ವಿಪ್ ಜಾರಿ ಮಾಡಲು ಅಜಿತ್ ಗೆ ಹಕ್ಕಿಲ್ಲ:  ಶರದ್ ಪವಾರ್

 ಮಹಾರಾಷ್ಟ್ರ ವಿಧಾನಸಭೆ ಬಹುಮತ ಸಾಬೀತು ವೇಳೆ ಬಿಜೆಪಿ ವಿರುದ್ಧ ಮತ ಚಲಾಯಿಸಿದರೇ ಯಾವುದೇ ಶಾಸಕರು ತಮ್ಮ ಸದಸ್ಯತ್ವ ಕಳೆದುಕೊಳ್ಳುವುದಿಲ್ಲ ಎಂದು ಎನ್ ಸಿಪಿ ಮುಖಂಡ ಶರದ್ ಪವಾರ್ ಹೇಳಿದ್ದಾರೆ.
ಶರದ್ ಪವಾರ್
ಶರದ್ ಪವಾರ್

ಮುಂಬಯಿ:  ಮಹಾರಾಷ್ಟ್ರ ವಿಧಾನಸಭೆ ಬಹುಮತ ಸಾಬೀತು ವೇಳೆ ಬಿಜೆಪಿ ವಿರುದ್ಧ ಮತ ಚಲಾಯಿಸಿದರೇ ಯಾವುದೇ ಶಾಸಕರು ತಮ್ಮ ಸದಸ್ಯತ್ವ ಕಳೆದುಕೊಳ್ಳುವುದಿಲ್ಲ ಎಂದು ಎನ್ ಸಿಪಿ ಮುಖಂಡ ಶರದ್ ಪವಾರ್ ಹೇಳಿದ್ದಾರೆ.

ಮುಂಬಯಿಯ ಪಂಚಾತಾರಾ ಹೋಟೆಲ್ ನಲ್ಲಿ  ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಶರದ್ ಪವಾರ್, ಶಾಸಕಾಂಗ ಪಕ್ಷದ ನಾಯಕನಾಗಿರುವ ಅಜಿತ್ ಪವಾರ್ ವಿಪ್ ಜಾರಿ ಮಾಡಿದ್ದು, ಉಲ್ಲಂಘಿಸಿದರೇ ಸಸದಸ್ಯತ್ವ ಕಳೆದುಕೊಳ್ಳಲಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿವೆ.

ಈ ಸಂಬಂಧವಾಗಿ ನಾನು ಹಲವು ಕಾನೂನು ಪಂಡಿತರನ್ನು ಭೇಟಿ ಮಾಡಿದ್ದೇನೆ, ಆ ರೀತಿಯಾಗಲು ಸಾಧ್ಯವಿಲ್ಲ, ಏಕೆಂದರೆ ಎನ್ ಸಿಪಿ ಶಾಸಕಾಂಗ ಪಕ್ಷದ ನಾಯಕನ ಸ್ಥಾನದಿಂದ ಅಜಿತ್ ಪವಾರ್ ಅವರನ್ನು ತೆಗೆದು ಹಾಕಿರುವುದಾಗಿ ಹೇಳಿದ್ದಾರೆ.

ಒಂದು ವೇಳೆ ನೀವು ಬಿಜೆಪಿ ವಿರುದ್ಧ ಮತ ಚಲಾಯಿಸಿ, ಸದಸ್ಯತ್ವ ರದ್ದಾಗದಂತೆ ನೋಡಿಕೊಳ್ಳುವುದು ನನ್ನ ಜವಾಬ್ದಾರಿ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com