ಕೇಂದ್ರ ಸಚಿವ ಗೋಯಲ್ ಮನೆಯಲ್ಲಿ ಕಳ್ಳತನ: ಕಂಪ್ಯೂಟರ್ ಮಾಹಿತಿ, ಬೆಲೆಬಾಳುವ ವಸ್ತು ಕದ್ದ ಕೆಲಸದಾಳು, ಬಂಧನ

ಕೇಂದ್ರ ರೈಲ್ವೇ ಸಚಿವ ಪಿಯೂಷ್ ಗೋಯಲ್ ಮನೆಯಲ್ಲಿ ಕಳ್ಳತನ ನಡೆದಿದ್ದು, ಮನೆಯ ಕಂಪ್ಯೂಟರ್ ನಲ್ಲಿದ್ದ ಮಾಹಿತಿ ಹಾಗೂ ಬೆಲೆ ಬಾಳುವ ವಸ್ತುಗಳು ಕಳ್ಳತನವಾಗಿದೆ ಎಂದು ಪೊಲೀಸರು ಗುರುವಾರ ಮಾಹಿತಿ ನೀಡಿದ್ದಾರೆ. 
ಪಿಯೂಷ್ ಗೋಯಲ್
ಪಿಯೂಷ್ ಗೋಯಲ್

ನವದೆಹಲಿ: ಕೇಂದ್ರ ರೈಲ್ವೇ ಸಚಿವ ಪಿಯೂಷ್ ಗೋಯಲ್ ಮನೆಯಲ್ಲಿ ಕಳ್ಳತನ ನಡೆದಿದ್ದು, ಮನೆಯ ಕಂಪ್ಯೂಟರ್ ನಲ್ಲಿದ್ದ ಮಾಹಿತಿ ಹಾಗೂ ಬೆಲೆ ಬಾಳುವ ವಸ್ತುಗಳು ಕಳ್ಳತನವಾಗಿದೆ ಎಂದು ಪೊಲೀಸರು ಗುರುವಾರ ಮಾಹಿತಿ ನೀಡಿದ್ದಾರೆ. 

ಗೋಯಲ್ ಅವರಿಗೆ ಸಂಬಂಧಿಸಿದ ಕಂಪ್ಯೂಟರ್ ನಲ್ಲಿದ್ದ ಮಾಹಿತಿಗಳನ್ನು ಮನೆಕೆಲಸ ಮಾಡುತ್ತಿದ್ದ ವಿಷ್ಣು ಕುಮಾರ್ ಎಂಬಾತ ಕಳ್ಳತನ ಮಾಡಿದ್ದು, ಅಪರಿಚಿತ ವ್ಯಕ್ತಿಗಳಿಗೆ ಮಾಹಿತಿ ನೀಡಿದ್ದಾನೆಂದು ಹೇಳಲಾಗುತ್ತಿದೆ. 

ರಾಜಧಾನಿ ದೆಹಲಿಯ ನಿವಾಸಿಯಾಗಿರುವ ಆರೋಪಿ ವಿಷ್ಣು (25) ವಿರುದ್ಧ ಇದೀಗ ಐಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಆರೋಪಿಯನ್ನು ಬಂಧಿಸಿರುವ ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ. 

ಸೆ.19ರಂದು ಗೋಯಲ್ ಅವರ ಪತ್ನಿ ಹೊರ ಹೋಗಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ಹಿಂತಿರುಗಿ ಮನೆಗೆ ಬಂದಾಗ ಮನೆಯಲ್ಲಿದ್ದ ಬೆಲೆಬಾಳುವ ವಸ್ತುಗಳು ನಾಪತ್ತೆಯಾಗಿರುವುದು ಕಂಡು ಬಂದಿದೆ. 

ಘಟನೆ ಬಳಿಕ ಮನೆಯಲ್ಲಿ ಕೆಲಸ ಮಾಡುತ್ತಿದ್ದ ವಿಷ್ಣು ಕುಮಾರ್ ನಾಪತ್ತೆಯಾಗಿದ್ದ. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಆರೋಪಿಗಾಗಿ ತೀವ್ರ ಹುಡುಕಾಟ ನಡೆಸಿದ್ದು, ಇದೀಗ ಆರೋಪಿಯನ್ನು ಬಂಧನಕ್ಕೊಳಪಡಿಸಿದ್ದಾರೆ. 

ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 381 (ಕಳ್ಳತನ), 405 (ವಿಶ್ವಾಸದ್ರೋಹ) ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com