ಮೋದಿ ಸರ್ಕಾರದ ವಿರುದ್ಧ ಗುಡುಗಿದ ಸೋನಿಯಾ ಗಾಂಧಿ  

ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬುಡಮೇಲು ಮಾಡುವ ಕೃತ್ಯದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ತೊಡಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ತೀವ್ರ ವಾಗ್ದಾಳಿ ಮಾಡಿದ್ದಾರೆ
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವ ದೆಹಲಿ:  ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬುಡಮೇಲು ಮಾಡುವ ಕೃತ್ಯದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ತೊಡಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ತೀವ್ರ ವಾಗ್ದಾಳಿ ಮಾಡಿದ್ದಾರೆ.

 ಕಾಂಗ್ರೆಸ್ ಸಂಸದೀಯ ಸಭೆಯಲ್ಲಿ ಮಾತನಾಡಿದ ಅವರು, ತಮ್ಮ ಮಾತಿನ ಉದ್ದಕ್ಕೂ ಮೋದಿ ಸರ್ಕಾರದ ಜನ ವಿರೋಧಿ ನೀತಿಗಳನ್ನು ತರಾಟೆಗೆ ತೆಗೆದುಕೊಂಡರು. ದೇಶದ ಆರ್ಥಿಕ ಪರಿಸ್ಥಿತಿ ಸುಧಾರಣೆ ಮಾಡಲಾರದಷ್ಟು ಅಧಃಪತನಕ್ಕೆ ಇಳಿದಿದ್ದರೂ ಅದನ್ನು ಸರಿಪಡಿಸುವ ಕಡೆಗೆ ಕಿಂಚಿತ್ತೂ ಗಮನ ಕೊಡದ, ಕಾಳಜಿ ವಹಿಸದ ನರೇಂದ್ರ ಮೋದಿ ಅವರು ಕೀಳುಮಟ್ಟದ ರಾಜಕೀಯ ಮಾಡುತ್ತಿರುವುದು ನಿಜಕ್ಕೂ ನಾಚಿಕೆಗೇಡಿನ ಪ್ರಸಂಗ ಎಂದು ದೂರಿದರು. 

 ಮೋದಿ ಸರ್ಕಾರದ ಜನ ವಿರೋಧಿ, ರೈತ ವಿರೋಧಿ ನೀತಿಗಳ ವಿರುದ್ಧ ಕಾಂಗ್ರೆಸ್ ಪಕ್ಷ, ದೇಶದ ಉದ್ದಗಲಕ್ಕೂ ಹೋರಾಟ ಮಾಡಲಿದೆ ಎಂದು ಸೋನಿಯಾ ಗುಡುಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com