ಉಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಎನ್ ಸಿಪಿ ಶಾಸಕಾಂಗ ಸಭೆಯಲ್ಲಿ ಅಜಿತ್ ಪವಾರ್ ಹಾಜರು

ಕಳೆದ ವಾರ ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಗಾಗಿ ಬಿಜೆಪಿಯೊಂದಿಗೆ ಕೈ ಜೋಡಿಸಿದ್ದ ಎನ್ ಸಿಪಿ ಮುಖಂಡ ಅಜಿತ್ ಪವಾರ್, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಇಂದು ನಡೆದ ಎನ್ ಸಿಪಿ ಶಾಸಕಾಂಗ ಸಭೆಯಲ್ಲಿ ಪಾಲ್ಗೊಂಡಿದ್ದರು
ಅಜಿತ್ ಪವಾರ್
ಅಜಿತ್ ಪವಾರ್

ಮುಂಬೈ: ಕಳೆದ ವಾರ ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಗಾಗಿ ಬಿಜೆಪಿಯೊಂದಿಗೆ ಕೈ ಜೋಡಿಸಿದ್ದ ಎನ್ ಸಿಪಿ ಮುಖಂಡ ಅಜಿತ್ ಪವಾರ್, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಇಂದು ನಡೆದ ಎನ್ ಸಿಪಿ ಶಾಸಕಾಂಗ ಸಭೆಯಲ್ಲಿ ಪಾಲ್ಗೊಂಡಿದ್ದರು. 

ಶಿವಸೇನಾ ಮುಖ್ಯಸ್ಥ ಉದ್ದವ್ ಠಾಕ್ರೆ ಮುಖ್ಯಮಂತ್ರಿಯಾಗಿ ಪದ ಗ್ರಹಣ ಸಮಾರಂಭದ ಅಂಗವಾಗಿ ವೈಬಿ ಚಾವ್ಹಣ್  ಕೇಂದ್ರದಲ್ಲಿ ನಡೆದ ಸಭೆಯಲ್ಲಿ ಮಹಾರಾಷ್ಟ್ರ ಎನ್ ಸಿಪಿ ಮುಖ್ಯಸ್ಥ ಜಯಂತ್ ಪಾಟೀಲ್, ಪಕ್ಷದ ಹಿರಿಯ ಮುಖಂಡರಾದ ಚಾಗನ್ ಭುಜ್ಬುಲ್ ಮತ್ತು ದಿಲೀಪ್ ವಾಲ್ಸೆ ಪಾಟೀಲ್  ಮತ್ತಿತರರು ಭಾಗವಹಿಸಿದ್ದರು. 

ಅಕ್ಟೋಬರ್ 21 ರಂದು ನಡೆದ ಚುನಾವಣೆಯಲ್ಲಿ ಪುಣೆಯ ಬಾರಮತಿ ಕ್ಷೇತ್ರದಿಂದ ಸುಮಾರು 1.65 ಲಕ್ಷ ಮತಗಳ ಅಂತರದೊಂದಿಗೆ ಗೆಲುವು ಸಾಧಿಸಿದ್ದ ಅಜಿತ್ ಪವಾರ್, ಕಳೆದ ಶನಿವಾರ ಕುಟುಂಬ ಹಾಗೂ ಪಕ್ಷದ ವಿರುದ್ಧ ಬಂಡೆದ್ದು, ಬಿಜೆಪಿ ಜೊತೆಗೆ ಕೈ ಜೋಡಿಸುವ ಮೂಲಕ ದೇವೇಂದ್ರ ಫಡ್ನವೀಸ್ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಇದರಿಂದಾಗಿ ಅದೇ ದಿನ ಎನ್ ಸಿಪಿ ಶಾಸಕಾಂಗ ಪಕ್ಷದ ನಾಯಕತ್ವದಿಂದ ಅವರನ್ನು ಉಚ್ಚಾಟಿಸಲಾಗಿತ್ತು. ಆದಾಗ್ಯೂ, ಪಕ್ಷದ ಸದಸ್ಯರಾಗಿ ಮುಂದುವರೆದಿದ್ದರು.

ಮಂಗಳವಾರ ವೈಯಕ್ತಿಕ ಕಾರಣ ನೀಡಿ ಅಜಿತ್ ಪವಾರ್ ಉಪಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದರ ಬೆನ್ನಲ್ಲೇ ದೇವೇಂದ್ರ ಫಡ್ನವೀಸ್ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡುವ ಮೂಲಕ ಬಿಜೆಪಿ ನೇತೃತ್ವದ ಸರ್ಕಾರ ಪತನಗೊಂಡಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com