ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆ; ವಿದ್ಯಾರ್ಥಿಗಳು ಪ್ರತಿಭಟನೆ ಹಿಂತೆಗೆದುಕೊಳ್ಳಬೇಕು: ಜೆಎನ್ ಯು ಉಪ ಕುಲಪತಿ

ಪ್ರತಿಭಟನೆಯಿಂದಾಗಿ ಕಳೆದ ಎರಡು ವಾರಗಳಿಂದ ಶೈಕ್ಷಣಿಕ ಚಟುವಟಿಕೆಗಳಿಗೆ ತೀವ್ರ ತೊಂದರೆಯಾಗುತ್ತಿದ್ದು ವಿದ್ಯಾರ್ಥಿಗಳು ಮುಷ್ಕರವನ್ನು ನಿಲ್ಲಿಸಬೇಕು ಎಂದು ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ಉಪ ಕುಲಪತಿ ಮಮಿದಾಲ ಜಗದೀಶ್ ಕುಮಾರ್ ಮನವಿ ಮಾಡಿದ್ದಾರೆ.
ಡಾ ಎಂ ಜಗದೀಶ್ ಕುಮಾರ್
ಡಾ ಎಂ ಜಗದೀಶ್ ಕುಮಾರ್

ನವದೆಹಲಿ: ಪ್ರತಿಭಟನೆಯಿಂದಾಗಿ ಕಳೆದ ಎರಡು ವಾರಗಳಿಂದ ಶೈಕ್ಷಣಿಕ ಚಟುವಟಿಕೆಗಳಿಗೆ ತೀವ್ರ ತೊಂದರೆಯಾಗುತ್ತಿದ್ದು ವಿದ್ಯಾರ್ಥಿಗಳು ಮುಷ್ಕರವನ್ನು ನಿಲ್ಲಿಸಬೇಕು ಎಂದು ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ಉಪ ಕುಲಪತಿ ಮಮಿದಾಲ ಜಗದೀಶ್ ಕುಮಾರ್ ಮನವಿ ಮಾಡಿದ್ದಾರೆ.


ಕಳೆದ ಎರಡು ವಾರಗಳಲ್ಲಿ ವಿಶ್ವವಿದ್ಯಾಲಯದ ಶೈಕ್ಷಣಿಕ ಚಟುವಟಿಕೆಗಳು ಕೆಲವು ವಿದ್ಯಾರ್ಥಿಗಳ ಪ್ರತಿಭಟನೆಯಿಂದಾಗಿ ತೊಂದರೆಗೊಳಗಾಗಿದೆ. ಈ ಬಗ್ಗೆ ಹಲವು ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ನನಗೆ ಇಮೇಲ್ ಮೂಲಕ ಬರೆದು ಕಳವಳ, ಆತಂಕ ವ್ಯಕ್ತಪಡಿಸಿದ್ದಾರೆ ಎಂದು ಕುಮಾರ್ ತಿಳಿಸಿದ್ದಾರೆ.


ವಿದ್ಯಾರ್ಥಿಗಳು ಪ್ರತಿಭಟನೆ ಹಿಂತೆಗೆದುಕೊಂಡು ಶೈಕ್ಷಣಿಕ ಚಟುವಟಿಕೆಗಳನ್ನು ನಿಲ್ಲಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.
ಇತ್ತೀಚೆಗೆ ಹಾಸ್ಟೆಲ್ ಶುಲ್ಕ ಹೆಚ್ಚಳ ಮತ್ತು ಇತರ ನಿರ್ಬಂಧ ಹೇರಿಕೆ ಮಾಡಿ ವಿಶ್ವವಿದ್ಯಾಲಯ ಜಾರಿಗೆ ತಂದ ಆದೇಶವನ್ನು ವಿರೋಧಿಸಿ ಕಳೆದ ಎರಡು ವಾರಗಳಿಂದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com