ಉಗ್ರರು, ಪ್ರತ್ಯೇಕತಾವಾದಿಗಳಿಗೆ ದೆಹಲಿ ಪಾಕ್ ಕಚೇರಿ ಮೂಲಕ ಆರ್ಥಿಕ ನೆರವು!

370 ವಿಧಿ ರದ್ಧತಿ ಬಳಿಕ ಭಾರತದಲ್ಲಿ ವಿಧ್ವಂಸಕ ಕೃತ್ಯವೆಸಗಲು ಪಾಕಿಸ್ತಾನ ಹವಣಿಸುತ್ತಿದ್ದು, ಗಡಿಯಲ್ಲಿ ಉಗ್ರರನ್ನು ನುಸುಳಿಸಲು ಸಾಕಷ್ಟು ಯತ್ನ ನಡೆಸುತ್ತಿದೆ. ಇದರ ನಡುವಲ್ಲೇ ರಾಜಧಾನಿ ದೆಹಲಿಯಲ್ಲಿರುವ ಪಾಕಿಸ್ತಾನ ರಾಯಭಾರಿ ಕಚೇರಿಯೇ ಉಗ್ರರಿಗೆ ಆರ್ಥಿಕ ನೆರವು ನೀಡುತ್ತಿದೆ ಎಂಬ ಆಘಾತಕಾರಿ ಅಂಶವನ್ನು ಎನ್ಐಎ ಬಹಿರಂಗಪಡಿಸಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ದೆಹಲಿ ಪಾಕಿಸ್ತಾನ ರಾಯಭಾರಿ ಕಚೇರಿಯಿಂದ ಉಗ್ರರಿಗೆ ಹಣ: ಎನ್ಐಎ ಜಾರ್ಜ್'ಶೀಟ್'ನಲ್ಲಿ ಆಘಾತಕಾರಿ ಮಾಹಿತಿ ಬಹಿರಂಗ

ನವದೆಹಲಿ: 370 ವಿಧಿ ರದ್ಧತಿ ಬಳಿಕ ಭಾರತದಲ್ಲಿ ವಿಧ್ವಂಸಕ ಕೃತ್ಯವೆಸಗಲು ಪಾಕಿಸ್ತಾನ ಹವಣಿಸುತ್ತಿದ್ದು, ಗಡಿಯಲ್ಲಿ ಉಗ್ರರನ್ನು ನುಸುಳಿಸಲು ಸಾಕಷ್ಟು ಯತ್ನ ನಡೆಸುತ್ತಿದೆ. ಇದರ ನಡುವಲ್ಲೇ ರಾಜಧಾನಿ ದೆಹಲಿಯಲ್ಲಿರುವ ಪಾಕಿಸ್ತಾನ ರಾಯಭಾರಿ ಕಚೇರಿಯೇ ಉಗ್ರರಿಗೆ ಆರ್ಥಿಕ ನೆರವು ನೀಡುತ್ತಿದೆ ಎಂಬ ಆಘಾತಕಾರಿ ಅಂಶವನ್ನು ಎನ್ಐಎ ಬಹಿರಂಗಪಡಿಸಿದೆ. 

ಕಾಶ್ಮೀರದಲ್ಲಿ ಅಶಾಂತಿ ಸೃಷ್ಟಿಸಲು ದೆಹಲಿಯಲ್ಲಿರುವ ಪಾಕಿಸ್ತಾನ ರಾಯಭಾರಿ ಕಚೇರಿಯಿಂದಲೇ ಉಗ್ರರಿಗೆ ಹಾಗೂ ಪ್ರತ್ಯೇಕತವಾದಿಗಳಿಗೆ ಹಣ ರವಾನೆಯಾಗುತ್ತಿದೆ ಎಂಬ ಮಾಹಿತಿಯನ್ನು ಎನ್ಐಎ ಚಾರ್ಜ್'ಶೀಟ್ ನಲ್ಲಿ ಬಹಿರಂಗಗೊಂಡಿದೆ. 

ರಾಜಧಾನಿ ದೆಹಲಿಯ ನ್ಯಾಯಾಲಯವೊಂದಕ್ಕೆ ಎನ್ಐಎ 3 ಸಾವಿರ ಪುಟಗಳ ಪೂರಕ ಆರೋಪಪಟ್ಟಿಯನ್ನು ಸಲ್ಲಿಕೆ ಮಾಡಿದ್ದು, ಆರೋಪ ಪಟ್ಟಿಯಲ್ಲಿ ಈ ಕಳವಳಕಾರಿ ಅಂಶ ಬೆಳಕಿಗೆ ಬಂದಿದೆ. 

