ಕಾಶ್ಮೀರ: ಅನಂತ್ ನಾಗ್, ಶ್ರೀನಗರದಲ್ಲಿ ಸ್ಫೋಟ, ಇಬ್ಬರು ಸಾವು, ಏಳು ಮಂದಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಹಾಗೂ ಶ್ರೀನಗರ ಜಿಲ್ಲೆಯಲ್ಲಿ ಮಂಗಳವಾರ ಅವಳಿ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಮತ್ತು ಏಳು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಹಾಗೂ ಶ್ರೀನಗರ ಜಿಲ್ಲೆಯಲ್ಲಿ ಮಂಗಳವಾರ ಅವಳಿ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಮತ್ತು ಏಳು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ದಕ್ಷಿಣ ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ವಾಗೂರದ ಸರ್ಕಾರಿ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ಉಗ್ರರು ಗ್ರನೇಡ್ ದಾಳಿ ನಡೆಸಿದ್ದು, ಈ ದಾಳಿಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಮತ್ತು ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

ಇಂದು ಮಧ್ಯಾಹ್ನ ಶ್ರೀನಗರದ ಮಾರುಕಟ್ಚೆ ಪ್ರದೇಶದ ಸರ್ ಸೈಯದ್ ಗೇಟ್ ಬಳಿ ಮತ್ತೊಂದು ಸ್ಫೋಟ ಸಂಭವಿಸಿದ್ದು, ಈ ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಮುಂಚೆ, ಪ್ರಾಥಮಿಕ ತನಿಖೆಯಲ್ಲಿ ಸ್ಫೋಟಕ್ಕೆ ಗ್ರೆನೇಡ್ ಕಾರಣ ಅಲ್ಲ. ಇದು ಕಡಿಮೆ ತೀವ್ರತೆಯ ಬಾಂಬ್ ಸ್ಫೋಟ ಎಂದು ತಿಳಿದು ಬಂದಿತ್ತು. ಹೆಚ್ಚಿನ ತನಿಖೆ ಮುಂದುವರೆದಿದೆ ಎಂದು ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com