ಚುನಾವಣಾ ಕಣಕ್ಕೆ 'ಟಿಕ್ ಟಾಕ್ ಸ್ಟಾರ್' ಸೊನಾಲಿ ಪೊಗಾಟ್ !

ಟಿಕ್ ಟಾಕ್ ಸ್ಟಾರ್ ಸೊನಾಲಿ ಪೊಗಾಟ್ ರಾಜಕೀಯಕ್ಕೆ ಎಂಟ್ರಿ ನೀಡುತ್ತಿದ್ದಾರೆ. ಹರಿಯಾಣ ಅಸೆಂಬ್ಲಿ  ಚುನಾವಣೆಯಲ್ಲಿ  ಬಿಜೆಪಿ ಪಕ್ಷದಿಂದ ಸ್ಪರ್ಧಿಸುತ್ತಿದ್ದಾರೆ. 
Sonali Phogat
Sonali Phogat

ಚಂಡೀಘಡ: ಟಿಕ್ ಟಾಕ್ ಸ್ಟಾರ್ ಸೊನಾಲಿ ಪೊಗಾಟ್ ರಾಜಕೀಯಕ್ಕೆ ಎಂಟ್ರಿ ನೀಡುತ್ತಿದ್ದಾರೆ. ಹರಿಯಾಣ ಅಸೆಂಬ್ಲಿ  ಚುನಾವಣೆಯಲ್ಲಿ  ಬಿಜೆಪಿ ಪಕ್ಷದಿಂದ ಸ್ಪರ್ಧಿಸುತ್ತಿದ್ದಾರೆ. 

ಅಡಂಪುರ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ  ಸೊನಾಲಿ ಪೊಗಾಟ್ ಅವರಿಗೆ ಟಿಕೆಟ್ ನೀಡಲಾಗಿದೆ. ಎಲ್ಲಾ  ಅಭಿಮಾನಿಗಳು  ತಮ್ಮಗೆ  ಬೆಂಬಲ ವ್ಯಕ್ತಪಡಿಸಿದ್ದಾರೆ. ನಾಮಪತ್ರ ಸಲ್ಲಿಕೆಗೆ ಕಾಯುತ್ತಿದ್ದಾರೆ ಎಂದು ಸೊನಾಲಿ ಪೊಗಾಟ್ ತಿಳಿಸಿದ್ದಾರೆ.

ಸದೃಢ ಕಾರ್ಯಕ್ಕಾಗಿ ಬಿಜೆಪಿ ಪಕ್ಷದಿಂದ ಟಿಕೆಟ್ ನೀಡಲಾಗಿದೆ. ಈ ಚುನಾವಣೆಯಲ್ಲಿ ಗೆಲುವು ಸಾಧಿಸುವುದಾಗಿ ಸೊನಾಲಿ ಪೊಗಾಟ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com