'ಮಹಾ' ಟ್ವಿಸ್ಟ್: ಎನ್ಸಿಪಿ ಜೊತೆ ಸೇರಿ ಬಿಜೆಪಿ ಸರ್ಕಾರ ರಚನೆ, ಉದ್ಧವ್ ಠಾಕ್ರೆಗೆ ಕೈಕೊಡ್ತಾರಾ ಶಿವಸೇನೆಯ 22 ಶಾಸಕರು?

ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿ ಆಗುವ ಕನಸು ಕಾಣುತ್ತಿದ್ದ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆಗೆ ರಾತ್ರೋರಾತ್ರಿ ಬಿಜೆಪಿ ಎನ್ಸಿಪಿಯ ಅಜಿತ್ ಪವಾರ್ ಜೊತೆ ಸೇರಿ ಸರ್ಕಾರ ರಚಿಸುವ ಮೂಲಕ ಮರ್ಮಾಘಾತ ನೀಡಿದ್ದು ಇದರ ಬೆನ್ನಲ್ಲೆ ಇದೀಗ ಶಿವಸೇನೆಯ 22 ಶಾಸಕರು ಬಿಜೆಪಿ ಸರ್ಕಾರಕ್ಕೆ ಸಾಥ್ ನೀಡಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.
ಉದ್ಧವ್ ಠಾಕ್ರೆ
ಉದ್ಧವ್ ಠಾಕ್ರೆ

ಮುಂಬೈ: ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿ ಆಗುವ ಕನಸು ಕಾಣುತ್ತಿದ್ದ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆಗೆ ರಾತ್ರೋರಾತ್ರಿ ಬಿಜೆಪಿ ಎನ್ಸಿಪಿಯ ಅಜಿತ್ ಪವಾರ್ ಜೊತೆ ಸೇರಿ ಸರ್ಕಾರ ರಚಿಸುವ ಮೂಲಕ ಮರ್ಮಾಘಾತ ನೀಡಿದ್ದು ಇದರ ಬೆನ್ನಲ್ಲೆ ಇದೀಗ ಶಿವಸೇನೆಯ 22 ಶಾಸಕರು ಬಿಜೆಪಿ ಸರ್ಕಾರಕ್ಕೆ ಸಾಥ್ ನೀಡಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. 

ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ(ಎನ್ಸಿಪಿ) ಶಾಸಕಾಂಗ ನಾಯಕ ಅಜಿತ್ ಪವಾರ್ ಜೊತೆ ಸೇರಿ ದೇವೇಂದ್ರ ಫಡ್ನವಿಸ್ ಅವರು ರಾಜಭವನದಲ್ಲಿ ಮುಖ್ಯಮಂತ್ರಿಯಾಗಿ ಹಾಗೂ ಅಜಿತ್ ಪವಾರ್ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಇದಾದ ನಂತರ ಮಹಾರಾಷ್ಟ್ರದ ರಾಜಕೀಯದಲ್ಲಿ ಕ್ಷಿಪ್ರ ಕ್ರಾಂತಿ ನಡೆದಿತ್ತು. 

ಇನ್ನು ಬಿಜೆಪಿ ನೇತೃತ್ವದ ನೂತನ ಸರ್ಕಾರವನ್ನು ಶಿವಸೇನೆಯ 22 ಶಾಸಕರು ಬೆಂಬಲಿಸಲಿದ್ದಾರೆ ಎಂಬ ವರದಿಗಳು ಬಿತ್ತರಗೊಂಡಿದ್ದವು. ಸದ್ಯ ಮಹಾರಾಷ್ಟ್ರದಲ್ಲಿ ಬಿಜೆಪಿ ಹೊಸ ದಾಳವನ್ನು ಉರುಳಿಸಿದೆ. ಇದರಿಂದಾಗಿ ಶಿವಸೇನೆ, ಎನ್ಸಿಪಿ ಮತ್ತು ಕಾಂಗ್ರೆಸ್ ಪಕ್ಷಗಳಲ್ಲಿ ತೀವ್ರ ಗೊಂದಲಕ್ಕೆ ಕಾರಣವಾಗಿದೆ. 

ಸದ್ಯ ರಾಜಕೀಯ ಪಕ್ಷಗಳು ತಮ್ಮ ಶಾಸಕರನ್ನು ಉಳಿಸಿಕೊಳ್ಳಲು ಇನ್ನಿಲ್ಲದ ಶತಪ್ರಯತ್ನಗಳನ್ನು ಮಾಡುತ್ತಿವೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com