ಮಹಾರಾಷ್ಟ್ರದಲ್ಲಿ ರೆಸಾರ್ಟ್ ರಾಜಕೀಯ: ಬಿಜೆಪಿಯಿಂದ ಶಾಸಕರ ಕುದುರೆ ವ್ಯಾಪಾರ - ಕಾಂಗ್ರೆಸ್

ಮಹಾರಾಷ್ಟ್ರದಲ್ಲಿ ಬಿಜೆಪಿ 'ಆಪರೇಷನ್ ಕಮಲ' ನಡೆಸುತ್ತಿದೆ ಎಂದು ಆರೋಪಿಸಿರುವ ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ನಾಯಕ ಅಶೋಕ್ ಚವಾಣ್ ಅವರು, ತಮ್ಮ ಪಕ್ಷದ ಶಾಸಕರನ್ನು ಖರೀದಿಸುವ....
ಅಶೋಕ್ ಚವಾಣ್
ಅಶೋಕ್ ಚವಾಣ್

ಮುಂಬೈ: ಮಹಾರಾಷ್ಟ್ರದಲ್ಲಿ ಬಿಜೆಪಿ 'ಆಪರೇಷನ್ ಕಮಲ' ನಡೆಸುತ್ತಿದೆ ಎಂದು ಆರೋಪಿಸಿರುವ ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ನಾಯಕ ಅಶೋಕ್ ಚವಾಣ್ ಅವರು, ತಮ್ಮ ಪಕ್ಷದ ಶಾಸಕರನ್ನು ಖರೀದಿಸುವ ಆತಂಕ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ನಮ್ಮ ಶಾಸಕರನ್ನು ಸಂಪರ್ಕಿಸಿದೆ. ಅವರಿಗೆ ಫೋನ್ ಕಾಲ್ ಬರುತ್ತಿವೆ ಮತ್ತು ಬಿಜೆಪಿ ಜನ ನಮ್ಮ ಶಾಸಕರಿಗಾಗಿ ಹೋಟೆಲ್ ರೂಮ್ ಬುಕ್ ಮಾಡಿದ್ದಾರೆ. ಆದರೂ ನಮ್ಮ ಶಾಸಕರ ಮೇಲೆ ನಮಗೆ ವಿಶ್ವಾಸವಿದೆ ಎಂದು ಅಶೋಕ್ ಚವಾಣ್ ಹೇಳಿದ್ದಾರೆ.

ಶಾಸಕರ ಕುದುರೆ ವ್ಯಾಪಾರದ ಭಯದಿಂದ ಮಹಾರಾಷ್ಟ್ರದ ಈಗ ರೆಸಾರ್ಟ್ ರಾಜಕೀಯ ಆರಂಭವಾಗಿದ್ದು, ಕಾಂಗ್ರೆಸ್ ತನ್ನ ಶಾಸಕರನ್ನು ರಾಜಸ್ಥಾನಕ್ಕೆ ಶಿಫ್ಟ್ ಮಾಡಿದರೆ, ಎನ್ ಸಿಪಿ ಮುಂಬೈನ ರೆನೈಸನ್ಸ್ ಹೋಟೆಲ್ ಗೆ ಸ್ಥಳಾಂತರ ಮಾಡಿದೆ.

ತಮ್ಮ ಪಕ್ಷದ ಶಾಸಕರನ್ನು ಉದ್ದೇಶಿಸಿ ಮಾತನಾಡಿದ ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು, ಬಿಜೆಪಿ ಹಿಂಬಾಗಿಲ ಮೂಲಕ ಅಧಿಕಾರ ಹಿಡಿದಿದ್ದು, ಈಗ ಶಾಸಕರ ಖರೀದಿಗೆ ಯತ್ನಿಸುತ್ತಿದೆ ಎಂದು ದೂರಿದ್ದಾರೆ.

ಇನ್ನು ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಅತಿ ಹೆಚ್ಚು ಸಮಯ ತಮ್ಮ ಶಾಸಕರೊಂದಿಗೆ ಕಳೆಯುತ್ತಿದ್ದು, ಶಾಸಕರ ಮನಸ್ಥಿತಿ ತಿಳಿಯಲು ಯತ್ನಿಸುತ್ತಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com