ಉದ್ಯೋಗಾವಕಾಶ: ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 7 ಲಕ್ಷ ಹುದ್ದೆ ಭರ್ತಿ ಪ್ರಕ್ರಿಯೆ ಆರಂಭ

ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸುಮಾರು ಏಳು ಲಕ್ಷ ಹುದ್ದೆಗಳು ಖಾಲಿ ಇದ್ದು, ಅವುಗಳ ಭರ್ತಿ ಪ್ರಕ್ರಿಯೆ ಆರಂಭವಾಗಿದೆ ಎಂದು ಸಿಬ್ಬಂದಿ ಖಾತೆ ರಾಜ್ಯ ಸಚಿವ ಜೀತೇಂದ್ರ ಸಿಂಗ್ ಅವರು ಗುರುವಾರ ರಾಜ್ಯಸಭೆಗೆ ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸುಮಾರು ಏಳು ಲಕ್ಷ ಹುದ್ದೆಗಳು ಖಾಲಿ ಇದ್ದು, ಅವುಗಳ ಭರ್ತಿ ಪ್ರಕ್ರಿಯೆ ಆರಂಭವಾಗಿದೆ ಎಂದು ಸಿಬ್ಬಂದಿ ಖಾತೆ ರಾಜ್ಯ ಸಚಿವ ಜೀತೇಂದ್ರ ಸಿಂಗ್ ಅವರು ಗುರುವಾರ ರಾಜ್ಯಸಭೆಗೆ ತಿಳಿಸಿದ್ದಾರೆ.

ಈ ಕುರಿತು ಇಂದು ರಾಜ್ಯಸಭೆಗೆ ಲಿಖಿತ ಉತ್ತರ ನೀಡಿದ ಸಚಿವರು, ಗ್ರೂಪ್ ಸಿ ನಲ್ಲಿ 5,74,289 ಹುದ್ದೆಗಳು, ಗ್ರೂಪ್ ಬಿ ನಲ್ಲಿ 19,896 ಹುದ್ದೆಗಳು ಖಾಲಿ ಇದ್ದು, ಕಳೆದ ಮಾರ್ಚ್ 1ಕ್ಕೆ ಒಟ್ಟು 8,83,823 ಹುದ್ದೆಗಳು ಖಾಲಿ ಉಳಿದಿವೆ ಎಂದು ಹೇಳಿದ್ದಾರೆ.

ಖಾಲಿ ಹುದ್ದೆಗಳ ಬಗ್ಗೆ ವಿವಿಧ ಇಲಾಖೆಗಳು ನೀಡಿದ ಮಾಹಿತಿ ಆಧಾರದ ಮೇಲೆ ಎಸ್ ಎಸ್ ಸಿ 2019-20ನೇ ಸಾಲಿನಲ್ಲಿ ಒಟ್ಟು 1,05,338 ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ. 2017-18ರಲ್ಲಿ ರೈಲ್ವೆ ಇಲಾಖೆ ಸೇರಿ ವಿವಿಧ ಇಲಾಖೆಗಳಲ್ಲಿ ಗ್ರೂಪ್ ಸಿ ಮತ್ತು ಲೆವೆಲ್ 1ರಲ್ಲಿ ಒಟ್ಟು 1,27, 573 ಹುದ್ದೆಗಳನ್ನು ಸೃಷ್ಟಿಸಲಾಗಿದೆ ಎಂದು ಜೀತೇಂದ್ರ ಸಿಂಗ್ ಅವರು ಮಾಹಿತಿ ನೀಡಿದ್ದಾರೆ.

ಈಗಾಗಲೇ 4,08,591 ಹುದ್ದೆಗಳಿಗೆ ಎಸ್ ಎಸ್ ಸಿ ಮೂಲಕ ಪರೀಕ್ಷೆ ನಡೆಸಲಾಗಿದ್ದು, ಶೀಘ್ರದಲ್ಲೇ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಸಚಿವರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com