ಮಹಾರಾಷ್ಟ್ರ ನೂತನ ಮುಖ್ಯಮಂತ್ರಿಯಾಗಿ ಉದ್ಧವ್ ಠಾಕ್ರೆ ಪ್ರಮಾಣ

ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು.
ಉದ್ಧವ್ ಠಾಕ್ರೆ
ಉದ್ಧವ್ ಠಾಕ್ರೆ

ಮುಂಬೈ: ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು.

ಇಂದು ಸಂಜೆ ಮುಂಬೈನ ಶಿವಾಜಿ ಪಾರ್ಕ್ ನಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ , ‘ಮಹಾ ವಿಕಾಸ್‌ ಅಘಾಡಿ’ (ಶಿವಸೇನೆ-ಎನ್‌ಸಿಪಿ-ಕಾಂಗ್ರೆಸ್‌) ನಾಯಕ ಉದ್ಧವ್ ಠಾಕ್ರೆ ಅವರು ಛತ್ರಪತಿ ಶಿವಾಜಿ ಮಹಾರಾಜ್ ಅವರ ಹೆಸರಿನಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದರು,

ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರು ಉದ್ಧವ್ ಠಾಕ್ರೆ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

ಉದ್ಧವ್‌ ಠಾಕ್ರೆ ಪ್ರಮಾಣವಚನ ಸ್ವೀಕರಿಸಿದ ನಂತರ ಏಕನಾಥ ಶಿಂಧೆ,  ಸುಭಾಷ್‌ ದೇಸಾಯ್‌, ಜಯಂತ್ ಪಾಟೀಲ್, ನಿತಿನ್ ರಾವತ್, ಛಗನ್ ಚಂದ್ರಕಾಂತ್ ಭುಜಬಲ್ ಹಾಗೂ ಸುಭಾಷ್ ರಾಜರಾಮ್ ದೇಸಾಯಿ ಅವರು ಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಿದರು.

ಅದ್ಧೂರಿ ಕಾರ್ಯಕ್ರಮದಲ್ಲಿ ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್, ಡಿಎಂಕೆ ನಾಯಕ ಟಿಆರ್ ಬಾಲು, ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್, ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಹಾಗೂ ಎನ್ ಸಿಪಿ ನಾಯಕ ಪ್ರಫುಲ್ ಪಟೇಲ್ ಸೇರಿದಂತೆ ಶಿವಸೇನಾ, ಎನ್ ಸಿಪಿ ಹಾಗೂ ಕಾಂಗ್ರೆಸ್ ನ ಹಲವು ಮುಖಂಡರು ಮತ್ತು ಅಸಂಖ್ಯಾತ ಕಾರ್ಯಕರ್ತರು ಭಾಗವಹಿಸಿದ್ದರು.

ಶಿವಾಜಿ ಪಾರ್ಕ್‌ ಸುತ್ತಮುತ್ತಲೂ ಸುಮಾರು 2 ಸಾವಿರಕ್ಕೂ ಅಧಿಕ ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ.

ಇನ್ನು ಮುಂಜಾಗ್ರತ ಕ್ರಮವಾಗಿ ಪಾರ್ಕ್ ಸುತ್ತಮುತ್ತ ನೂರಾರು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಶ್ವಾನದಳ, ತುರ್ತು ಪ್ರಹಾರ ದಳಗಳನ್ನು ಭದ್ರತೆಗೆ ನಿಯೋಜಿಸಲಾಗಿದೆ. ಪಾರ್ಕ್ ಸುತ್ತಮುತ್ತ, ‘ಠಾಕ್ರೆ ಸರ್ಕಾರ್’ ಪೋಸ್ಟರ್‌ಗಳು ರಾರಾಜಿಸುತ್ತಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com