ಕೆಲಸ ಕಳೆದುಕೊಳ್ಳುವ ಭಯ: ಹೈದರಾಬಾದ್ ಟೆಕ್ಕಿ ಆತ್ಮಹತ್ಯೆ

 ತಾನು ಕೆಲಸ ಮಾಡುತ್ತಿದ್ದ ಕಂಪನಿ ತನ್ನನ್ನು ಕೆಲಸದಿಂದ ತೆಗೆದುಹಾಕುವವರ  ಲಿಸ್ಟ್ ನಲ್ಲಿ ಸೇರ್ಪಡೆಗೊಳಿಸಿದೆ ಎಂಬ ಕಾರಣಕ್ಕೆ ಮಹಿಳೆಯೊಬ್ಬರು ಹಾಸ್ಟೆಲ್ ಕೋಣೆಯಲ್ಲಿ ಸೀಲಿಂಗ್ ಫ್ಯಾನ್‌ ಗೆ  ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೆಲಂಗಾಣ ರಾಜಧಾನಿ ಹೈದರಾಬಾದ್ ನಲ್ಲಿ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಹೈದರಾಬಾದ್: ತಾನು ಕೆಲಸ ಮಾಡುತ್ತಿದ್ದ ಕಂಪನಿ ತನ್ನನ್ನು ಕೆಲಸದಿಂದ ತೆಗೆದುಹಾಕುವವರ ಲಿಸ್ಟ್ ನಲ್ಲಿ ಸೇರ್ಪಡೆಗೊಳಿಸಿದೆ ಎಂಬ ಕಾರಣಕ್ಕೆ ಮಹಿಳೆಯೊಬ್ಬರು ಹಾಸ್ಟೆಲ್ ಕೋಣೆಯಲ್ಲಿ ಸೀಲಿಂಗ್ ಫ್ಯಾನ್‌ ಗೆ  ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೆಲಂಗಾಣ ರಾಜಧಾನಿ ಹೈದರಾಬಾದ್ ನಲ್ಲಿ ನಡೆದಿದೆ.

ಆತ್ಮಹತ್ಯೆಗೆ ಶರನಾದ ಮಹಿಳೆಯನ್ನು ಹರಿಣಿ (24)  ಎಂದು ಗುರುತಿಸಲಾಗಿದ್ದು ರಾಯದುರ್ಗಂ ಪೋಲೀಸ್ ಠಾಣೆ ಸರ್ಕಲ್ ಇನ್ಸ್‌ಪೆಕ್ಟರ್ ರವೀಂದರ್ ಹೇಳಿದಂತೆ ಹರಿಣಿ ರಾಯದುರ್ಗಂ ಪ್ರದೇಶದ ಹಾಸ್ಟೆಲ್‌ನಲ್ಲಿ ವಾಸಿಸುತ್ತಿದ್ದು, ಕಳೆದ ಎರಡು ವರ್ಷಗಳಿಂದ ಸಾಫ್ಟ್‌ವೇರ್ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದರು ತನ್ನ ಕಂಪನಿಯು ಅವಳನ್ನು ಕೆಲಸದಿಂದ ತೆಗೆದು ಹಾಕುವುದೆನ್ನುವ ಭಯದಿಂದ ಖಿನ್ನತೆಗೊಳಗಾಗಿದ್ದಳು. ಈ ವಿಷಯವನ್ನು ಆಕೆ ತನ್ನ ಸೋದರನೊಡನೆ ಸಹ ಚರ್ಚಿಸಿದ್ದಾಳೆ.

ಆದರೆ ಮಹಿಳೆ ಬುಧವಾರ ತಾನು ಕಟ್ಟಕಡೆಯದಾಗಿ ಆತ್ಮಹತ್ಯೆಯಂತಹಾ ನಿರ್ಧಾರ ತೆಗೆದುಕೊಂಡಿದ್ದಾರೆ."ಮಾಹಿತಿ ಪಡೆದ ನಂತರ, ನಾವು ಸ್ಥಳಕ್ಕೆ ತೆರಳಿದ್ದೆವು. ಅಲ್ಲಿ ಡೆತ್ ನೋಟ್ ಸಹ ಇದ್ದು ಅದರಲ್ಲಿ ಆಕೆ ಅಂಗಾಂಗ ದಾನವನ್ನು ಮಾಡಬೇಕೆಂದು ಅಪೇಕ್ಷಿಸಿದ್ದಾಳೆ."ರವೀಂದರ್ ಹೇಳಿದ್ದಾರೆ.

ಪ್ರಕರಣ ದಾಖಲಾಗಿದ್ದು, ಸಂತ್ರಸ್ತೆಯ ಶವವನ್ನು ಮರಣೋತ್ತರ ಪರೀಕ್ಷೆಗೆ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com