ಜಾರ್ಖಂಡ್ ವಿಧಾನಸಭೆ ಚುನಾವಣೆ: ಮೊದಲ ಹಂತದ ಮತದಾನ ಆರಂಭ

ಜಾರ್ಖಂಡ್ ವಿಧಾನಸಭೆ ಚುನಾವಣೆ 2019ರ ಮೊದಲ ಹಂತದ ಮತದಾನ ಆರಂಭವಾಗಿದ್ದು, 13 ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯುತ್ತಿದೆ.
ಜಾರ್ಖಂಡ್ ವಿಧಾನಸಭೆ ಚುನಾವಣೆ: ಮೊದಲ ಹಂತದ ಮತದಾನ ಆರಂಭ
ಜಾರ್ಖಂಡ್ ವಿಧಾನಸಭೆ ಚುನಾವಣೆ: ಮೊದಲ ಹಂತದ ಮತದಾನ ಆರಂಭ

ರಾಂಚಿ: ಜಾರ್ಖಂಡ್ ವಿಧಾನಸಭೆ ಚುನಾವಣೆ 2019ರ ಮೊದಲ ಹಂತದ ಮತದಾನ ಆರಂಭವಾಗಿದ್ದು, 13 ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯುತ್ತಿದೆ.

ಚತ್ರ, ಗುಮ್ಲಾ, ಬಿಶುನ್‌ಪುರ, ಲೋಹರ್‌ದಾಗ, ಮಾನಿಕಾ, ಲತೇಹರ್, ಪಂಕಿ, ಡಾಲ್ಟೋಂಗಂಜ್, ಬಿಶ್ರಾಂಪುರ, hat ತ್ತರ್‌ಪುರ, ಹುಸೇನಾಬಾದ್, ಗರ್ಹ್ವಾ ಮತ್ತು ಭಾವನಾಥಪುರ ನಲ್ಲಿ ಇಂದು ಮತದಾನ ನಡೆಯುತ್ತಿದೆ. ಬೆಳಗ್ಗೆ  7 ಗಂಟೆಯಿಂದ ಮಧ್ಯಾಹ್ನ 3 ಗಂಟೆಯ ವರೆಗೂ ಮತದಾನ ನಡೆಯಲಿದ್ದು, ಮತದಾನಕ್ಕಾಗಿ ಕೇಂದ್ರ ಚುನಾವಣಾ ಆಯೋಗ ಸೂಕ್ತ ಭದ್ರತಾ ವ್ಯವಸ್ಥೆ ಕಲ್ಪಿಸಿದೆ. 

ಇಂದಿನ ಮತದಾನದಲ್ಲಿ ಒಟ್ಟು 37,83,055 ಮಂದಿ ಮತದಾರರು ತಮ್ಮ ಹಕ್ಕು ಚಲಾಯಿಸುತ್ತಿದ್ದು, ಈ ಪೈಕಿ 18,01,356 ಮಹಿಳಾ ಮತದಾರರೂ ಸೇರಿದ್ದಾರೆ. ಒಟ್ಟು 13 ಕ್ಷೇತ್ರಗಳಲ್ಲಿ 189 ಮಂದಿ ಅಭ್ಯರ್ಥಿಗಳು ತಮ್ಮ ಅದೃಷ್ಟ ಪರೀಕ್ಷೆಗೆ ನಿಂತಿದ್ದು, ಈ ಪೈಕಿ 15 ಮಂದಿ ಮಹಿಳಾ ಅಭ್ಯರ್ಥಿಗಳೂ ಕಣದಲ್ಲಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com