ಹೈದರಾಬಾದ್: ಪಶುವೈದ್ಯೆ ಪ್ರಿಯಾಂಕಾ ರೆಡ್ಡಿ ಶವ ಸಿಕ್ಕ ಪ್ರದೇಶದಲ್ಲೇ ಮತ್ತೊಬ್ಬ ಮಹಿಳೆಯ ಶವ ಪತ್ತೆ

ದೇಶವನ್ನೇ ಬೆಚ್ಚಿಬೀಳಿಸಿದ ಪಶುವೈದ್ಯೆ ಪ್ರಿಯಾಂಕಾ ರೆಡ್ಡಿ ಅತ್ಯಾಚಾರ ಹಾಗೂ ಕೊಲೆ ನಡೆದ ಮಾರನೆ ದಿನವೇ ಮತ್ತೊಬ್ಬ ಮಹಿಳೆಯ ಶವ ಪತ್ತೆಯಾಗಿದ್ದು, ಆಕೆಯ ಮೇಲೂ ಅತ್ಯಾಚಾರ ಎಸಗಿ, ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಹೈದರಾಬಾದ್: ದೇಶವನ್ನೇ ಬೆಚ್ಚಿಬೀಳಿಸಿದ ಪಶುವೈದ್ಯೆ ಪ್ರಿಯಾಂಕಾ ರೆಡ್ಡಿ ಅತ್ಯಾಚಾರ ಹಾಗೂ ಕೊಲೆ ನಡೆದ ಮಾರನೆ ದಿನವೇ ಮತ್ತೊಬ್ಬ ಮಹಿಳೆಯ ಶವ ಪತ್ತೆಯಾಗಿದ್ದು, ಆಕೆಯ ಮೇಲೂ ಅತ್ಯಾಚಾರ ಎಸಗಿ, ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಶಂಶಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯ ಸಿದ್ದುಲಗಟ್ಟದಲ್ಲಿ 35 ವರ್ಷದ ಮಹಿಳೆಯ ಅರ್ಧ ಸುಟ್ಟು ಕರಕಲಾದ ಶವ ಪತ್ತೆಯಾಗಿದ್ದು, ದುಷ್ಕರ್ಮಿಗಳು ಮಹಿಳೆಯನ್ನು ಕೊಲೆ ಮಾಡಿ ಪೆಟ್ರೋಲ್ ಅಥವಾ ಸೀಮೆಎಣ್ಣೆ ಹಾಕಿ ಸುಟ್ಟಿರುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಮ್ಮ ಪ್ರಾಜೆಕ್ಟ್ ಗಾಗಿ ದೃಶ್ಯಗಳ ಚಿತ್ರೀಕರಣಕ್ಕೆ ತೆರಳಿದ್ದ ನಾಲ್ವರು ಯುವಕರು, ಪೊದೆಗಳ ಬಳಿ ದಟ್ಟ ಹೊಗೆ ಮತ್ತು ಮಾಂಸವನ್ನು ಸುಡುವ ವಾಸನೆ ಬರುತ್ತಿರುವುದಾಗಿ ನಮಗೆ ತಿಳಿಸಿದರು. ನಾವು ಕೂಡಲೇ ಸ್ಥಳಕ್ಕೆ ಹೋಗಿ ಪರಿಶೀಲಿಸಿದಾಗ ಅರ್ಧ ಸುಟ್ಟ ಮಹಿಳೆಯ ಶವ ಪತ್ತೆಯಾಗಿದೆ ಎಂದು ಶಂಶಾಬಾದ್ ಎಸಿಪಿ ಅಶೋಕ್ ಕುಮಾರ್ ಗೌಡ್ ಅವರು ತಿಳಿಸಿದ್ದಾರೆ.

ದುಷ್ಕರ್ಮಿಗಳು ಮಹಿಳೆಯನ್ನು ಕೊಲೆ, ಶವವನ್ನು ಇಲ್ಲಿ ತಂದು ಸುಡಲು ಯತ್ನಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

ನಿನ್ನೆಯಷ್ಟೇ 26 ವರ್ಷದ ಪ್ರಿಯಾಂಕಾ ರೆಡ್ಡಿ ಮೇಲೆ ಅತ್ಯಾಚಾರ ಎಸಗಿ, ಬಳಿಕ ಆಕೆಯನ್ನು ಕೊಲೆ ಮಾಡಿ ಸುಟ್ಟು ಹಾಕಿದ್ದರು. ಈಗ ಮತ್ತೊಂದು ಮಹಿಳೆಯ ಶವ ಪತ್ತೆಯಾಗಿದ್ದು, ಇಡೀ ತೆಲಂಗಾಣ ಬೆಚ್ಚಿ ಬಿದ್ದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com