ಭದ್ರತೆ ಕಾರಣ ಅಯೋಧ್ಯೆ ಭೇಟಿ ರದ್ದುಗೊಳಿಸಿದ ಉದ್ಧವ್ ಠಾಕ್ರೆ

ಭದ್ರತೆ ಕಾರಣಗಳಿಂದಾಗಿ ಅಯೋಧ್ಯೆ ಭೇಟಿಯನ್ನು ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ರದ್ದುಗೊಳಿಸಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ. 
ಉದ್ಧವ್ ಠಾಕ್ರೆ
ಉದ್ಧವ್ ಠಾಕ್ರೆ

ಮುಂಬೈ: ಭದ್ರತೆ ಕಾರಣಗಳಿಂದಾಗಿ ಅಯೋಧ್ಯೆ ಭೇಟಿಯನ್ನು ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ರದ್ದುಗೊಳಿಸಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ. 

ನವೆಂಬರ್ 24 ರಂದು ಠಾಕ್ರೆ ಅಯೋಧ್ಯೆಗೆ ಭೇಟಿ ನೀಡಲಿದ್ದಾರೆಂದು ಹೇಳಲಾಗುತ್ತಿತ್ತು. ಭದ್ರತೆ ಕಾರಣಗಳಿಂದಾಗಿ ಠಾಕ್ರೆಯವರಿಗೆ ಅಯೋಧ್ಯೆಗೆ ಭೇಟಿ ನೀಡಲು ಅವಕಾಶ ಸಿಕ್ಕಿಲ್ಲ. ಹೀಗಾಗಿ ಅಯೋಧ್ಯೆ ಭೇಟಿಯನ್ನು ರದ್ದುಗೊಳಿಸಿದ್ದಾರೆಂದು ವರದಿಗಳು ತಿಳಿಸಿವೆ. 
 
ಇದಲ್ಲದೆ, ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ಎದುರಾಗಿದ್ದು, ರಾಜ್ಯದಲ್ಲಿ ಇನ್ನೂ ಸರ್ಕಾರ ರಚನೆಗೊಂಡಿಲ್ಲ. ಈ ಕಾರಣದಿಂದಲೂ ಠಾಕ್ರೆ ಅಯೋಧ್ಯೆ ಭೇಟಿಯನ್ನು ರದ್ದುಗೊಳಿಸಿದ್ದಾರೆಂದು ಹೇಳಲಾಗುತ್ತಿದೆ.  

ನವೆಂಬರ್ 9 ರಂದು ಸುದ್ದಿಗೋಷ್ಟಿ ನಡೆಸಿದ್ದ ಶಿವಸೇನೆ, ಅಯೋಧ್ಯೆ ರಾಮ ಜನ್ಮಭೂಮಿ ವಿವಾದ ಕುರಿತ ತೀರ್ಪನ್ನು ಕೊಂಡಾಡಿತ್ತು. ಅಲ್ಲದೆ, ನವೆಂಬರ್ 24ರಂದು ಠಾಕ್ರೆ ಅಯೋಧ್ಯೆಗೆ ಭೇಟಿ ನೀಡಲಿದ್ದಾರೆಂದು ತಿಳಿಸಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com