್ರತಿಪಕ್ಷ ನಾಯಕರು ಭಾಗವಹಿಸಿದ್ದರು.
ಸಂಸತ್ತು
ಸಂಸತ್ತು

ನವದೆಹಲಿ: ಸಂಸತ್ತಿನ ಚಳಿಗಾಲ ಅಧಿವೇಶನಕ್ಕೆ ಮುನ್ನ ಭಾನುವಾರ ಸರ್ವಪಕ್ಷ ಸಭೆ ನಡೆಯಿತು. ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹಾಗೂ ಹಲವು ಪ್ರತಿಪಕ್ಷ ನಾಯಕರು ಭಾಗವಹಿಸಿದ್ದರು.


ಸಭೆಯಲ್ಲಿ ಕೇಂದ್ರ ಸಚಿವ ತಾವರ್ ಚಂದ್ ಗೆಹ್ಲೊಟ್, ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ, ರಾಜ್ಯಸಭೆಯಲ್ಲಿ ಪ್ರತಿಪಕ್ಷ ನಾಯಕ ಗುಲಾಂ ನಬಿ ಆಜಾದ್, ಆನಂದ್ ಶರ್ಮ, ಟಿಎಂಸಿ ನಾಯಕ ದೆರೆಕ್ ಒ ಬ್ರಿಯಾನ್, ಎಲ್ ಜೆಪಿ ನಾಯಕ ಚಿರಾಗ್ ಪಾಸ್ವಾನ್, ಸಮಾಜವಾದಿ ಪಕ್ಷದ ಮುಖಂಡ ರಾಮ್ ಗೋಪಾಲ್ ಯಾದವ್, ತೆಲುಗು ದೇಶಂ ಪಾರ್ಟಿ ಮುಖಂಡ ಜಯದೇವ್ ಗಲ್ಲ, ವಿ ವಿಜಯ್ ಸಾಯಿ ರೆಡ್ಡಿ ಕೂಡ ಇದ್ದರು.


ಸರ್ಕಾರ ಈ ಸಭೆಯನ್ನು ಕರೆದಿದ್ದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ, ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ಅರ್ಜುನ್ ಮೆಗವಾಲ್ ಉಸ್ತುವಾರಿ ವಹಿಸಿಕೊಂಡಿದ್ದರು.


ಸಂಸತ್ತಿನ ಚಳಿಗಾಲ ಅಧಿವೇಶನ ನಾಳೆಯಿಂದ ಡಿಸೆಂಬರ್ 13ರವರೆಗೆ ನಡೆಯಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com