ಸೈರಾ ಚಿತ್ರ ವೀಕ್ಷಣೆ: ಆರು ಪೊಲೀಸ್ ಅಧಿಕಾರಿಗಳಿಗೆ ಕಡ್ಡಾಯ ರಜೆಯ ಶಿಕ್ಷೆ

ಕರ್ತವ್ಯದ ಅವಧಿಯಲ್ಲಿ ಚಿತ್ರಮಂದಿರದಲ್ಲಿ ಸೈರಾ ನರಸಿಂಹ ರೆಡ್ಡಿ ಚಿತ್ರ ವೀಕ್ಷಿಸಿದ ನಾಲ್ವರು ಸಬ್ ಇನ್ಸ್ ಪೆಕ್ಟರ್ ಗಳನ್ನು ಕಡ್ಡಾಯ ರಜೆಯ ಮೇಲೆ ಕಳುಹಿಸಲಾಗಿದೆ. 
ಸೈರಾ ಚಿತ್ರ ವೀಕ್ಷಣೆ: ಆರು ಪೊಲೀಸ್ ಅಧಿಕಾರಿಗಳಿಗೆ ಕಡ್ಡಾಯ ರಜೆಯ ಶಿಕ್ಷೆ
ಸೈರಾ ಚಿತ್ರ ವೀಕ್ಷಣೆ: ಆರು ಪೊಲೀಸ್ ಅಧಿಕಾರಿಗಳಿಗೆ ಕಡ್ಡಾಯ ರಜೆಯ ಶಿಕ್ಷೆ

ಕುರ್ನೂಲ್: ಕರ್ತವ್ಯದ ಅವಧಿಯಲ್ಲಿ ಚಿತ್ರಮಂದಿರದಲ್ಲಿ ಸೈರಾ ನರಸಿಂಹ ರೆಡ್ಡಿ ಚಿತ್ರ ವೀಕ್ಷಿಸಿದ ನಾಲ್ವರು ಸಬ್ ಇನ್ಸ್ ಪೆಕ್ಟರ್ ಗಳನ್ನು ಕಡ್ಡಾಯ ರಜೆಯ ಮೇಲೆ ಕಳುಹಿಸಲಾಗಿದೆ. 

ಅಧಿಕೃತ ಮೂಲಗಳು ಪ್ರಕಾರ, ಈ ಆರು ಸಬ್ ಇನ್ಸ್ ಪೆಕ್ಟರ್ ಗಳು ಚಿರಂಜೀವಿ ಮತ್ತು ಅಮಿತಾಬ್ ಬಚ್ಚನ್ ನಟನೆಯ ಸೈರಾ ನರಸಿಂಹ ರೆಡ್ಡಿ ಚಿತ್ರವನ್ನು ಬಿಡುಗಡೆಗೊಂಡ ಮೊದಲನೇ ದಿನವೇ ವೀಕ್ಷಿಸಲು ಹಿರಿಯ ಅಧಿಕಾರಿಗಳ ಅನುಮತಿ ಪಡೆಯದೆ ತೆರಳಿದ್ದರು. ಅಧಿಕಾರಿಗಳ  ಈ ಅಶಿಸ್ತಿನ ಕ್ರಮದಿಂದ ಅಸಮಾಧಾನಗೊಂಡ ಜಿಲ್ಲಾ ಪೊಲೀಸ್ ಅಧೀಕ್ಷಕರ ಫಕೀರಪ್ಪ ಅವರು ಅಧಿಕಾರಿಗಳನ್ನು ಕಡ್ಡಾಯ ರಜೆಯ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದ್ದಾರೆ. 
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com