ಬಿಜೆಪಿ-ಶಿವಸೇನಾ ಜತೆಯಾಗಿ ಚುನಾವಣೆ ಎದುರಿಸಿದ್ದು, ಅವರ ದಾರಿ ನೋಡಿಕೊಳ್ಳಲಿ: ಉಲ್ಟಾ ಹೊಡೆದ ಶರದ್ ಪವಾರ್

ಮಹಾರಾಷ್ಟ್ರ ರಾಜಕೀಯ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಇನ್ನೇನು ಶಿವಸೇನಾ, ಎನ್‌ಸಿಪಿ ಮತ್ತು ಕಾಂಗ್ರೆಸ್ ಮೈತ್ರಿ ಸರ್ಕಾರ ರಚನೆಯಾಗಲಿದೆ ಎಂಬ...
ಶರದ್ ಪವಾರ್
ಶರದ್ ಪವಾರ್

ನವದೆಹಲಿ: ಮಹಾರಾಷ್ಟ್ರ ರಾಜಕೀಯ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಇನ್ನೇನು ಶಿವಸೇನಾ, ಎನ್‌ಸಿಪಿ ಮತ್ತು ಕಾಂಗ್ರೆಸ್ ಮೈತ್ರಿ ಸರ್ಕಾರ ರಚನೆಯಾಗಲಿದೆ ಎಂಬ ನಿರೀಕ್ಷೆಯಲ್ಲಿದ್ದ ಕಾರ್ಯಕರ್ತರಿಗೆ ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಶಾಕ್ ನೀಡಿದ್ದಾರೆ. 

ಶಿವಸೇನಾ ಜೊತೆ ಮೈತ್ರಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಜತೆ ಚರ್ಚಿಸುವ ಮುನ್ನವೇ ಶರದ್ ಪವಾರ್ ಅವರು ಉಲ್ಟಾ ಹೊಡೆದಿದ್ದು, ಬಿಜೆಪಿ ಮತ್ತು ಶಿವಸೇನಾ ವಿಧಾನಸಭೆ ಚುನಾವಣೆಯಲ್ಲಿ ಜತೆಯಾಗಿ ಸ್ಪರ್ಧಿಸಿದ್ದು, ತಮ್ಮ ದಾರಿ ನೋಡಿಕೊಳ್ಳಲಿ ಎಂದು ಹೇಳಿದ್ದಾರೆ.

ಇಂದು ಸಂಸತ್ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚುನಾವಣೆಯಲ್ಲಿ ಬಿಜೆಪಿ-ಶಿವಸೇನಾ ಜತೆಯಾಗಿ ಸ್ಪರ್ಧಿಸಿದ್ದವು. ನಾವು ಕೂಡಾ ಎನ್ ಸಿಪಿ, ಕಾಂಗ್ರೆಸ್ ಜತೆಯಾಗಿಯೇ ಸ್ಪರ್ಧಿಸಿದ್ದೇವೆ. ಹೀಗಾಗಿ ಅವರು ತಮ್ಮ ದಾರಿಯನ್ನು ಆಯ್ಕೆ ಮಾಡಿಕೊಳ್ಳಲಿ. ನಾವು ನಮ್ಮ ದಾರಿ ನೋಡಿಕೊಳ್ಳುತ್ತೇವೆ ಎಂದಿದ್ದಾರೆ.

ಇದೇ ವೇಳೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಲಿದ್ದೇನೆ ಎಂದೂ ಪವಾರ್ ತಿಳಿಸಿದ್ದಾರೆ.

ಮಹಾರಾಷ್ಟ್ರ ರಾಜಕೀಯಕ್ಕೆ ಸಂಬಂಧಿಸಿ ಮುಂದಿನ ನಡೆಗಳ ಬಗ್ಗೆ ಚರ್ಚಿಸಲು ಸೋನಿಯಾ–ಪವಾರ್ ಭೇಟಿ ನಿಗದಿಯಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com