ಜಮ್ಮು- ಕಾಶ್ಮೀರ: ಗಂಡರ್‌ಬಲ್ ನಲ್ಲಿ ಇಬ್ಬರು ಉಗ್ರರ ಹತ್ಯೆ, ಜಂಟಿ ಕಾರ್ಯಾಚರಣೆ ಪ್ರಗತಿಯಲ್ಲಿ 

ಕಣಿವೆ ರಾಜ್ಯ ಜಮ್ಮು- ಕಾಶ್ಮೀರದ ಗಂಡರ್ ಬಲ್ ಜಿಲ್ಲೆಯ ಟ್ರಂಖಾಲ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಇಂದು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಸೇನೆಯ  ಅಧಿಕಾರಿಗಳು ತಿಳಿಸಿದ್ದಾರೆ.

Published: 01st October 2019 02:46 PM  |   Last Updated: 03rd October 2019 02:14 PM   |  A+A-


CasualPhoto

ಸಾಂದರ್ಭಿಕ ಚಿತ್ರ

Posted By : Nagaraja AB
Source : ANI

ಗಂಡರ್ ಬಲ್ : ಕಣಿವೆ ರಾಜ್ಯ ಜಮ್ಮು- ಕಾಶ್ಮೀರದ ಗಂಡರ್ ಬಲ್ ಜಿಲ್ಲೆಯ ಟ್ರಂಖಾಲ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಇಂದು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಸೇನೆಯ  ಅಧಿಕಾರಿಗಳು ತಿಳಿಸಿದ್ದಾರೆ.

ಸೆಪ್ಟೆಂಬರ್ 28 ರಂದು ಉಗ್ರನೊಬ್ಬನನ್ನು ಹತ್ಯೆ ಮಾಡಿದ್ದ ಭದ್ರತಾ ಪಡೆಗಳು ಇಂದು ಬೆಳಗ್ಗೆ ಇಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿವೆ. ಎನ್ ಕೌಂಟರ್ ನಡೆದ ಸ್ಥಳದಿಂದ ಭಾರೀ ಪ್ರಮಾಣದ ಶಸಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. 

ಬೆಳಗ್ಗೆ ಉಗ್ರನೊಬ್ಬನನ್ನು ಹತ್ಯೆ ಮಾಡಿರುವುದಾಗಿ ಭಾರತೀಯ ಸೇನೆಯ ಉತ್ತರ ವಿಭಾಗದ ಕಮಾಂಡರ್ ಟ್ವೀಟ್ ಮಾಡಿದ್ದರು. ಅದರ ಬೆನ್ನಲ್ಲೇ ಗಂಡರ್ ಬಲ್ ನಲ್ಲಿ ಮತ್ತೊಬ್ಬ ಉಗ್ರನನ್ನು ಹತ್ಯೆಗೈಯಲಾಗಿದೆ. ಕಾರ್ಯಾಚರಣೆ ಮುಂದುವರೆದಿದೆ ಎಂದು ತಿಳಿಸಲಾಗಿದೆ. 

Stay up to date on all the latest ರಾಷ್ಟ್ರೀಯ news
Poll
RBI

ಕಾರ್ಪೊರೇಟ್‌ ಕಂಪನಿಗಳಿಗೆ ಬ್ಯಾಂಕ್‌ ಆರಂಭಿಸಲು ಅನುಮತಿಸುವಂತೆ ಕೇಂದ್ರ ಸರ್ಕಾರಕ್ಕೆ ಆರ್ ಬಿಐ ನೀಡಿರುವ ಸಲಹೆಯನ್ನು ಸ್ವಾಗತಿಸುತ್ತೀರಾ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp