ಒಂದೇ ಕುಟುಂಬದ ಆರು ಮಂದಿ ಹತ್ಯೆ: ಸರಣಿ ಹಂತಕಿ ಬಂಧನ

ಗಂಡ ಸೇರಿದಂತೆ ಒಂದೇ ಕುಟುಂಬದ ಆರು ಮಂದಿಯನ್ನು ದಾರುಣವಾಗಿ ಹತ್ಯೆ ಮಾಡಿದ್ದ ಸರಣಿ ಹಂತಕಿಯನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ತಿರುವನಂತಪುರಂ: ಗಂಡ ಸೇರಿದಂತೆ ಒಂದೇ ಕುಟುಂಬದ ಆರು ಮಂದಿಯನ್ನು ದಾರುಣವಾಗಿ ಹತ್ಯೆ ಮಾಡಿದ್ದ ಸರಣಿ ಹಂತಕಿಯನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ.

ತನ್ನದೇ ಕುಟುಂಬಸ್ಥರನ್ನು ಹಂತ ಹಂತವಾಗಿ ಕೊಲ್ಲುತ್ತಾ ಆಸ್ತಿಯನ್ನು ಅನುಭವಿಸುವ ಪ್ಲಾನ್ ಮಾಡಿದ್ದ ಹಂತಕಿ ಜೂಲಿಯ ಕನಸಿಗೆ ಪೊಲೀಸರು ತಣ್ಣೀರು ಹಾಕಿದ್ದಾರೆ. 2002ರಿಂದ 2016ರ ವರೆಗೆ ಈ ಕೊಲೆಗಳು ನಡೆದಿವೆ.

ಹಂತಕಿ ಜೂಲಿ ಮತ್ತು ಆಕೆಯ ಎರಡನೇ ಗಂಡ ಶಜು ಇದೀಗ ಪೊಲೀಸರ ಅತಿಥಿಗಳಾಗಿದ್ದಾರೆ. ಈ ಇಬ್ಬರಿಗೆ ಸೈನೈಡ್ ಪೂರೈಸುತ್ತಿದ್ದ ಮತ್ತಿಬ್ಬರನ್ನು ಕೂಡ ಬಂಧಿಸಲಾಗಿದೆ.

ಕೇರಳದ ಕೊಜ್ಹಿಕೊಡೆ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, ಶನಿವಾರ ಪೊಲೀಸರು ಹಂತಕಿ ಜೂಲಿಯನ್ನು ಬಂಧಿಸಿದ್ದಾರೆ. ಕ್ಯಾಥೊಲಿಕ್ ಕುಟುಂಬದ 6 ಮಂದಿಯನ್ನು ಜೂಲಿ ಕೊಲೆ ಮಾಡಿದ್ದಾಳೆ. 

ಅತ್ತೆ ಅಣ್ಣಮ್ಮ ಥಾಮಸ್ (57)  ಮಾವ ಟಾಮ್ ಥಾಮಸ್  ಪತಿ ರಾಯ್ ಥಾಮಸ್ ನನ್ನು ಜೂಲಿ ಕೊಂದಿದ್ದಾಳೆ.

ಅತ್ತೆ ಅಣ್ಣಮ್ಮ ಥಾಮಸ್ 2002ರಲ್ಲಿ ಏಕಾಏಕಿ ಕುಸಿದು ಬಿದ್ದು ಸಾವನ್ನಪ್ಪಿದ್ದರು. ಈ ವೇಳೆ ಅವರ ಸಾವನ್ನ ಸಹಜಸಾವು ಎಂದು ತಿಳಿದ ಕುಟುಂಬಸ್ಥರು ಅಂತ್ಯಕ್ರಿಯೆ ನಡೆಸಿದ್ದರು. 6 ವರ್ಷದ ಬಳಿಕ ಅಣ್ಣಮ್ಮ ಥಾಮಸ್ ಪತಿ ಟಾಮ್ ಥಾಮಸ್ (66) ಹೃದಯಘಾತದಿಂದ ಸಾವನ್ನಪ್ಪಿದ್ದರು.

2001 ರಲ್ಲಿ ದಂಪತಿಯ ಪುತ್ರ ರಾಯ್ ಥಾಮಸ್ (40) ಕೂಡ ಇದೇ ರೀತಿ ಮೃತ ಪಟ್ಟಿದ್ದರು. ಈ ವೇಳೆ ಅವರನ್ನು ವಿಷ ಉಣಿಸಿ ಕೊಲೆ ಮಾಡಿರುವುದು ಬೆಳಕಿಗೆ ಬಂದಿತ್ತು. ಆ ಬಳಿಕ ಅಣ್ಣಮ್ಮ ಸಹೋದರ ಮ್ಯಾಥ್ಯೂ ಮಂಜಡಿಯಿಲ್ (67) 2014 ರಲ್ಲಿ ಸಾವನ್ನಪ್ಪಿದ್ದರು. ಎಲ್ಲರನ್ನು ಒಂದೇ ಸ್ಥಳದಲ್ಲಿ ಅಂತ್ಯಕ್ರಿಯೆ ನಡೆಸಲಾಗಿತ್ತು.

2016 ರಲ್ಲಿ ಇದೇ ಕುಟುಂಬದ ಸಂಬಂಧಿಯ 2 ವರ್ಷದ ಮಗಳು ಅಲ್ಫೋನ್ಸ ಕೂಡ ಹೃದಯಾಘಾತದಿಂದ ಸಾವನ್ನಪ್ಪಿದ್ದಳು. ಇದಾದ ಕೆಲ ತಿಂಗಳ ಅಂತರದಲ್ಲೇ ಅಲ್ಫೋನ್ಸ ತಾಯಿ 27 ವರ್ಷದ ಸಿಲಿ ಕೂಡ ಸಾವನ್ನಪ್ಪಿದ್ದರು. 

ಇತ್ತ ಪತಿ ಮರಣದ ಬಳಿಕ ಪತ್ನಿ ಜೂಲಿ ಮೃತ ಸಿಲಿ ಪತಿಯನ್ನು ಮದುವೆಯಾಗಿ ಕುಟುಂಬ ಅಸ್ತಿ ತಮಗೆ ಸೇರಬೇಕು ಎಂದು ಕಾನೂನಿನ ಅನ್ವಯ ಮನವಿ ಸಲ್ಲಿಸಿದ್ದರು. 

ಆದರೆ ಟಾಮ್ ಥಾಮಸ್ ಕಿರಿಯ ಪುತ್ರನ ಮಗ ಮೆಜೊ ಇದಕ್ಕೆ ಆಕ್ಷೇಪಣೆ ಸಲ್ಲಿಸಿ ಕುಟುಂಬ ಸರಣಿ ಸಾವಿನ ಕುರಿತು ಕ್ರೈಂ ಬ್ರಾಂಚ್‍ಗೆ ದೂರು ನೀಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com