ಭಯೋತ್ಪಾದನೆ ಆರೋಪ ಹೊತ್ತವರಿಗೆ ರಕ್ಷಣಾ ಸಮಿತಿಯಲ್ಲಿ ಸ್ಥಾನ ನೀಡಿರುವುದು ದುರಾದೃಷ್ಟಕರ: ಕೇಂದ್ರದ ವಿರುದ್ಧ ಕಾಂಗ್ರೆಸ್ ಕಿಡಿ

ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದ ಸಂಸದೀಯ ಸಮಾಲೋಚನಾ ಸಮಿತಿಗೆ ಮಲೆಗಾಂವ್ ಸ್ಫೋಟದ ಆರೋಪಿ ಹಾಗೂ ಬಿಜೆಪಿ ಸಂಸದೆ ಪ್ರಜ್ಞಾ ಠಾಕೂರ್ ಅವರನ್ನು ನೇಮಕ ಮಾಡಿರುವುದಕ್ಕೆ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಗುರುವಾರ ತೀವ್ರವಾಗಿ ಕಿಡಿಕಾರಿದೆ.  ನವದೆಹಲಿ: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದ ಸಂಸದೀಯ ಸಮಾಲೋಚನಾ ಸಮಿತಿಗೆ ಮಲೆಗಾಂವ್ ಸ್ಫ
ಪ್ರಜ್ಞಾ ಠಾಕೂರ್
ಪ್ರಜ್ಞಾ ಠಾಕೂರ್

ನವದೆಹಲಿ: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದ ಸಂಸದೀಯ ಸಮಾಲೋಚನಾ ಸಮಿತಿಗೆ ಮಲೆಗಾಂವ್ ಸ್ಫೋಟದ ಆರೋಪಿ ಹಾಗೂ ಬಿಜೆಪಿ ಸಂಸದೆ ಪ್ರಜ್ಞಾ ಠಾಕೂರ್ ಅವರನ್ನು ನೇಮಕ ಮಾಡಿರುವುದಕ್ಕೆ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಗುರುವಾರ ತೀವ್ರವಾಗಿ ಕಿಡಿಕಾರಿದೆ. 

21 ಸದಸ್ಯರನ್ನು ಹೊಂದಿರುವ ರಕ್ಷಣಾ ಸಚಿವಾಲಯದ ಸಂಸದೀಯ ಸಮಾಲೋಚನಾ ಸಮಿತಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ನೇತೃತ್ವ ವಹಿಸಿದ್ದು, ಈ ಸಮಿತಿಯಲ್ಲಿ ಪ್ರಜ್ಞಾ ಠಾಕೂರ್ ಕೂಡ ಇದೀಗ ಒಬ್ಬರಾಗಿದ್ದಾರೆ. 

ಈ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ ಹರಿಹಾಯ್ದಿರುವ ಕಾಂಗ್ರೆಸ್ ವಕ್ತಾರ ರಂದೀಪ್ ಸಿಂಗ್ ಸುರ್ಜೇವಾಲಾ ಅವರು, ಭಯೋತ್ಪಾದನೆ ಆರೋಪ ಹೊತ್ತಿರುವವರನ್ನು ರಕ್ಷಣಾ ಇಲಾಖೆಗೆ ಸಂಬಂಧಿಸಿದ ಸಮಿತಿಯಲ್ಲಿ ಸದಸ್ಯತ್ವ ಸ್ಥಾನ ನೀಡಿರುವುದು ದೇಶದ ದುರಾದೃಷ್ಟಕರ ಸಂಗತಿ. ಹೃದಯದಿಂದ ಪ್ರಜ್ಞಾ ಠಾಕೂರ್ ಅವರನ್ನು ಕ್ಷಮಿಸದ ಮೋದಿಯವರು, ದೇಶದ ಅತ್ಯಂತ ಪ್ರಮುಖ ಇಲಾಖೆಯಾಗಿರುವ ರಕ್ಷಣಾ ಸಮಿತಿಯಲ್ಲಿ ಸ್ಥಾನ ನೀಡಿದ್ದಾರೆ. ಇದಕ್ಕೆ ಹೇಳುವುದು, ಮೋದಿ ಇದ್ದರೆ, ಎಲ್ಲವೂ ಸಾಧ್ಯ ಎಂದು ಟ್ವೀಟ್ ಮಾಡಿ ವ್ಯಂಗ್ಯವಾಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com