ಶಿವಸೇನೆ ಜೊತೆ ಕೈಜೋಡಿಸಿ 'ಮಹಾ' ಸರ್ಕಾರ ರಚಿಸಲು ಕಾಂಗ್ರೆಸ್ ನಿರ್ಧಾರ: ಮೂಲಗಳು

ಮಹಾರಾಷ್ಟ್ರ ರಾಜಕೀಯ ಬೆಳವಣಿಗೆಗಳನ್ನು ಪರಿಶೀಲನೆ ನಡೆಸಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ, ಎನ್'ಸಿಪಿ ಜೊತೆಗೆ ಸುದೀರ್ಘ ಚರ್ಚೆಗಳ ಬಳಿಕ ಶಿವಸೇನೆ ಜೊತೆಗೆ ಕೈಜೋಡಿಸಿ ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಲು ನಿರ್ಧರಿಸಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನಿವಾಸದಲ್ಲಿ ನಡೆದ ಸಭೆಯಲ್ಲಿ ಭಾಗಿಯಾದ ಬಳಿಕ ಹೊರ ಬರುತ್ತಿರುವ ಮಲ್ಲಿಕಾರ್ಜುನ ಖರ್ಗೆ
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನಿವಾಸದಲ್ಲಿ ನಡೆದ ಸಭೆಯಲ್ಲಿ ಭಾಗಿಯಾದ ಬಳಿಕ ಹೊರ ಬರುತ್ತಿರುವ ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಮಹಾರಾಷ್ಟ್ರ ರಾಜಕೀಯ ಬೆಳವಣಿಗೆಗಳನ್ನು ಪರಿಶೀಲನೆ ನಡೆಸಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ, ಎನ್'ಸಿಪಿ ಜೊತೆಗೆ ಸುದೀರ್ಘ ಚರ್ಚೆಗಳ ಬಳಿಕ ಶಿವಸೇನೆ ಜೊತೆಗೆ ಕೈಜೋಡಿಸಿ ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಲು ನಿರ್ಧರಿಸಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. 

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು, ಎನ್'ಸಿಪಿ ಜೊತೆಗೆ ಕಾಂಗ್ರೆಸ್ ಅಧ್ಯಕ್ಷ ಸೋನಿಯಾ ಗಾಂಧಿಯವರು ತಮ್ಮ ನಿವಾಸದಲ್ಲಿ ಸುದೀರ್ಘ ಚರ್ಚೆಗಳನ್ನು ನಡೆಸಿದ್ದಾರೆಂದು ಹೇಳಿದ್ದಾರೆ. 

ಸುದೀರ್ಘ ಚರ್ಚೆಗಳ ಬಳಿಕ ಇದೀಗ ಕಾಂಗ್ರೆಸ್ ಅಂತಿಮ ನಿರ್ಧಾರ ಕೈಗೊಂಡಿದ್ದು, ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಮಾಡುವುದ ಕುರಿತು ನಾಳೆ ನಿರ್ಧಾರ ಪ್ರಕಟಿಸುವ ಸಾಧ್ಯತೆಗಳಿವೆ ಎಂದು ಮೂಲಗಳಿಂದ ತಿಳಿದುಬಂದಿದೆ. 

ಚರ್ಚೆ ವೇಳೆ ಕಾಂಗ್ರೆಸ್ ಶಿವಸೇನೆ ಹಾಗೂ ಎನ್'ಸಿಪಿ ಜೊತೆಗೆ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಲು ಒಪ್ಪಿಗೆ ಸೂಚಿಸಿದೆ ಎಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಮೂಲಗಳು ಮಾಹಿತಿ ನೀಡಿವೆ. ಈ ನಡುವೆ ಇಂದೂ ಕೂಡ ಎನ್'ಸಿಬಿ ಹಾಗೂ ಕಾಂಗ್ರೆಸ್ ನಡುವೆ ಮತ್ತೊಂದು ಸುತ್ತಿನ ಸಭೆ ನಡೆಯಲಿದ್ದು, ಶಿವಸೇನೆ ಜೊತೆಗೆ ಶುಕ್ರವಾರ ಮುಂಬೈನಲ್ಲಿ ಸಭೆ ನಡೆಸಲಿದೆ ಎಂದು ತಿಳಿದುಬಂದಿದೆ. 

ಮೂರು ಪಕ್ಷಗಳ ಸಭೆ ಬಳಿಕ ಶುಕ್ರವಾರ ಮುಂಬೈನಲ್ಲಿಯೇ ಅಂತಿಮ ನಿರ್ಧಾರ ಪ್ರಕಟಗೊಳ್ಳುವ ಸಾಧ್ಯತೆಗಳಿವೆ ಎಂದು ಬಲ್ಲ ಮೂಲಗಳು ಮಾಹಿತಿ ನೀಡಿವೆ. 

ಈ ನಡುವೆ ಹೇಳಿಕೆ ನೀಡಿರುವ ಶಿವಸೇನೆ ನಾಯಕ ಸಂಜಯ್ ರಾವತ್ ಅವರು, ಮಹಾರಾಷ್ಟ್ರ ನೂತನ ಸರ್ಕಾರ ರಚನೆ ಕುರಿತು 2 ದಿನಗಳಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ. 

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ನಡುವೆ ಈ ವಾರ ಯಾವುದೇ ರೀತಿಯ ಭೇಟಿಗಳಿಲ್ಲ. ಅಧಿಕಾರ ಹಂಚಿಕೆ ಕುರಿತು ಮುಂಬೈನಲ್ಲಿ ಮೂರೂ ಪಕ್ಷಗಳು ನಿರ್ಧಾರ ಕೈಗೊಳ್ಳಲಿವೆ ಎಂದು ಹೇಳಿದ್ದಾರೆ. 

ಡಿಸೆಂಬರ್ 1ರೊಳಗಾಗಿ ಸರ್ಕಾರ ರಚನೆ ಪ್ರಕ್ರಿಯೆ ನಡೆಯಲಿದೆ. ನಿನ್ನೆವರೆಗೂ ಮೂರು ಪಕ್ಷಗಳಿಂದ ಸುದೀರ್ಘ ಸಭೆಗಳು ನಡೆದಿವೆ. ಮುಂದಿನ ಎರಡು ದಿನಗಳಲ್ಲಿ ಸರ್ಕಾರ ರಚನೆ ಕುರಿತು ನಿರ್ಧಾರ ಪ್ರಕಟಿಸುತ್ತೇವೆಂದಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com