ಮಹಾ ಸರ್ಕಾರ ರಚನೆ ಕುರಿತು ಇಂದು ರಾತ್ರಿ ನಿರ್ಧಾರ: ಕಾಂಗ್ರೆಸ್ ನಾಯಕ

ಮಹಾರಾಷ್ಟ್ರ ಸರ್ಕಾರ ರಚನೆಗೆ ಸಂಬಂಧಿಸಿದಂತೆ ಸೋಮರಾತ್ರಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಮತ್ತು ಮುಂದಿನ ಎರಡು ದಿನಗಳಲ್ಲಿ ರಾಜ್ಯದಲ್ಲಿ ನೂತನ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕರೊಬ್ಬರು ಹೇಳಿದ್ದಾರೆ.
ಶರದ್ ಪವಾರ್
ಶರದ್ ಪವಾರ್

ಮುಂಬೈ: ಮಹಾರಾಷ್ಟ್ರ ಸರ್ಕಾರ ರಚನೆಗೆ ಸಂಬಂಧಿಸಿದಂತೆ ಸೋಮರಾತ್ರಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಮತ್ತು ಮುಂದಿನ ಎರಡು ದಿನಗಳಲ್ಲಿ ರಾಜ್ಯದಲ್ಲಿ ನೂತನ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕರೊಬ್ಬರು ಹೇಳಿದ್ದಾರೆ.

ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು, ಬಿಜೆಪಿ - ಶಿವಸೇನೆ ಜತೆಯಾಗಿ ಚುನಾವಣೆ ಎದುರಿಸಿದ್ದು, ಅವರ ದಾರಿ ಅವರು ನೋಡಿಕೊಳ್ಳಲು ಎಂದು ಹೇಳಿದ ಹಿನ್ನೆಲೆಯಲ್ಲಿ ಕಾಂಗ್ರೆಸ್, ಎನ್ ಸಿಪಿ ಹಾಗೂ ಶಿವಸೇನೆ ಮೈತ್ರಿಯಲ್ಲಿ ಗೊಂದಲ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರೊಬ್ಬರು ಈ ಸ್ಪಷ್ಟನೆ ನೀಡಿದ್ದಾರೆ.

ಸಾಮಾನ್ಯ ಕನಿಷ್ಠ ಕಾರ್ಯಕ್ರಮ ಹಾಗೂ ಅಧಿಕಾರ ಹಂಚಿಕೆ ಕುರಿತು ಈಗಾಗಲೇ ಅಂತಿಮಗೊಳಿಸಲಾಗಿದೆ. ಇದಕ್ಕೆ ಹಿರಿಯ ನಾಯಕರ ಒಪ್ಪಿಗೆ ಬೇಕಿದೆ ಅಷ್ಟೆ. ಇಂದು ರಾತ್ರಿ ಹಿರಿಯ ನಾಯಕರು ಸಹ ಒಪ್ಪಿಗೆ ನೀಡುವ ವಿಶ್ವಾಸವಿದೆ ಮತ್ತು ಮುಂದಿನ ಎರಡು ದಿನಗಳಲ್ಲಿ ನೂತನ ಸರ್ಕಾರ ರಚನೆಯಾಗಲಿದೆ ಎಂದು ಹೆಸರು ಹೇಳಲು ಇಚ್ಛಿಸಿದ ಕಾಂಗ್ರೆಸ್ ನಾಯಕರೊಬ್ಬರು ಹೇಳಿದ್ದಾರೆ.

ಶಿವಸೇನಾ ಜೊತೆ ಮೈತ್ರಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಜತೆ ಚರ್ಚಿಸುವ ಮುನ್ನ ಇಂದು ಸಂಸತ್ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದ ಶರದ್ ಪವಾರ್ ಅವರು, ಬಿಜೆಪಿ ಮತ್ತು ಶಿವಸೇನಾ ವಿಧಾನಸಭೆ ಚುನಾವಣೆಯಲ್ಲಿ ಜತೆಯಾಗಿ ಸ್ಪರ್ಧಿಸಿದ್ದು, ತಮ್ಮ ದಾರಿ ನೋಡಿಕೊಳ್ಳಲಿ ಎಂದು ಹೇಳಿದ್ದರು. ಅಲ್ಲದೆ ಸಂಜೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ, ಮಹಾರಾಷ್ಟ್ರದಲ್ಲಿ ಮೈತ್ರಿ ಸರ್ಕಾರ ರಚನೆ ಕುರಿತು ಚರ್ಚಿಸುವುದಾಗಿ ತಿಳಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com