ಹೈದರಾಬಾದ್: ಕೆಮಿಕಲ್ ಫ್ಯಾಕ್ಟರಿಯಲ್ಲಿ ಸ್ಫೋಟ, ಇಬ್ಬರು ಸಾವು

ಹೈದರಾಬಾದ್ ನ ಕೆಮಿಕಲ್ ಫ್ಯಾಕ್ಟರಿಯೊಂದರಲ್ಲಿ ಸೋಮವಾರ ಭಾರಿ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ ಮತ್ತು ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಸ್ಫೋಟ ಸಂಭವಿಸಿದ ಸ್ಥಳ
ಸ್ಫೋಟ ಸಂಭವಿಸಿದ ಸ್ಥಳ

ಹೈದರಾಬಾದ್: ಹೈದರಾಬಾದ್ ನ ಕೆಮಿಕಲ್ ಫ್ಯಾಕ್ಟರಿಯೊಂದರಲ್ಲಿ ಸೋಮವಾರ ಭಾರಿ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ ಮತ್ತು ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಇಂದು ಮಧ್ಯಾಹ್ನ ಜೀವಿಕಾ ಲೈಫ್ ಸೈನ್ಸ್ ಪ್ರೈ.ಲಿಮಿಟೆಡ್ ನಲ್ಲಿ ಈ ಅವಘಡ ಸಂಭವಿಸಿದ್ದು, ಇನ್ನು ಕೆಲವು ಕಾರ್ಮಿಕರು ಫ್ಯಾಕ್ಟರಿಯಲ್ಲಿ ಸಿಲುಕಿರುವ ಸಾಧ್ಯತೆ ಇದೆ ಎನ್ನಲಾಗಿದೆ.

ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಫೋಟದಿಂದಾಗಿ ಸುತ್ತಮುತ್ತಲಿನ ನಿವಾಸಿಗಳು ಆತಂಕಗೊಂಡಿದ್ದಾರೆ.

ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ಹಾಗೂ ತೆಲಂಗಾಣ ವಿಪತ್ತು ನಿರ್ವಹಣಾ ತಂಡ ಆಗಮಿಸಿದ್ದು, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ನಾವು ಕೆಲಸ ಮಾಡುತ್ತಿದ್ದಾಗ ದೊಡ್ಡ ಸ್ಫೋಟ ಸಂಭವಿಸಿತು. ಜೀವ ಉಳಿಸಿಕೊಳ್ಳಲು ನಾವು ಕೂಡಲೇ ಹೊರಗೆ ಓಡಿಬಂದೆವು ಎಂದು 40 ವರ್ಷದ ಕಾರ್ಮಿಕ ರಂಭಲಾಲ್ ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com