ಈವರೆಗೂ ಗಡಿಯಾಚೆಯಿಂದ ಭಯೋತ್ಪಾದಕರನ್ನು ರವಾನಿಸಿ ವಿಧ್ವಂಸಕ ಕೃತ್ಯಗಳನ್ನು ನಡೆಸುತ್ತಿದ್ದ ಪಾಕಿಸ್ತಾನ ಇದೀಗ ರಾಜತಾಂತ್ರಿಕ ಉದ್ದೇಶಕ್ಕಾಗಿ ಸ್ಥಾಪನೆಯಾಗಿರುವ ತನ್ನ ಹೈಕಮಿಷನ್ ಕಚೇರಿಯನ್ನೇ ಆ ಕಾರ್ಯಕ್ಕೆ ಬಳಸಿಕೊಂಡಿರುವುದು ಆತಂಕಕ್ಕೆ ಕಾರಣವಾಗಿದೆ. 

ಭಯೋತ್ಪಾದಕ ಹಾಗೂ ಪ್ರತ್ಯೇಕತಾವಾದಿ ಚಟುವಟಿಕೆಗಳ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಸಮರ ಸಾರಲು ಸಂಚು ರೂಪಿಸಿದ ಆರೋಪ ಸಂಬಂಧ ಪ್ರತ್ಯೇಕತವಾದಿಗಳಾದ ಯಾಸಿನ್ ಮಲಿಕ್, ಆಸಿಯಾ ಅಂದ್ರಾ ಬಿ, ಮಸರತ್ ಆಲಂ, ಶಬೀರ್ ಅಹಮದ್ ಶಾ ಹಾಗೂ ಮಾಜಿ ಶಾಸಕ ಅಬ್ದುಲ್ ರಶೀದ್ ಶೇಖ್ ವಿರುದ್ಧ ಈ ಆರೋಪಪಟ್ಟಿಯನ್ನು ಹೆಚ್ಚುವರಿ ಸೆಷನ್ಸ್ ನ್ಯಾಯಾಲಯಕ್ಕೆ ಶುಕ್ರವಾರ ಸಲ್ಲಿಕೆ ಮಾಡಲಾಗಿದೆ. 

ರಾಜತಾಂತ್ರಿಕ ಉದ್ದೇಶಕ್ಕೆಂದು ಕಾರ್ಯನಿರ್ವಹಿಸಬೇಕಾದ ದೆಹಲಿಯಲ್ಲಿನ ಪಾಕಿಸ್ತಾನ ಹೈಕಮಿಷನ್ ಕಚೇರಿಯು ಪ್ರತ್ಯೇಕತಾವಾದಿ ಚಟುವಟಿಕೆಗಳನ್ನು ಬೆಂಬಲಿಸಿದೆ. ಅಲ್ಲದೆ, ವಿವಿಧ ಮಾರ್ಗಗಳ ಮೂಲಕ ಹಣ ವರ್ಗಾವಣೆ ಮಾಡಿದೆ. ಕಾಶ್ಮೀರದಲ್ಲಿ ಅಶಾಂತಿ ಸೃಷ್ಟಿಸಲು ಕೆಲವೊಂದು ನಿರ್ದೇಶನಗಳನ್ನು ನೀಡಿರುವುದು ಸ್ಪಷ್ಟವಾಗಿದೆ ಎಂಬ ಮಾಹಿತಿ ಆರೋಪಪಟ್ಟಿಯಲ್ಲಿದೆ. 

ಯಾಸಿನ್ ಮಲಿಕ್ ಹಾಗೂ ಶಬೀರ್ ಶಾ ಅವರ ಇ-ಮೇಲ್ ಖಾತೆಗಳಿಂದ ಕೆಲವೊಂದು ವಿವರ ಸಿಕ್ಕಿದ್ದು, ಪಾಕಿಸ್ತಾನ ಹಾಗೂ ಇನ್ನಿತರೆ ದೇಶಗಳಿಂದ ಹಣ ಬಂದಿರುವುದನ್ನು ಅವು ದೃಢೀಕರಿಸಿವೆ ಎಂದು ಉಲ್ಲೇಖಿಸಲಾಗಿದೆ. ಕಾಶ್ಮೀರದಲ್ಲಿ ಅಶಾಂತಿ ಹಾಗೂ ತೀವ್ರವಾದ ಸೃಷ್ಟಿಗೆ ಹವಾಲಾ ಮೂಲಕ ವಿದೇಶಗಳಿಂದ ಯಾಸಿನ್ ಮಲಿಕ್ ಹಣ ಸ್ವೀಕರಿಸಿರುವುದೂ ಕೂಡ ಪತ್ತೆಯಾಗಿದೆ ಎಂಬ ಮಾಹಿತಿ ಆರೋಪಪಟ್ಟಿಯಲ್ಲಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com