ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹುಟ್ಟುಹಬ್ಬ: ಪ್ರಧಾನಿ ಮೋದಿ ಶುಭಾಶಯ

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ 74ನೇ ಜನ್ಮ ದಿನದ ನಿಮಿತ್ತ ಪ್ರಧಾನಿ ನರೇಂದ್ರ ಮೋದಿ ಅವರು ಶುಭಾಶಯ ಕೋರಿದ್ದಾರೆ.

Published: 01st October 2019 09:42 AM  |   Last Updated: 01st October 2019 09:42 AM   |  A+A-


PM Modi greets President Kovind

ಸಂಗ್ರಹ ಚಿತ್ರ

Posted By : Srinivasamurthy VN
Source : UNI

ನವದೆಹಲಿ: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ 74ನೇ ಜನ್ಮ ದಿನದ ನಿಮಿತ್ತ ಪ್ರಧಾನಿ ನರೇಂದ್ರ ಮೋದಿ ಅವರು ಶುಭಾಶಯ ಕೋರಿದ್ದಾರೆ.

ಇಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ 74ನೇ ಜನ್ಮದಿನ. ಈ ಹಿನ್ನೆಲೆಯಲ್ಲಿ ಮಂಗಳವಾರ ಬೆಳಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ. ಟ್ವಿಟರ್ ಮೂಲಕ ಶುಭ ಕೋರಿರುವ ಪ್ರಧಾನಿ ಮೋದಿ, 'ರಾಷ್ಟ್ರಪತಿಯವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಅವರ ಒಳನೋಟಗಳು ಮತ್ತು ನೀತಿ ವಿಷಯಗಳ ತಿಳುವಳಿಕೆಯಿಂದ ಎನ್‌ಡಿಎ ಗಮನಾರ್ಹ ಸಾಧನೆ ಮಾಡಿದೆ. ಬಡವರು ಮತ್ತು ದೀನ ದಲಿತರನ್ನು ಸಬಲೀಕರಣಗೊಳಿಸುವ ಬಗ್ಗೆ ಅವರ ಉತ್ಸಾಹವನ್ನು ಯಾವಾಗಲೂ ನೋಡಬಹುದು' ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ಅಂತೆಯೇ ಕೋವಿಂದ್ ಅವರಿಗೆ ದೀರ್ಘಾಯುಷ್ಯ ಮತ್ತು ಆರೋಗ್ಯವನ್ನು ದೇವರು ಕರುಣಿಸಲಿ ಎಂದು ಪ್ರಧಾನಿ ತಿಳಿಸಿದ್ದಾರೆ.

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು, 1945ರಲ್ಲಿ ಉತ್ತರ ಪ್ರದೇಶದ ಕಾನ್ ಪುರದಲ್ಲಿ ಜನಿಸಿದ್ದರು.

Stay up to date on all the latest ರಾಷ್ಟ್ರೀಯ news with The Kannadaprabha App. Download now
facebook twitter whatsapp