ಅಯೋಧ್ಯೆ ಐತಿಹಾಸಿಕ ತೀರ್ಪು: ಮರು ಪರಿಶೀಲನಾ ಅರ್ಜಿ ಸಲ್ಲಿಸದಿರಲೂ ವಕ್ಫ್ ಬೋರ್ಡ್ ನಿರ್ಧಾರ!

ಅಯೋಧ್ಯೆ ಐತಿಹಾಸಿಕ ತೀರ್ಪು ಸಂಬಂಧ ಮರು ಪರಿಶೀಲನಾ ಅರ್ಜಿ ಸಲ್ಲಿಸದಿರಲು ಸುನ್ನಿ ವಕ್ಫ್ ಬೋರ್ಡ್ ನಿರ್ಧರಿಸಿದೆ.

Published: 26th November 2019 01:43 PM  |   Last Updated: 26th November 2019 01:43 PM   |  A+A-


Ayodhya

ಅಯೋಧ್ಯೆ

Posted By : Vishwanath S
Source : Online Desk

ನವದೆಹಲಿ: ಅಯೋಧ್ಯೆ ಐತಿಹಾಸಿಕ ತೀರ್ಪು ಸಂಬಂಧ ಮರು ಪರಿಶೀಲನಾ ಅರ್ಜಿ ಸಲ್ಲಿಸದಿರಲು ಸುನ್ನಿ ವಕ್ಫ್ ಬೋರ್ಡ್ ನಿರ್ಧರಿಸಿದೆ. 

ವಕ್ಫ್ ಬೋರ್ಡ್ ನ 7 ದಾವೆದಾರರ ನಡೆಸಿದ ಸಭೆಯಲ್ಲಿ 6 ದಾವೆದಾರರು ಮರು ಪರಿಶೀಲನಾ ಅರ್ಜಿಸಲು ಒಪ್ಪದ ಹಿನ್ನೆಲೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ ಎನ್ನಲಾಗಿದೆ. 

ಸುಪ್ರೀಂ ಕೋರ್ಟ್ ವಿವಾದಿತ ಭೂಮಿಯನ್ನು ರಾಮಲಲ್ಲಾಗೆ ನೀಡಿತ್ತು. ಇನ್ನು ಬಾಬರಿ ಮಸೀದಿ ಧ್ವಂಸ ಮಾಡಿ ಮತ್ತೊಂದು ಧರ್ಮದ ಆಚರಣೆಗೆ ಧಕ್ಕೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಅಯೋಧ್ಯೆಯಲ್ಲೇ ವಕ್ಫ್ ಬೋರ್ಡ್ ಗೆ 5 ಎಕರೆ ಭೂಮಿಯನ್ನು ನೀಡಲು ಆದೇಶಿಸಿತ್ತು.

Stay up to date on all the latest ರಾಷ್ಟ್ರೀಯ news with The Kannadaprabha App. Download now
facebook twitter whatsapp