ಐಎನ್ಎಕ್ಸ್ ಮೀಡಿಯಾ ಹಗರಣ: 'ಹೈ' ಆದೇಶ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಚಿದಂಬರಂ

ಐಎನ್ಎಕ್ಸ್ ಮೀಡಿಯಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಅರ್ಜಿ ತಿರಸ್ಕರಿಸಿದ್ದ ದೆಹಲಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಕಾಂಗ್ರೆಸ್ ಹಿರಿಯ ನಾಯಕ ಪಿ.ಚಿದಂಬರಂ ಅವರು ಸೋಮವಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. 
ಚಿದಂಬರಂ
ಚಿದಂಬರಂ

ನವದೆಹಲಿ: ಐಎನ್ಎಕ್ಸ್ ಮೀಡಿಯಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಅರ್ಜಿ ತಿರಸ್ಕರಿಸಿದ್ದ ದೆಹಲಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಕಾಂಗ್ರೆಸ್ ಹಿರಿಯ ನಾಯಕ ಪಿ.ಚಿದಂಬರಂ ಅವರು ಸೋಮವಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. 

ಸುಪ್ರೀಂಕೋರ್ಟ್'ನ 47ನೇ ಮುಖ್ಯ ನ್ಯಾಯಮೂರ್ತಿಯಾಗಿ ಇಂದಷ್ಟೇ ಶರದ್ ಅವರಿಂದ್ ಬೊಬ್ಡೆಯವರು ಪ್ರಮಾಣವಚನ ಸ್ವೀಕಾರ ಮಾಡಿದ್ದು, ಪ್ರಕರಣ ಸಂಬಂಧ  ಚಿದಂಬರಂ ಪರ ವಕೀಲ ಕಪಿಲ್ ಸಿಬಲ್ ಸಲ್ಲಿಸಿದ್ದ ಅರ್ಜಿ ಕುರಿತು ಮಂಗಳವಾರ ಅಥವಾ ಬುಧವಾರ ವಿಚಾರಣೆ ನಡೆಸುವುದಾಗಿ ತಿಳಿಸಿದ್ದಾರೆ. 
'
ಶುಕ್ರವಾರವಷ್ಟೇ ದೆಹಲಿ ಹೈಕೋರ್ಟ್ ಚಿದಂಬರಂ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಪ್ರಕರಣ ಸಂಬಂಧ ಆಗಸ್ಟ್ ತಿಂಗಳಿನಲ್ಲಿ ಸಿಬಿಐ ಚಿದಂಬರಂ ಅವರನ್ನು ಬಂಧನಕ್ಕೊಳಪಡಿಸಿತ್ತು. ಕಳೆದ ತಿಂಗಳು ಸುಪ್ರೀಂಕೋರ್ಟ್ ಇವರಿಗೆ ಜಾಮೀನು ನೀಡುವ ಮುನ್ನ ಜಾರಿ ನಿರ್ದೇಶನಾಯಲವು ಇವರನ್ನು ಅಕ್ರಮ ಹಣ ವ್ಯವಹಾರ ಪ್ರಕರಣದಲ್ಲಿ ವಶಕ್ಕೆ ತೆಗೆದುಕೊಂಡಿತ್ತು. 

ಶುಕ್ರವಾರ ಜಾಮೀನು ಅರ್ಜಿ ತಳ್ಳಿಹಾಕಿದ್ದ ನ್ಯಾಯಾಲಯ, ಪ್ರಕರಣದಲ್ಲಿ ಚಿದಂಬರಂ ಅವರು ಸಕ್ರಿಯ ಹಾಗೂ ಪ್ರಮುಖ ಪಾತ್ರ ವಹಿಸಿದ್ದು, ಗಂಬೀರ ಸ್ವರೂಪದ ಪ್ರಕರಣ ಇದಾಗಿದೆ ಎಂದು ತಿಳಿಸಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com