ಸಾಂವಿಧಾನಿಕ ವ್ಯವಸ್ಥೆಯಲ್ಲಿ ರಾಜ್ಯಪಾಲರು ಪ್ರಮುಖ ಪಾತ್ರ ವಹಿಸುತ್ತಾರೆ: ರಾಮನಾಥ್ ಕೋವಿಂದ್

ಸಾಂವಿಧಾನಿಕ ವ್ಯವಸ್ಥೆಯಲ್ಲಿ ರಾಜ್ಯಪಾಲರು ‘ಪ್ರಮುಖ ಪಾತ್ರ’ ವಹಿಸುತ್ತಾರೆ ಎಂದಿರುವ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್, ಅಭಿವೃದ್ಧಿಯಲ್ಲಿ ಹಿಂದೆ ಉಳಿದಿರುವ  ಜನರ ಜೀವನವನ್ನು ಸುಧಾರಿಸಲು ರಾಜ್ಯಪಾಲರು ಸರಿಯಾದ ಮಾರ್ಗದರ್ಶನ ನೀಡುವ ಅವಕಾಶ ಹೊಂದಿದ್ದಾರೆ ಎಂದು ಹೇಳಿದ್ದಾರೆ.

Published: 23rd November 2019 06:24 PM  |   Last Updated: 23rd November 2019 07:52 PM   |  A+A-


Ramnath Kovind

ರಾಮನಾಥ ಕೋವಿಂದ್

Posted By : vishwanath
Source : UNI

ನವದೆಹಲಿ: ಸಾಂವಿಧಾನಿಕ ವ್ಯವಸ್ಥೆಯಲ್ಲಿ ರಾಜ್ಯಪಾಲರು ‘ಪ್ರಮುಖ ಪಾತ್ರ’ ವಹಿಸುತ್ತಾರೆ ಎಂದಿರುವ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್, ಅಭಿವೃದ್ಧಿಯಲ್ಲಿ ಹಿಂದೆ ಉಳಿದಿರುವ  ಜನರ ಜೀವನವನ್ನು ಸುಧಾರಿಸಲು ರಾಜ್ಯಪಾಲರು ಸರಿಯಾದ ಮಾರ್ಗದರ್ಶನ ನೀಡುವ ಅವಕಾಶ ಹೊಂದಿದ್ದಾರೆ ಎಂದು ಹೇಳಿದ್ದಾರೆ.

ಶನಿವಾರ ರಾಷ್ಟ್ರಪತಿ ಭವನದಲ್ಲಿ ಆಯೋಜಿಸಲಾಗಿದ್ದ ರಾಜ್ಯಪಾಲರು ಮತ್ತು ಲೆಫ್ಟಿನೆಂಟ್ ಗವರ್ನರ್‌ಗಳ ಎರಡು ದಿನಗಳ ಸಮ್ಮೇಳನದ ಆರಂಭಿಕ ಭಾಷಣದಲ್ಲಿ ಅವರು,  ಬುಡಕಟ್ಟು ಜನಾಂಗದವರ ಅಭಿವೃದ್ಧಿ ಮತ್ತು ಸಬಲೀಕರಣವು ಎಲ್ಲರನ್ನೂ ಒಳಗೊಳ್ಳುವಿಕೆಯ ಪ್ರಗತಿ ಮತ್ತು ಆಂತರಿಕ ಭದ್ರತೆಗೆ ಸಂಬಂಧಿಸಿದೆ. ಅಭಿವೃದ್ದಿಯಲ್ಲಿ ಹಿಂದುಳಿದಿರುವ ಜನರ ಜೀವನ ಸುಧಾರಣೆಗಾಗಿ ತಮಗೆ ನೀಡಿರುವ ಸಾಂವಿಧಾನಿಕ ಅಧಿಕಾರಗಳನ್ನು ಬಳಸಿಕೊಂಡು ರಾಜ್ಯಪಾಲರು  ಸರಿಯಾದ ಎಲ್ಲ ಮಾರ್ಗದರ್ಶನ ನೀಡಬಹುದು ಎಂದು ಅವರು ಹೇಳಿದ್ದಾರೆ.

‘ದೇಶದ ಅಭಿವೃದ್ಧಿ ಹಿತದೃಷ್ಟಿಯಿಂದ ನಾವು ಆರೋಗ್ಯಕರ ಒಕ್ಕೂಟ ವ್ಯವಸ್ಥೆಗೆ ಒತ್ತು ನೀಡುತ್ತಿರುವಾಗ ರಾಜ್ಯಪಾಲರ ಪಾತ್ರ ಹೆಚ್ಚು ಮಹತ್ವದ್ದಾಗಿದೆ. ಎಲ್ಲ ರಾಜ್ಯಪಾಲರು ಸಾರ್ವಜನಿಕ ಜೀವನದ ಅಪಾರ ಅನುಭವವನ್ನು ಹೊಂದಿದ್ದಾರೆ. ಈ ಅನುಭವದ ಗರಿಷ್ಠ ಲಾಭವನ್ನು ದೇಶದ ಜನರು ಪಡೆಯಬೇಕು.

ರಾಜ್ಯಪಾಲರ ಪಾತ್ರವು ಸಂವಿಧಾನದ ರಕ್ಷಣೆಗೆ ಮಾತ್ರ ಸೀಮಿತವಾಗಿಲ್ಲ . ತಮ್ಮ ರಾಜ್ಯಗಳ ಜನರ ಸೇವೆ ಮತ್ತು ಕಲ್ಯಾಣದಲ್ಲಿ ನಿರಂತರವಾಗಿ ತೊಡಗಿಸಿಕೊಳ್ಳಲು ಸಾಂವಿಧಾನಿಕ ಬದ್ಧತೆಯನ್ನು ಹೊಂದಿದ್ದಾರೆ.’ ಎಂದು ರಾಷ್ಟ್ರಪತಿ ಹೇಳಿದರು.

Stay up to date on all the latest ರಾಷ್ಟ್ರೀಯ news
Poll
Narendra Singh Tomar

ಕೃಷಿ ಕಾನೂನು ಸಂಬಂಧ ರೈತರು ಮತ್ತು ಕೇಂದ್ರದ ನಡುವಣ ಬಿಕ್ಕಟ್ಟಿಗೆ ಹೊರಗಿನ ಶಕ್ತಿಗಳು ಕಾರಣ ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್‌ ಹೇಳಿದ್ದಾರೆ.


Result
ಹೌದು
ಇಲ್ಲ
flipboard facebook twitter whatsapp