ರಾಮ ಜನ್ಮಭೂಮಿ ಕುರಿತ ಸುಪ್ರೀಂ ತೀರ್ಪಿಗೆ ದಿನಗಣನೆ: ಅಯೋಧ್ಯೆಯಲ್ಲಿ ಭದ್ರತೆ ಹೆಚ್ಚಳ!

ರಾಮ ಜನ್ಮಭೂಮಿ ಹಾಗೂ ಬಾಬರಿ ಮಸೀದಿ ವಿವಾದ ಕುರಿತಂತೆ ಸುಪ್ರೀಂ ಕೋರ್ಟ್ ತೀರ್ಪಿಗೆ ದಿನಗಣನೆ ಹಾಗೂ ದಸರಾ ಹಬ್ಬ ನಡೆಯುತ್ತಿರುವುದರಿಂದ ಹೈ ಅಲರ್ಟ್ ಘೋಷಿಸಲಾಗಿದೆ.
ಅಯೋಧ್ಯೆ
ಅಯೋಧ್ಯೆ

ನವದೆಹಲಿ: ರಾಮ ಜನ್ಮಭೂಮಿ ಹಾಗೂ ಬಾಬರಿ ಮಸೀದಿ ವಿವಾದ ಕುರಿತಂತೆ ಸುಪ್ರೀಂ ಕೋರ್ಟ್ ತೀರ್ಪಿಗೆ ದಿನಗಣನೆ ಹಾಗೂ ದಸರಾ ಹಬ್ಬ ನಡೆಯುತ್ತಿರುವುದರಿಂದ ಹೈ ಅಲರ್ಟ್ ಘೋಷಿಸಲಾಗಿದೆ. 

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಹೆಚ್ಚುವರಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ದುರ್ಗಾ ಪೂಜಾ ಹಾಗೂ ದಸರಾ ಮೆರವಣಿಗೆ ವೇಳೆ ಡ್ರೋನ್ ಕಣ್ಗಾವಲು ಇಡಲಾಗಿದೆ ಎಂದರು. 

ಸೋಮವಾರದಿಂದ ದುರ್ಗಾ ವಿಗ್ರಹ ಮೆರವಣಿಗೆ ಹಾಗೂ ದಸರಾ ಆಚರಣೆಗಳು ಪ್ರಾರಂಭವಾಗಲಿದ್ದು ವಿವಿಧ ರಾಮ್ ಲೀಲಾಗಳು ದೀಪಾವಳಿ ತಿಂಗಳವರೆಗೆ ಮುಂದುವರಿಯಲಿವೆ. ದೀಪಾವಳಿಯ ಮುನ್ನಾದಿನ ರಾಜ್ಯ ಸರ್ಕಾರ ಆಯೋಜಿಸುತ್ತಿರುವ ಮೂರು ದಿನಗಳ ದಿಪೋತ್ಸವ ಕಾರ್ಯಕ್ರಮದಲ್ಲಿ ಸಹ ಹೆಚ್ಚಿನ ಪ್ರಮಾಣದಲ್ಲಿ ಜನ ಸೇರಲಿದ್ದಾರೆ ಎಂದು ತಿಳಿಸಿದ್ದಾರೆ. 

ಅಯೋಧ್ಯೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುವುದರಿಂದ ಎಲ್ಲ ಹೋಟೆಲ್, ಅತಿಥಿ ಗೃಹ, ಧರ್ಮಶಾಲೆ, ವಸತಿ ಗೃಹ, ಹಾಸ್ಟೆಲ್ ಹಾಗೂ ಹೋಮ್ ಸ್ಟೇಗಳನ್ನು ಪರಿಶೀಲಿಸುವಂತೆ ಜಿಲ್ಲಾ ಪೊಲೀಸರಿಗೆ ಹಾಗೂ ಸ್ಥಳೀಯ ಗುಪ್ತಚರ ಘಟಗಳಿಗೆ ನಿರ್ದೇಶಿಸಲಾಗಿದೆ. 

ಇನ್ನು ನವೆಂಬರ್ ನಲ್ಲಿ ರಾಮ ಜನ್ಮಭೂಮಿ ವಿವಾದದ ಕುರಿತ ಸುಪ್ರೀಂ ಕೋರ್ಟ್ ತೀರ್ಪು ಹೊರಬರುವ ಸಾಧ್ಯತೆ ಇರುವುದರಿಂದ ಹೆಚ್ಚುವರಿ ಭದ್ರತೆ ಒದಗಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com