ಸಂಸತ್ತಿನ ಉಭಯ ಸದನಗಳಲ್ಲಿ ಶಿವಸೇನೆಗೆ ಪ್ರತಿಪಕ್ಷಗಳ ಸಾಲಿನಲ್ಲಿ ಆಸನಗಳ ವ್ಯವಸ್ಥೆ- ಪ್ರಹ್ಲಾದ್ ಜೋಷಿ

ಸಂಸತ್ತಿನ ಉಭಯ ಸದನಗಳಲ್ಲಿ ಆ ಪಕ್ಷದ ಸದಸ್ಯರುಗಳಿಗೆ ಪ್ರತಿಪಕ್ಷಗಳ ಸಾಲಿನಲ್ಲಿ ಆಸನಗಳ ವ್ಯವಸ್ಥೆ ಮಾಡಲಾಗಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲೋದ್ ಜೋಷಿ ತಿಳಿಸಿದ್ದಾರೆ. 
ಉದ್ದವ್ ಠಾಕ್ರೆ, ಪ್ರಹ್ಲಾದ್ ಜೋಷಿ
ಉದ್ದವ್ ಠಾಕ್ರೆ, ಪ್ರಹ್ಲಾದ್ ಜೋಷಿ

ನವದೆಹಲಿ: ಕೇಂದ್ರ ಸಚಿವ ಸ್ಥಾನಕ್ಕೆ ಶಿವಸೇನೆ ಸಂಸದ ಅರವಿಂದ್ ಸಾವಂತ್ ರಾಜೀನಾಮೆ ಹಾಗೂ 
ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ,ಎನ್ ಸಿಪಿ ಜೊತೆ ಸೇರಿ ಸರ್ಕಾರ ರಚನೆಗೆ ಶಿವಸೇನೆ ಮುಂದಾಗಿರುವುದರಿಂದ ಸಂಸತ್ತಿನ ಉಭಯ ಸದನಗಳಲ್ಲಿ ಆ ಪಕ್ಷದ ಸದಸ್ಯರುಗಳಿಗೆ ಪ್ರತಿಪಕ್ಷಗಳ ಸಾಲಿನಲ್ಲಿ ಆಸನಗಳ ವ್ಯವಸ್ಥೆ ಮಾಡಲಾಗಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲೋದ್ ಜೋಷಿ ತಿಳಿಸಿದ್ದಾರೆ. 

ಶಿವಸೇನೆಯ ಸಂಸದ ಅರವಿಂದ್ ಸಾವಂತ್ ಕಳೆದ ಸೋಮವಾರ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅಲ್ಲದೇ ಸಂಸತ್ತಿನ ಚಳಿಗಾಲದ ಅಧಿವೇಶನದ ಅಂಗವಾಗಿ ನಡೆಯಲಿರುವ ಎನ್ ಡಿಎ ಮೈತ್ರಿಕೂಟಗಳ ಸಭೆಯಲ್ಲಿ ತಾನೂ ಪಾಲ್ಗೊಳ್ಳುವುದಿಲ್ಲ ಎಂದು ಶಿವಸೇನೆ ಶನಿವಾರ ಹೇಳಿಕೆ ನೀಡಿತ್ತು. 

ಶಿವಸೇನೆಯ ಸಚಿವರು ಎನ್ ಡಿಎ ಸರ್ಕಾರಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ಎನ್ ಡಿಎ ಸಭೆಯಲ್ಲೂ ಪಾಲ್ಗೊಂಡಿಲ್ಲ. ಅಲ್ಲದೇ ಕಾಂಗ್ರೆಸ್ , ಎನ್ ಸಿಪಿ ಜೊತೆಗೆ ಮೈತ್ರಿಗೆ ಮುಂದಾಗಿದ್ದಾರೆ. ಆದ್ದರಿಂದ ಸಹಜವಾಗಿಯೇ ಸಂಸತ್ತಿನ ಉಭಯ ಸದನಗಳಲ್ಲಿ ಆ ಪಕ್ಷದ ಸದಸ್ಯರುಗಳಿಗೆ ಪ್ರತಿಪಕ್ಷಗಳ ಸಾಲಿನಲ್ಲಿ ಆಸನಗಳ ಹಂಚಿಕೆ ಮಾಡಲಾಗಿದೆ ಎಂದು ಜೋಷಿ ಸರ್ವ ಪಕ್ಷ ಸಭೆ ಬಳಿಕ ಸುದ್ದಿಗಾರರಿಗೆ ತಿಳಿಸಿದರು. 

ರಾಜ್ಯಸಭೆಯಲ್ಲಿ ಎಲ್ಲಾ ಮೂವರು ಶಿವಸೇನಾ ಸಂಸದರುಗಳಿಗೆ ಪ್ರತಿಪಕ್ಷಗಳ ಸಾಲಿನಲ್ಲಿ ಆಸನಗಳ ಹಂಚಿಕೆ ಮಾಡಲಾಗಿದೆ. ಆದರೆ, ಲೋಕಸಭೆಯಲ್ಲಿ ಇನ್ನೂ ಮಾಡಿಲ್ಲ ಎಂಬುದು ಮೂಲಗಳಿಂದ ತಿಳಿದುಬಂದಿದೆ. 

ಮಹಾರಾಷ್ಟ್ರದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ಶಿವಸೇನೆ ಪಟ್ಟು ಹಿಡಿದ ಕಾರಣ ಅದರ ಜೊತೆಗಿನ ದಶಕಗಳ ಹಳೆಯದಾದ ಮೈತ್ರಿಯನ್ನು ಬಿಜೆಪಿ ಕಡಿತಗೊಳಿಸಿಕೊಂಡಿತ್ತು. ಇದೀಗ ಮಹಾರಾಷ್ಟ್ರದಲ್ಲಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವ ನಿಟ್ಟಿನಲ್ಲಿ ಕಾಂಗ್ರೆಸ್, ಎನ್ ಸಿಪಿ ಜೊತೆ ಸೇರಿ ಸರ್ಕಾರ ರಚಿಸಲು ಶಿವಸೇನೆ ಸರಣಿ ಸಭೆಗಳನ್ನು ನಡೆಸುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com