ಇಂದು ಶಬರಿಮಲೆ ದೇಗುಲ ಪ್ರವೇಶಿಸಲು ಸಜ್ಜಾಗಿರುವ ತೃಪ್ತಿ ದೇಸಾಯಿ 

ಮಹಿಳಾ ಕಾರ್ಯಕರ್ತೆ ತೃಪ್ತಿ ದೇಸಾಯಿ ಮಂಗಳವಾರ ಬೆಳಗ್ಗೆ ಕೊಚ್ಚಿಗೆ ಆಗಮಿಸಿದ್ದು ಇಲ್ಲಿಂದ ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಪ್ರವೇಶಿಸಲು ಸಜ್ಜಾಗಿ ನಿಂತಿದ್ದಾರೆ.
ತೃಪ್ತಿ ದೇಸಾಯಿ
ತೃಪ್ತಿ ದೇಸಾಯಿ

ಕೊಚ್ಚಿ: ಮಹಿಳಾ ಕಾರ್ಯಕರ್ತೆ ತೃಪ್ತಿ ದೇಸಾಯಿ ಮಂಗಳವಾರ ಬೆಳಗ್ಗೆ ಕೊಚ್ಚಿಗೆ ಆಗಮಿಸಿದ್ದು ಇಲ್ಲಿಂದ ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಪ್ರವೇಶಿಸಲು ಸಜ್ಜಾಗಿ ನಿಂತಿದ್ದಾರೆ.


ಅವರ ಜೊತೆ ಇನ್ನೂ ಕೆಲವು ಮಹಿಳಾ ಕಾರ್ಯಕರ್ತರು ಇಂದು ಮುಂಜಾನೆ ಕೊಚ್ಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದರು. ಅವರನ್ನು ಕೊಚ್ಚಿ ನಗರ ಪೊಲೀಸ್ ಆಯುಕ್ತರ ಬಳಿ ಕರೆದೊಯ್ಯಲಾಯಿತು.


ಇಂದು ದೇಶದ ಸಂವಿಧಾನ ದಿನವಾಗಿರುವುದರಿಂದ ಶಬರಿಮಲೆ ದೇವಸ್ಥಾನಕ್ಕೆ ಪ್ರವೇಶಿಸಲು ಇಂದಿನ ದಿನವನ್ನೇ ಆಯ್ಕೆ ಮಾಡಿಕೊಂಡಿದ್ದೇವೆ. ಎಲ್ಲಾ ವಯಸ್ಸಿನ ಮಹಿಳೆಯರು ಶಬರಿಮಲೆ ದೇಗುಲ ಪ್ರವೇಶಿಸಬಹುದು ಎಂದು ಕಳೆದ ವರ್ಷ ಸುಪ್ರೀಂ ಕೋರ್ಟ್ ಆದೇಶ ನೀಡಿರುವುದರಿಂದ ಅದರ ಪ್ರಕಾರ ಇಂದು ದೇಗುಲ ಪ್ರವೇಶಿಸುತ್ತಿದ್ದೇನೆ, ದೇವಸ್ಥಾನಕ್ಕೆ ಭೇಟಿ ನೀಡಿ ದೇವರಿಗೆ ಪೂಜೆ ಸಲ್ಲಿಸಿದ ನಂತರವಷ್ಟೇ ನಾನು ಕೇರಳ ತೊರೆಯುವುದು ಎಂದರು.


ಕಳೆದ ವರ್ಷ ತೀವ್ರ ಪ್ರತಿಭಟನೆ ನಡುವೆ ಶಬರಿಮಲೆ ಪ್ರವೇಶಿಸಿದ್ದ ಬಿಂದು ಅಮ್ಮಿನಿ ಅವರು ಕೂಡ ತೃಪ್ತಿ ದೇಸಾಯಿ ಜೊತೆಗೆ ಇರುತ್ತಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com