ನಾಳೆ ವಿಶೇಷ ಅಧಿವೇಶನದ ಕರೆದ ಮಹಾ ರಾಜ್ಯಪಾಲ, ಮುಖ್ಯಮಂತ್ರಿಯಾಗಲು ಉದ್ಧವ್ ಸಿದ್ಧತೆ

ಬಹುಮತ ಸಾಬೀತುಪಡಿಸುವ ಮುನ್ನವೇ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಮಂಗಳವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇದರ ಬೆನ್ನಲ್ಲೇ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರು...
ಎನ್ ಸಿಪಿ, ಶಿವಸೇನಾ, ಕಾಂಗ್ರೆಸ್ ನಾಯಕರು
ಎನ್ ಸಿಪಿ, ಶಿವಸೇನಾ, ಕಾಂಗ್ರೆಸ್ ನಾಯಕರು

ಮುಂಬೈ: ಬಹುಮತ ಸಾಬೀತುಪಡಿಸುವ ಮುನ್ನವೇ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಮಂಗಳವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇದರ ಬೆನ್ನಲ್ಲೇ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರು ಬುಧವಾರ ವಿಶೇಷ ಅಧಿವೇಶನ ಕರೆದಿದ್ದು, ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಮಹಾ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲು ಭರ್ಜರಿ ಸಿದ್ಧತೆ ನಡೆಸಿದ್ದಾರೆ.

ಭಗತ್ ಸಿಂಗ್ ಕೋಶ್ಯಾರಿ ಅವರು ನಾಳೆ ಬೆಳಗ್ಗೆ 8 ಗಂಟೆಗೆ ವಿಧಾನಸಭಾ ವಿಶೇಷ ಅಧಿವೇಶನ ಕರೆದಿದ್ದು, ಹೊಸದಾಗಿ ವಿಧಾನಸಭೆ ಆಯ್ಕೆಯಾದ ಎಲ್ಲಾ 288 ಸದಸ್ಯರು ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಶಾಸಕರಿಗೆ ಪ್ರಮಾಣವಚನ ಬೋಧಿಸುವುದಕ್ಕಾಗಿ ಬಿಜೆಪಿ ಶಾಸಕ ಕಾಳಿದಾಸ್ ಕೊಲಂಬಕರ್ ಅವರನ್ನು ಹಂಗಾಮಿ ಸ್ಪೀಕರ್ ಆಗಿ ರಾಜ್ಯಪಾಲರು ನೇಮಕ ಮಾಡಿದ್ದಾರೆ.

ಬಹುಮತ ಸಾಬೀತು ಪಡಿಸಲು ಸಾಕಷ್ಟು ಸರ್ಕಸ್​ ಮಾಡಿದ ಬಿಜೆಪಿ ಕೊನೆಗೂ ಸೋಲೊಪ್ಪಿಕೊಂಡಿದ್ದು, ಮುಖ್ಯಮಂತ್ರಿಯಾಗಿ ಮೂರೇ ದಿನಕ್ಕೆ ರಾಜೀನಾಮೆ ನೀಡಿದ್ದಾರೆ. ಫಡ್ನವಿಸ್ ರಾಜಿನಾಮೆ ನಂತರ ಶಿವಸೇನಾ, ಕಾಂಗ್ರೆಸ್ ಹಾಗೂ ಎನ್ ಸಿಪಿ ನಾಯಕರು ಸರ್ಕಾರ ರಚಿಸಲು ಮುಂದಾಗಿದ್ದು, ರಾಜ್ಯಪಾಲರ ಆಹ್ವಾನಕ್ಕಾಗಿ ಕಾಯುತ್ತಿದ್ದಾರೆ.

ಈ ಮಧ್ಯೆ ಮೂರು ಪಕ್ಷಗಳು ಇಂದು ರಾತ್ರಿ ಖಾಸಗಿ ಹೋಟೆಲ್ ನಲ್ಲಿ ಸಭೆ ಕರೆದಿದ್ದು, ಉದ್ಧವ್ ಠಾಕ್ರೆಯನ್ನು ಮುಖ್ಯಮಂತ್ರಿಯಾಗಿ ನೇಮಕ ಮಾಡುವ ಸಾಧ್ಯತೆ ಇದೆ.

ಇಂದು ರಾತ್ರಿಯೇ ರಾಜ್ಯಪಾಲರು ಸರ್ಕಾರ ರಚಿಸುವಂತೆ ಆಹ್ವಾನ ನೀಡುವ ಸಾಧ್ಯತೆ ಇದ್ದು, ನಾಳೆ ಶಿವಾಜಿ ಪಾರ್ಕ್ ನಲ್ಲಿ ಉದ್ಧವ್ ಠಾಕ್ರೆ ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com